ಆಟೋದಲ್ಲಿ ನಿಗೂಢ ಸ್ಪೋಟ: ಹಿಂದೂ ಹೆಸರಿನಲ್ಲಿ ಆಧಾರ್ ಕಾರ್ಡ್ ಹೊಂದಿದ್ದ ಪ್ರಯಾಣಿಕನಿಗೆ ಸುನ್ನತ್ ಆಗಿರೋದು ಬೆಳಕಿಗೆ

ಮಂಗಳೂರು ಆಟೋ ರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಹೆಸರಿನಲ್ಲಿ ಆಧಾರ್ ಕಾರ್ಡ್ ಹೊಂದಿದ್ದ ಆಟೋ ಪ್ರಯಾಣಿಕನ ಮೆಡಿಕಲ್ ತಪಾಸಣೆ ವೇಳೆ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

ಆಟೋದಲ್ಲಿ ನಿಗೂಢ ಸ್ಪೋಟ: ಹಿಂದೂ ಹೆಸರಿನಲ್ಲಿ ಆಧಾರ್ ಕಾರ್ಡ್ ಹೊಂದಿದ್ದ ಪ್ರಯಾಣಿಕನಿಗೆ ಸುನ್ನತ್ ಆಗಿರೋದು ಬೆಳಕಿಗೆ
ಆಟೋ ರಿಕ್ಷಾದಲ್ಲಿ ಸ್ಫೋಟ
TV9kannada Web Team

| Edited By: TV9 SEO

Nov 21, 2022 | 11:48 AM

ಮಂಗಳೂರು: ಮಂಗಳೂರಿನ ಕಂಕನಾಡಿ ಸಮೀಪ ಆಟೋ ರಿಕ್ಷಾದಲ್ಲಿ ಸಂಭವಿಸಿದ ನಿಗೂಢ ಸ್ಪೋಟಕ್ಕೆ (Mangaluru Auto Blast Case) ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇದೀಗ ಬ್ಲಾಸ್ಟ್ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ಹಿಂದೂ ಹೆಸರಿನಲ್ಲಿ ಆಧಾರ್ ಕಾರ್ಡ್ ಹೊಂದಿದ್ದ ಆಟೋ ಪ್ರಯಾಣಿಕನ ಮೆಡಿಕಲ್ ತಪಾಸಣೆ ವೇಳೆ ಸ್ಫೋಟಕ ಅಂಶ ಬೆಳಕಿಗೆ ಬಂದಿದೆ.

ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಪ್ರಕರಣ: ಪೊಲೀಸರಿಂದ ಶಂಕಿತನ ಗುರುತು ಪತ್ತೆ

ಹಿಂದೂ ಹೆಸರಿನಲ್ಲಿ ಐಡಿ ಕಾರ್ಡ್ ನೋಡಿಯೇ ಶಂಕಿತನ ಮೇಲೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಆಟೋ ಪ್ರಯಾಣಿಕನಿಗೆ ಮೆಡಿಕಲ್ ತಪಾಸಣೆ ಮಾಡಿಸಿದ್ದು, ಈ ವೇಳೆ ಪ್ರಯಾಣಿಕನಿಗೆ ಸುನ್ನತ್ ಆಗಿರುವುದು ದೃಢಟ್ಟಿದೆ. ಆಟೋ ಪ್ರಯಾಣಿಕ ಏಕೆ ಹಿಂದೂ ಹೆಸರನ್ನು ಇಟ್ಟುಕೊಂಡಿದ್ದ? ಇದರ ಉದ್ದೇಶನ ಏನು? ಎನ್ನುವ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.

ಪ್ರೇಮ್ ರಾಜ್ ಎಂದು ನಮೂದಿಸಿದ್ದ ಆಟೋ ಪ್ರಯಾಣಿಕ

ಮಂಗಳೂರು ಕಂಕನಾಡಿ ಸಮೀಪ ಆಟೋದಲ್ಲಿ ಕುಕ್ಕರ್ ಒಂದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶಂಕಿತನ ಗುರುತು ಪತ್ತೆ ಮಾಡಿದ್ದಾರೆ. ಮೈಸೂರು ಲೋಕನಾಯಕ ನಗರದ 10ನೇ ಕ್ರಾಸ್‌ನಲ್ಲಿ ಶಂಕಿತ ವ್ಯಕ್ತಿಯು ಮೋಹನ್ ಕುಮಾರ್ ಅವರ ಕಟ್ಟಡದಲ್ಲಿ ಒಂದು ಕೊಠಡಿಯನ್ನು ಬಾಡಿಗೆಗೆ ಪಡೆದುಕೊಂಡಿದ್ದ. ಬಾಡಿಗೆ ಪಡೆಯಲು ಮಾಡಿಕೊಂಡಿದ್ದ ಕರಾರು ಪತ್ರದಲ್ಲಿ ತನ್ನ ಹೆಸರನ್ನು ಪ್ರೇಮ್ ರಾಜ್ ಎಂದು ನಮೂದಿಸಿದ್ದ. ತನ್ನ ಮೂಲ ಊರು ಮತ್ತು ವಿಳಾಸವಾಗಿ ಹುಬ್ಬಳ್ಳಿಯ ಪ್ರದೇಶವೊಂದನ್ನು ಕೊಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಸರ್ಕೀಟ್ ಬೋರ್ಡ್, ಸ್ಮಾಲ್ ಬೋಲ್ಟ್, ಬ್ಯಾಟರಿ, ಮೊಬೈಲ್, ಮರದಹೊಟ್ಟು, ಅಲ್ಯುಮಿನಿಯಂ, ಮಲ್ಟಿಮೀಟರ್, ವೈರ್​ಗಳು, ಮಿಕ್ಸರ್ ಜಾರ್​ಗಳು, ಪ್ರೆಶರ್ ಕುಕ್ಕರ್ ಸೇರಿದಂತೆ ಹಲವು ಸ್ಪೋಟಕಗಳು ಪತ್ತೆಯಾಗಿವೆ.ಜೊತೆಗೆ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಫಿನೋ ಡೆಬಿಟ್ ಕಾರ್ಡ್ ಪತ್ತೆಯಾಗಿದೆ ಎಂದು ಮೂಲಗಳು ಹೇಳಿವೆ.

ಪರಿಶೀಲನೆ ವೇಳೆ ಆಟೊದಲ್ಲಿ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿವೆ. ಎರಡು ಬ್ಯಾಟರಿ, ನಟ್​ ಬೋಲ್ಟ್​​, ಸರ್ಕೀಟ್ ಮಾದರಿಯಲ್ಲಿ ವೈರಿಂಗ್ ಮಾಡಿರುವ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಟೋದಲ್ಲಿ ಸಿಕ್ಕ ವಸ್ತುಗಳ ಪರೀಕ್ಷೆಗೆ ಎಫ್​ಎಸ್​ಎಲ್​ಗೆ ಕಳಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada