ಅರುಣ್ ಕುಮಾರ್ ಪುತ್ತಿಲ ಬಂಡಾಯದ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಹೀಗಿದೆ ನೋಡಿ!

ಹಿಂದೂ ಮುಖಂಡ ಹಾಗೂ ಪುತ್ತಿಲ ಪರಿವಾರದ ಅರುಣ್ ಕುಮಾರ್ ಪುತ್ತಿಲ ಬಂಡಾಯದ ಬಗ್ಗೆ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷ ತಮಗೆ ಟಿಕೆಟ್ ಕೊಟ್ಟರೆ ಈ ಬಾರಿಯೂ ಗೆಲ್ಲಲಿದ್ದೇನೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಬಂಡಾಯದ ಬಗ್ಗೆ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ಹೀಗಿದೆ ನೋಡಿ!
ನಳಿನ್ ಕುಮಾರ್ ಕಟೀಲ್ & ಅರುಣ್ ಕುಮಾರ್ ಪುತ್ತಿಲ
Follow us
| Updated By: ಗಣಪತಿ ಶರ್ಮ

Updated on: Feb 29, 2024 | 2:48 PM

ಮಂಗಳೂರು, ಫೆಬ್ರವರಿ 29: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ನೇತೃತ್ವದ ಪುತ್ತಿಲ ಪರಿವಾರ (Puthila Parivara) ಸಂಘಟನೆ ಬಂಡಾಯ ಸಾರಿದ ಬೆನ್ನಲ್ಲೇ ಆ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಪ್ರತಿಕ್ರಿಯೆ ನೀಡಿದ್ದಾರೆ. ಪುತ್ತಿಲ ಪರಿವಾರ ಎಂಬುದು ಒಂದು ಸ್ವತಂತ್ರ ಸಂಸ್ಥೆ. ಆ ಸಂಸ್ಥೆಗೆ ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ ಎಂದು ಕಟೀಲ್ ಹೇಳಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಅವರನ್ನು ಮನವೊಲಿಸುವ ಪ್ರಯತ್ನವನ್ನು ಬಿಜೆಪಿ ನಾಯಕರು ಮಾಡಿದ್ದಾರೆ. ಭಾರತೀಯ ಜನತಾ ಪಕ್ಷವು ಬಹಳ ವರ್ಷಗಳ ಹೋರಾಟದಿಂದ ಈ ಮಟ್ಟಕ್ಕೆ ಬೆಳೆದಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನ್ನು ಎದುರಿಸಿ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಪಕ್ಷಕ್ಕೆ ಎದುರಾಳಿ ಎಂಬ ಪ್ರಶ್ನೆಯೇ ಇಲ್ಲ ಎಂದು ನಳಿನ್ ಕುಮಾರ್ ಕಟೀಲ್ ಅಭಿಪ್ರಾಯ ಪಟ್ಟಿದ್ದಾರೆ.

ಈ ಬಾರಿಯೂ ಗೆಲುವು ಸಾಧಿಸುವೆ ಎಂದ ಕಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗೆ ನಿಲ್ಲುವ ಹಕ್ಕು ಎಲ್ಲರಿಗೂ ಇದೆ. ಪ್ರತಿಬಾರಿಯೂ ಚುನಾವಣೆ ಹತ್ತಿರ ಬಂದಾಗ ಹತ್ತಾರು ಸಮಸ್ಯೆಗಳು ಉದ್ಭವಿಸುತ್ತವೆ. ಆ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಬಿಜೆಪಿ ಸಾಧನೆ ಮಾಡುತ್ತಿದೆ. ರಾಮಮಂದಿರ ನಿರ್ಮಾಣವಾದ ಬಳಿಕ ಬಿಜೆಪಿ ಪರವಾದ ವಾತವರಣ ಅದ್ಭುತವಾಗಿದೆ. ಹಿಂದುತ್ವ,ರಾಷ್ಟ್ರವಾದ,ಅಭಿವೃದ್ಧಿ ವಿಚಾರವಾಗಿ ಜನ ಒಗ್ಗಟಾಗುತ್ತಾರೆ. ವಿಧಾನಸಭಾ ಚುನಾವಣೆಗೂ ಲೋಕಸಭಾ ಚುನಾವಣೆಗೂ ವ್ಯತ್ಯಾಸ ಇದೆ. ಆಗಿನ ಸಮಸ್ಯೆ ಬೇರೆ, ಈಗಿನ ವಿಚಾರ ಬೇರೆ. ಈ ಬಾರಿಯ ಚುನಾವಣೆಯಲ್ಲೂ ಭಾರೀ ಗೆಲುವು ಸಾಧಿಸುತ್ತೇನೆ. ಟಿಕೆಟ್ ಕೊಡುವುದು ಅಥವಾ ಬಿಡುವುದು ರಾಷ್ಟ್ರೀಯ ನಾಯಕರ ತೀರ್ಮಾನ. ಆ ತೀರ್ಮಾನಕ್ಕೆ ಕಾರ್ಯಕರ್ತನಾಗಿ ಬದ್ಧನಾಗಿದ್ದೇನೆ ಎಂದು ಕಟೀಲ್ ಹೇಳಿದ್ದಾರೆ.

ಪುತ್ತಿಲ ಪರಿವಾರವನ್ನು ಬಿಜೆಪಿ ಜೊತೆ ವಿಲೀನಗೊಳಿಸುವ ಕುರಿತು ಇತ್ತೀಚೆಗೆ ಮಾತುಕತೆಗಳು ನಡೆದಿದ್ದವು.. ಯಾವುದೇ ಷರತ್ತು ಇಲ್ಲದೆ ಪಕ್ಷಕ್ಕೆ ಸೇರ್ಪಡೆಯಾಗುವಂತೆ ಬಿಜೆಪಿ ನಾಯಕರು ಅರುಣ್ ಕುಮಾರ್ ಪುತ್ತಿಲ ಅವರಿಗೆ ಸೂಚಿಸಿದ್ದರು. ನಂತರ ಸಮಲೋಚನೆ ಸಭೆ ನಡೆಸಿದ್ದ ಪುತ್ತಿಲ ಪರಿವಾರ, ಅರುಣ್ ಕುಮಾರ್ ಅವರಿಗೆ ಪುತ್ತೂರು ಮಂಡಲ ಅಧ್ಯಕ್ಷ ಸ್ಥಾನ ನೀಡಬೇಕು. 3 ದಿನಗಳ ಒಳಗೆ ನಿರ್ಧಾರ ತಿಳಿಸಬೇಕು ಎಂದು ಬಿಜೆಪಿಗೆ ಗಡುವು ನೀಡಿತ್ತು. ಆದರೆ, ಇದಾಗ ವಾರವೇ ಕಳೆದರೂ ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಪುತ್ತಿಲ ಪರಿವಾರ ಬಂಡಾಯ ಸ್ಪರ್ಧೆಯ ನಿರ್ಧಾರ ಕೈಗೊಂಡಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್