ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ

Arun Kumar Puthila: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದ್ದು, ಅರುಣ್ ಪುತ್ತಿಲ ವಾಪಸ್ ಬಿಜೆಪಿ ಸೇರ್ಪಡೆಗೆ ಒಪ್ಪಿಕೊಂಡಿದ್ದಾರೆ. ಅದರಂತೆ ನಾಳೆಯೇ ಮಂಗಳೂರಿನಲ್ಲಿ ಪುತ್ತಿಲ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಅರುಣ್ ಕುಮಾರ್ ಪುತ್ತಿಲ ಜತೆಗಿನ ಸಂಧಾನ ಯಶಸ್ವಿ, ಹಿಂದೂ ಮುಖಂಡ ನಾಳೆ ಬಿಜೆಪಿ ಸೇರ್ಪಡೆ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 14, 2024 | 10:22 PM

ಬೆಂಗಳೂರು. ಮಂಗಳೂರು, (ಮಾರ್ಚ್ 14): ಲೋಕಸಭಾ ಚುನಾವಣೆ (Loksabha Elections 2024) ಸಂದರ್ಭದಲ್ಲಿ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ಜತೆಗಿನ ಬಿಜೆಪಿ ನಾಯಕರ ಸಂಧಾನ ಯಶಸ್ವಿಯಾಗಿದೆ. ಇಂದು(ಮಾರ್ಚ್ 14) ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸಂಧಾನ ಸಭೆ ನಡೆದಿದ್ದು, ಅರುಣ್ ಪುತ್ತಿಲ ಅವರನ್ನು ಮನವೊಲಿಸುವಲ್ಲಿ ಬಿಜೆಪಿ ನಾಯಕರು ಕೊನೆಗೂ ಯಶಸ್ವಿಯಾಗಿದ್ದು, ನಾಳೆ (ಮಾರ್ಚ್​ 15) ಅರುಣ್ ಪುತ್ತಿಲ ಅವರು ಮಂಗಳೂರಿನಲ್ಲಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಆನೆ ಬಲಬಂದಂತಾಗಿದೆ.

ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್  ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದ್ದು, ಇದೀಗ ಬಿಜೆಪಿಗೆ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯಿಂದ ಆರಂಭಗೊಂಡಿದ್ದ ಬಿಜೆಪಿ-ಪುತ್ತಿಲರ ನಡುವಿನ ಸಂಘರ್ಷ ಅಂತ್ಯವಾದಂತಾಗಿದೆ.

ಇನ್ನು ಪ್ರಮುಖವಾಗಿ ಯಾವುದೇ ಷರತ್ತು ಇಲ್ಲದೆ ಬಿಜೆಪಿ ಸೇರ್ಪಡೆಯಾಗಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದ್ರೆ, ಪಕ್ಷ ಪುತ್ತಿಲ ಅವರಿಗೆ ಯಾವ ಹುದ್ದೆ ನೀಡುತ್ತದೆ ಎನ್ನುವುದೇ ಕುತೂಹಲ ಮೂಡಿಸಿದೆ. ಜಿಲ್ಲೆಯ ಏಳು ಮಂಡಲಗಳ ಪೈಕಿ ಬಾಕಿ ಇರುವ ಪುತ್ತೂರು ಮಂಡಲ ಅಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಗಳಿವೆ.

ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೆಲ ನಾಯಕರ ನಡೆಗೆ ಅಸಮಾಧಾನಗೊಂಡಿದ್ದ ಪುತ್ತಿಲ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಪಕ್ಷೇತರವಾಗಿ ಸ್ಪರ್ಧಿಸಿ ಬಿಜೆಪಿ ಸೋಲಿಗೆ ಕಾರಣರಾಗಿದ್ದರು. ಇದೀಗ ಲೋಕಸಭಾ ಚುನಾವಣೆಯಲ್ಲೂ ಸಹ ದಕ್ಷಿಣ ಕನ್ನಡ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದರು. ಆದ್ರೆ, ಇದೀಗ ನಳಿನ್ ಕುಮಾರ್ ಕಟೀಲ್ ಬದಲಿಗೆ ಕ್ಯಾ‌.ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್ ಸಿಕ್ಕಿದ್ದರಿಂದ ಪುತ್ತಿಲ ಸೈಲೆಂಟ್ ಆಗಿದ್ದರು. ಅಲ್ಲದೇ ಕ್ಯಾ‌.ಬ್ರಿಜೇಶ್ ಚೌಟಾ ಸೇರಿದಂತೆ ಕೆಲ ಕರಾವಳಿ ಭಾಗದ ಬಿಜೆಪಿ ನಾಯಕರು ಅರುಣ್ ಪುತ್ತಿಲ ಅವರನ್ನು ಕರೆಯಿಸಿ ಮಾತುಕತೆ ನಡೆಸಿ ಮನವೊಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Thu, 14 March 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್