ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ

ನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಹಾಕಲು ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭವಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ಮಾಹಿತಿ ನೀಡಿದ್ದಾರೆ.

ನೈತಿಕ ಪೊಲೀಸ್​ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಕಾರ್ಯಾರಂಭ
ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್
Follow us
ರಮೇಶ್ ಬಿ. ಜವಳಗೇರಾ
|

Updated on:Jun 15, 2023 | 1:43 PM

ಮಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ನೈತಿಕ ಪೊಲೀಸ್‌ಗಿರಿಗೆ(moral policing) ಕಡಿವಾಣ ಹಾಕಲು ನಿರ್ಧಾರ ಮಾಡಿದೆ. ಅದರಂತೆ ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರಿನಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ (anti communal wing ) ಕಾರ್ಯಾರಂಭವಾಗಿದೆ. ಸಿಸಿಬಿ ವಿಭಾಗದ ಎಸಿಪಿ ನೇತೃತ್ವದಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಮಂಗಳೂರು ಕಮಿಷನರೆಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಲಿದ್ದು, ಸಿಎಸ್​ವಿ ಇನ್ಸ್​ಪೆಕ್ಟರ್ ಸೇರಿದಂತೆ ಐವರು ಸಿಬ್ಬಂದಿಯೊಂದಿಗೆ ಆ್ಯಂಟಿ ಕಮ್ಯೂನಲ್ ವಿಂಗ್ ಕಾರ್ಯಾರಂಭಿಸಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್​ ಜೈನ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಗೃಹ ಸಚಿವ ಡಾ ಜಿ ಪರಮೇಶ್ವರ್

ಮಂಗಳೂರು ನಗರದ ವಿಶೇಷ ಘಟಕದ (ಸಿಎಸ್‌ಬಿ) ಪೊಲೀಸ್ ನಿರೀಕ್ಷಕರು ಗೂ ಸಿಬ್ಬಂದಿ “ಆ್ಯಂಟಿ‌ ಕಮ್ಯುನಲ್ ವಿಂಗ್” ನ ಸದಸ್ಯರಾಗಿರುತ್ತಾರೆ. ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ಹಾಗೂ ಕೋಮು ಗಲಭೆಗಳನ್ನು ತಡೆಗಟ್ಟಲು ಆ್ಯಂಟಿ‌ ಕಮ್ಯುನಲ್ ವಿಂಗ್ ರಚನೆ ಮಾಡಲಾಗಿದೆ.

ಇನ್ನು ಈ ಬಗ್ಗೆ ಕುಲದೀಪ್ ಕುಮಾರ್​ ಜೈನ್ ಪ್ರತಿಕ್ರಿಯಿಸಿದ್ದು,  ಮಂಗಳೂರು ನಗರದ ಸಿಸಿಬಿ ಎಸಿಪಿ ಉಸ್ತುವಾರಿಯಲ್ಲಿ “ಆ್ಯಂಟಿ‌ ಕಮ್ಯುನಲ್ ವಿಂಗ್” ತಂಡ ರಚನೆ ಮಾಡಲಾಗಿದ್ದು, ನಗರದಲ್ಲಿ ನಡೆಯಬಹುದಾದ ನೈತಿಕ ಪೊಲೀಸ್‌ಗಿರಿ ಸಮಸ್ಯೆಯನ್ನು ನಿಭಾಯಿಸುವುದು ಇದರ ಕರ್ತವ್ಯವಾಗಿದೆ. ಈ ಹಿಂದೆ ವರದಿಯಾಗಿರುವ ಕೋಮು ವಿಚಾರಕ್ಕೆ ಸಂಬಂಧಿಸಿದ ಎಲ್ಲಾ ಕೊಲೆ, ಕೊಲೆ ಪ್ರಯತ್ನ, ದೊಂಬಿ ಪ್ರಕರಣಗಳು. ನೈತಿಕ ಪೊಲೀಸ್‌ಗಿರಿ ಮತ್ತು ಗೋವುಗಳ ಕಳ್ಳತನ, ಅಕ್ರಮ ಗೋ-ಸಾಗಾಟ, ಗೋ-ವಧೆ ಮುಂತಾದ ಪ್ರಕರಣಗಳನ್ನು ಈ ವಿಂಗ್‌ ಪರಿಶೀಲನೆ ನಡೆಸಲಿದೆ. ಅವುಗಳಲ್ಲಿನ ಆರೋಪಿತರುಗಳ ಚಲನವಲನಗಳ ಬಗ್ಗೆ ಪ್ರತಿನಿತ್ಯ ನಿಗಾವಹಿಸುವುದು. ಅವರುಗಳ ವಿರುದ್ಧ ಭದ್ರತಾ ಕಾಯ್ದೆಯಡಿ ಮುಚ್ಚಳಿಕೆ ಪಡೆದುಕೊಳ್ಳುವುದು. ಕೋಮು ವಿಚಾರಕ್ಕೆ ಸಂಬಂಧಪಟ್ಟಂತೆ ಕಾರ್ಯಾಚರಿಸುತ್ತಿರುವ ಎಲ್ಲಾ ಸಂಘಟನೆಗಳ ಬಗ್ಗೆ ಮಾಹಿತಿಯನ್ನ ಆ್ಯಂಟಿ‌ ಕಮ್ಯುನಲ್ ವಿಂಗ್ ಸಂಗ್ರಹ ಮಾಡಲಿದೆ ಎಂದು ಮಾಹಿತಿ ನೀಡಿದರು.

ಯಾವುದೇ ಧರ್ಮದ ಸಂಘಟನೆಗಳು ಹಾಗೂ ಗುಂಪುಗಳು ಧರ್ಮದ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುವ ಎಚ್ಚರಿಕೆಯನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದರು.

ಕೋಮು ಆಧಾರಿತ ನೈತಿಕ ಪೊಲೀಸ್ ಗಿರಿಯನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದರು. ಮಂಗಳೂರು ಭೇಟಿ ವೇಳೆ ಮಾತನಾಡಿದ್ದ ಪರಮೇಶ್ವರ್, ಮಂಗಳೂರು ಕಮೀಷನೇಟರ್ ವ್ಯಾಪ್ತಿಯಲ್ಲಿ ನೂತನ ಪಡೆಯಾದ ಆ್ಯಂಟಿ ಕಮ್ಯೂನಲ್ ವಿಂಗ್ ಸ್ಥಾಪಿಸುವ ಅಗತ್ಯವಿದೆ ಎಂದಿದ್ದರು. ಆದರೆ ಇದು ರಾಜ್ಯಾದ್ಯಂತ ಅಥವಾ ಇತರ ಕೋಮು ಸೂಕ್ಷ್ಮ ಜಿಲ್ಲೆಗಳಲ್ಲಿ ಕೂಡಾ ಆರಂಭ ಮಾಡಲಾಗುತ್ತಾ ಎಂಬುವುದರ ಕುರಿತಾಗಿ ಯಾವುದೇ ಸ್ಪಷ್ಟತೆ ಇನ್ನೂ ಸಿಕ್ಕಿಲ್ಲ.

Published On - 1:31 pm, Thu, 15 June 23

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್