AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಸರ್ಕಾರಿ ಕಚೇರಿಯಲ್ಲಿದ್ದ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ

Mangaluru News: ನಿರ್ಮಲಾ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬರ್ಕೆ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಸರ್ಕಾರಿ ಕಚೇರಿಯಲ್ಲಿದ್ದ ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ಹಲ್ಲೆ
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on:Sep 20, 2021 | 10:43 PM

Share

ಮಂಗಳೂರು: ನಗರದ ಕರಂಗಲಪಾಡಿ ಬಳಿ ಸರ್ಕಾರಿ ಕಚೇರಿಯಲ್ಲಿ ದುಷ್ಕರ್ಮಿಗಳಿಂದ ದಾಳಿ ನಡೆದಿರುವ ದುರ್ಘಟನೆ ನಡೆದಿದೆ. ಮೂವರು ಮಹಿಳೆಯರ ಮೇಲೆ ತಲ್ವಾರ್​ನಿಂದ ದಾಳಿ ನಡೆಸಿದ್ದಾರೆ. ಕಚೇರಿಯಲ್ಲೇ ದುಷ್ಕರ್ಮಿಯಿಂದ ದಾಳಿ ನಡೆದಿದೆ. ಕಚೇರಿಯಲ್ಲಿ ಇದ್ದ ನಿರ್ಮಲಾ, ರೀನಾ ರಾಯ್, ಗುಣವತಿ ಮೇಲೆ ದಾಳಿ ಮಾಡಲಾಗಿದೆ. ಆ ಪೈಕಿ ನಿರ್ಮಲಾ ಎಂಬವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬರ್ಕೆ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಬೆಂಗಳೂರು: ಸರ್ಕಾರಿ ಕಚೇರಿಗೆ ನುಗ್ಗಿ ಕೊಲೆ ಬೆದರಿಕೆ; ದೂರು ದಾಖಲು ಸರ್ಕಾರಿ ಕಚೇರಿಗೆ ನುಗ್ಗಿ ಕೆಎಎಸ್ ಅಧಿಕಾರಿಗೆ ದುಷ್ಕರ್ಮಿಗಳು ಕೊಲೆ ಬೆದರಿಕೆ ಒಡ್ಡಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ. ಈ ಸಂಬಂಧ ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಬೆದರಿಕೆ ಹಾಕಿದ್ದ ಕುರಿತು ಪೊಲೀಸ್​ ಠಾಣೆಗೆ ದೂರು ನೀಡಲಾಗಿದೆ. ಟಿ. ಕುಮಾರ್, ಇತರರ ವಿರುದ್ಧ ಬಿ.ಕೆ. ನಾಗರಾಜಪ್ಪ ದೂರು ನೀಡಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​​ ಠಾಣೆಗೆ ದೂರು ಸಲ್ಲಿಕೆ ಮಾಡಲಾಗಿದೆ.

ಸರ್ಕಾರಿ ಕಚೇರಿಗೆ ಅತಿಕ್ರಮ ಪ್ರವೇಶ ಮಾಡಿ ಧಮ್ಕಿ ಆರೋಪ, ಹಣ ಮಂಜೂರು ಮಾಡುವಂತೆ ಧಮ್ಕಿ ಹಾಕಿರುವ ಆರೋಪ, ನಾವು ಹೇಳಿದ ವ್ಯಕ್ತಿಗಳಿಗೆ ಹಣ ಮಂಜೂರು ಮಾಡಬೇಕು, ಇಲ್ಲದಿದ್ರೆ ಸರ್ಕಾರಿ ಕಚೇರಿಯಲ್ಲಿ ದೊಂಬಿ ಎಬ್ಬಿಸುತ್ತೇವೆ ಎಂದು ಮತ್ತು ಕಚೇರಿಗೆ ಬೆಂಕಿ ಹಚ್ಚುವುದಾಗಿ ಬೆದರಿಕೆ ಹಾಕಿದ್ದ ಆರೋಪದ ಅಡಿಯಲ್ಲಿ ದೂರು ಸಲ್ಲಿಸಲಾಗಿದೆ. ಸೆಪ್ಟೆಂಬರ್ 17 ರಂದು ಕಚೇರಿಗೆ ನುಗ್ಗಿ ಧಮ್ಕಿ ಹಾಕಿದ್ದ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

ಹುಬ್ಬಳ್ಳಿ: ಮೇಲಧಿಕಾರಿ ವಿರುದ್ಧ ಆರೋಪ; ವಿಷ ಸೇವಿಸಿ ಮೆಹಬೂಬ್ ಸಾಬ್ ಸೂಡಿ ಆತ್ಮಹತ್ಯೆ ಯತ್ನ ಮೇಲಧಿಕಾರಿ ವಿರುದ್ಧ ಕಿರುಕುಳ ಆರೋಪ ನೀಡಿ ಹಿರಿಯ ಆರೋಗ್ಯ ನಿರೀಕ್ಷಕ ಮೆಹಬೂಬ್ ಸಾಬ್ ಸೂಡಿ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಲು ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ನೂಲ್ವಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಕ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ.

ಒಂದೇ ವಾರದಲ್ಲಿ 2 ಆತ್ಮಹತ್ಯೆ ಯತ್ನ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಧಾರವಾಡ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದ್ರೂ ಕ್ರಮಕೈಗೊಂಡಿಲ್ಲ ಎಂದು ಮಾಹಿತಿ ತಿಳಿದುಬಂದಿದೆ. ಇದೀಗ ಅಸ್ವಸ್ಥ ಮೆಹಬೂಬ್‌ ಎಂಬವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಧಾರವಾಡದ ಜಿಲ್ಲಾ ಆರೋಗ್ಯ ಅಧಿಕಾರಿಗೆ ದೂರು ನೀಡಿದರೂ ಕ್ರಮ ಕೈಗೊಂಡಿಲ್ಲ. ಹೀಗಾಗಿಯೇ ಹೆಲ್ತ್ ಇನ್ಸ್ಪೆಕ್ಟರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ, ಕಿಮ್ಸ್ ಆಸ್ಪತ್ರೆಗೆ ಡಿಹೆಚ್​ಓ ಯಶವಂತ ಮದೀನಕರ್ ಭೇಟಿ ನೀಡಿದ್ದಾರೆ. ಮೆಹಬೂಬ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಕಿಮ್ಸ್ ಎದುರು ಸಂಬಂಧಿಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: ಒಂದೇ ಕುಟುಂಬದ 5 ಮಂದಿ ಆತ್ಮಹತ್ಯೆ ಪ್ರಕರಣ: ಪೊಲೀಸರಿಗೆ ಸಿಕ್ಕಿದ್ದು ಒಟ್ಟು 27 ಪುಟಗಳ ಡೆತ್ ನೋಟ್!

ಇದನ್ನೂ ಓದಿ: ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ

Published On - 3:15 pm, Mon, 20 September 21