ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ

ಲೋಕಸಭಾ ಚುನಾವಣೆಗೆ(Lok Sabha election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ(BJP) ಚುನಾವಣಾ ಕಚೇರಿಯಲ್ಲಿ ಇಂದು(ಮಾ.17) ಸಂಸದ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪದಾಧಿಕಾರಿಗಳ ಸಭೆ ನಡೆಸಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ಆರೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ; ತಯಾರಾಗಿ ಎಂದು ಕಾರ್ಯಕರ್ತರಿಗೆ ನಳಿನ್ ಸೂಚನೆ
ನಳಿನ್​ ಕುಮಾರ್​ ಕಟೀಲ್​​
Edited By:

Updated on: Mar 17, 2024 | 10:15 PM

ದಕ್ಷಿಣ ಕನ್ನಡ, ಮಾ.17: ಲೋಕಸಭಾ ಚುನಾವಣೆಗೆ(Lok Sabha election) ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣೆ ತಯಾರಿ ಬಗ್ಗೆ ಮಂಗಳೂರು ಬಿಜೆಪಿ(BJP) ಚುನಾವಣಾ ಕಚೇರಿಯಲ್ಲಿ ಇಂದು(ಮಾ.17) ಸಂಸದ ನಳಿನ್​ ಕುಮಾರ್​ ಕಟೀಲ್​ (Nalin Kumar Kateel) ಪದಾಧಿಕಾರಿಗಳ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ‘ಹಿಂದೆಂದಿಗಿಂತ ಹೆಚ್ಚಿನ ಅಂತರದಲ್ಲಿ ಬ್ರಿಜೇಶ್​ ಚೌಟರನ್ನು ಗೆಲ್ಲಿಸುತ್ತೇವೆ ಎಂದು ಹೇಳಿದರು.

ವಿಧಾನಸಭೆ ಚುನಾವಣೆಗೆ ತಯಾರಾಗಿ ಎಂದು ಕಾರ್ಯಕರ್ತರಿಗೆ ಕಟೀಲ್ ಸೂಚನೆ

ಲೋಕಸಭಾ ಚುನಾವಣೆ ಮುಗಿದ ಮೇಲೆ ‘ಮೇ’ ನಲ್ಲಿ ವಿಧಾನಸಭಾ ಚುನಾವಣೆ ಬರುತ್ತದೆ ತಯರಾಗಿ ಎಂದು ಪದಾಧಿಕಾರಿಗಳ ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕರ್ತರಿಗೆ ಸೂಚನೆ‌ ನೀಡಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಟೀಲ್, ‘ಲೋಕಸಭೆ ಚುನಾವಣೆ ಮುಗಿದ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ಬರುತ್ತದೆ. ಈ ಬಗ್ಗೆ ನಮಗೆ ಅತ್ಯಂತ ಸ್ಪಷ್ಟ ವಿಶ್ವಾಸವಿದೆ ಎಂದಿದ್ದಾರೆ.

ಇದನ್ನೂ ಓದಿ:​2024ರ ಲೋಕಸಭಾ ಚುನಾವಣೆ ಧರ್ಮ ಯುದ್ಧ ಇದ್ದಂತೆ; ಡಾ.ಮಂಜುನಾಥ್​

ಇನ್ನು ಇದೇ ವೇಳೆ ಶಿವಮೊಗ್ಗದಿಂದ ಕೆ.ಎಸ್​​.ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ವಿಚಾರ , ‘ಈಶ್ವರಪ್ಪ ಜೊತೆ ಮಾತುಕತೆ ಮಾಡುತ್ತಿದ್ದು, ಎಲ್ಲವೂ ಸರಿಹೋಗುತ್ತದೆ. ಜಿಲ್ಲೆಯಲ್ಲಿ ಒಂದು ರಾಜಕೀಯ ಪಾರ್ಟಿಗಳಲ್ಲಿ ಇರುವ ಸಮಸ್ಯೆ ಇದೆ. ವಿಧಾನಸಭಾ ಕ್ಷೇತ್ರದಲ್ಲಿ ಹತ್ತಕ್ಕೂ ಹೆಚ್ಚು ಸಮರ್ಥ ನಾಯಕರಿದ್ದಾರೆ. ಆದ್ದರಿಂದ ನಮ್ಮಲ್ಲಿ ನಾಯಕತ್ವದ ಗೊಂದಲ ಇದೆ. ಭಾರತಮಾತೆ ಹಾಗೂ ಮೋದಿಗಾಗಿ ಈ ಗೊಂದಲವೆಲ್ಲವನ್ನು ಬದಿಗಿಟ್ಟು ಕೆಲಸ ಮಾಡುತ್ತಾರೆ. ನನಗೆ ಕೇರಳದ ಚುನಾವಣೆ ಕೂಡ ನೋಡಿಕೊಳ್ಳಿ ಎಂದು ಹೇಳಿದ್ದಾರೆ. ಆದರೆ, ನನ್ನ ಕ್ಷೇತ್ರಕ್ಕೆ ನಾನು ಹೆಚ್ಚು ಸಮಯ ನೀಡುತ್ತೇನೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us