ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ, ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆ ಇಲ್ಲ: ಸತೀಶ್ ಕುಂಪಲ

ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒಪ್ಪಿಗೆ ಸೂಚಿಸಿದರೂ ಪುತ್ತೂರಿನ ಸ್ಥಳೀಯ ಬಿಜೆಪಿ ನಾಯಕರು ಹಾಗೂ ಬೆಂಬಲಿಗರು ಭಾರೀ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರಿಗೆ ಬೆದರಿಕೆ ಹಾಕಲಾಗಿದೆ ಎಂದು ಹೇಳಲಾಗುತ್ತಿದೆ. ಸಭೆ ಬಳಿಕ ಪುತ್ತಿಲ ಪಕ್ಷ ಸೇರ್ಪಡೆ ಬಗ್ಗೆ ಮಾಧ್ಯದ ಮೇಲೆ ಗೂಬೆ ಕೂರಿಸಿದ್ದ ಕುಂಪಲ ಇದೀಗ ಪುತ್ತಿಲ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ.

ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ, ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆ ಇಲ್ಲ: ಸತೀಶ್ ಕುಂಪಲ
ಪುತ್ತಿಲ ಬಿಜೆಪಿ ಸೇರ್ಪಡೆ ಆಗಿದೆ, ಮಂಗಳೂರಿನಲ್ಲಿ ಸೇರ್ಪಡೆಯಂತ ಪ್ರಕ್ರಿಯೆ ಇಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ
Follow us
Jagadish PB
| Updated By: Rakesh Nayak Manchi

Updated on:Mar 16, 2024 | 12:09 PM

ಮಂಗಳೂರು, ಮಾ.16: ದಕ್ಷಿಣ ಕನ್ನಡ ಜಿಲ್ಲೆಯ ಪ್ರಬಲ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಬಿಜೆಪಿ (BJP) ಸೇರ್ಪಡೆ ವಿಚಾರದಲ್ಲಿ ಗೊಂದಲ ಉಂಟಾಗಿದೆ. ನಿನ್ನೆ ಪುತ್ತೂರಿನಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರ ಬೆದರಿಕೆ ನಂತರ ಪುತ್ತಿಲ ಪಕ್ಷ ಸೇರ್ಪಡೆ ಮಾಧ್ಯಮದ ವರದಿಯಷ್ಟೇ ಎಂದು ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹೇಳಿ ಉಲ್ಟಾ ಹೊಡೆದಿದ್ದದರು. ಇದೀಗ ಪುತ್ತಿಲ ಅವರು ಬೆಂಗಳೂರಿನಲ್ಲೇ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದು ಹೇಳಿದ್ದಾರೆ. ಇದು ಪುತ್ತಿಲ ಪಕ್ಷ ಸೇರ್ಪಡೆ ವಿಚಾರದಲ್ಲಿ ಸ್ವತಃ ಜಿಲ್ಲಾಧ್ಯಕ್ಷರೇ ಗೊಂದಲಕ್ಕೊಳಗಾದಂತೆ ಕಾಣುತ್ತಿದೆ.

ಅರುಣ್ ಪುತ್ತಿಲ ಅವರು ಬೆಂಗಳೂರಿನಲ್ಲೇ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿಯಾಗಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷರ ಜೊತೆ ಮಾತುಕತೆ ನಡೆದು ಸೇರ್ಪಡೆ ಮಾಡಲಾಗಿದೆ. ಇನ್ನು ಮತ್ತೆ ಮಂಗಳೂರಿನಲ್ಲಿ ಸೇರ್ಪಡೆಯಂಥ ಪ್ರಕ್ರಿಯೆಗಳು ಇಲ್ಲ ಎಂದರು.

ಕೆಲ ಕಾರ್ಯಕರ್ತರು ಹಾಗೂ ಕೆಲವರಲ್ಲಿ ಇಂಥಹ ಗೊಂದಲ ಇರುವುದು ಸಹಜ. ಆದರೆ ರಾಜ್ಯಾಧ್ಯಕ್ಷರೇ ನಮಗೆ ಸುಪ್ರೀಂ, ಅವರ ಸೂಚನೆಯಂತೆ ಪುತ್ತಿಲ ಇರುತ್ತಾರೆ. ಅರುಣ್ ಪುತ್ತಿಲ ಲೋಕಸಭೆಯ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತಾರೆ. ಈ ವಿಚಾರದಲ್ಲಿ ಯಾವುದೇ ಗೊಂದಲ ಬೇಡ, ಪುತ್ತಿಲ ಕೂಡ ಒಪ್ಪಿದ್ದಾರೆ ಎಂದರು.

ಇದನ್ನೂ ಓದಿ: ಪುತ್ತೂರು ಬಿಜೆಪಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಕುಂಪಲಗೆ ಅವಾಚ್ಯ ಬೈಗುಳ; ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ ಹಾಕಿದ ಕಟೀಲ್ ಟೀಂ! ಇನ್​ಸೈಡ್ ಸ್ಟೋರಿ ಇಲ್ಲಿದೆ

ಪುತ್ತಿಲ ಪರಿವಾರ ವಿಸರ್ಜನೆ ಮಾಡಿಕೊಂಡೇ ಬಿಜೆಪಿಯಲ್ಲೇ ಕೆಲಸ ಮಾಡುತ್ತಾರೆ. ಪುತ್ತೂರು ಬಿಜೆಪಿಯಲ್ಲಿ ಯಾವುದೇ ಅಸಮಾಧಾನ ಇಲ್ಲ. ಪುತ್ತಿಲ ಪಕ್ಷೇತರ ಸ್ಪರ್ಧೆ ವೇಳೆ ಹಲವು ಸಂಘರ್ಷ ಆಗಿದೆ. ಈ ವಿಚಾರದಲ್ಲಿ ಸರಿ ಪಡಿಸುವ ಕೆಲಸ ಆಗುತ್ತಿದೆ, ಬಹುತೇಕ ಸರಿಯಾಗಿದೆ‌. ಸಣ್ಣ ಸಣ್ಣ ಗೊಂದಲಗಳು‌ ಇರೋದು ಸಹಜ, ಸರಿಪಡಿಸಲಾಗಿದೆ. ಆದರೆ ಪುತ್ತಿಲ ಬಿಜೆಪಿಗೆ‌ ಬರಬಾರದು ಅಂತ ಯಾರೂ ಹೇಳಿಲ್ಲ ಎಂದರು.

ಪಕ್ಷ ಸೇರುವ ಬಗ್ಗೆ ರಾಜ್ಯಾಧ್ಯಕ್ಷರ ಎದುರುಗಡೆ ಸಹಮತ ವ್ಯಕ್ತಪಡಿಸಿ ಪುತ್ತಿಲ ಅವರು ಬಂದಿದ್ದಾರೆ. ಹೀಗಿರುವಾಗ ಮತ್ತೆ ಧ್ವಜ ಕೊಟ್ಟು ಸ್ವಾಗತ ಮಾಡಬೇಕು ಅಂತೇನಿಲ್ಲ. ರಾಜ್ಯಾಧ್ಯಕ್ಷರಿಗಿಂತ ನಾವು ದೊಡ್ಡವರಲ್ಲ, ಅವರು ಹೇಳಿದ ಮೇಲೆ ಮುಗೀತು. ಅರುಣ್ ಪುತ್ತಿಲ ಬಿಜೆಪಿ ಜೊತೆ ಕೆಲಸ ಮಾಡಲಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sat, 16 March 24

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ