ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಭಜರಂಗದಳದಿಂದ ಚೂರಿ ಮಾದರಿಯ ಶಸ್ತ್ರ ಹಂಚಿಕೆ
ಶರಣ್ ಪಂಪ್ವೆಲ್, ವಿಹೆಚ್ಪಿ ವಿಭಾಗ ಕಾರ್ಯದರ್ಶಿಗಳು ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ನೀಡಿ ಪೂಜೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿದೆ.
ದಕ್ಷಿಣ ಕನ್ನಡ: ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಭಜರಂಗದಳದಿಂದ ಹಿಂದೂ ಕಾರ್ಯಕರ್ತರಿಗೆ ಶಸ್ತ್ರ ವಿತರಿಸಲಾಗಿದೆ. ಮಂಗಳೂರಿನ ಕದ್ರಿಯ ವಿಶ್ವ ಹಿಂದೂ ಪರಿಷತ್ (VHP) ಕಚೇರಿಯಲ್ಲಿ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ತ್ರಿಶೂಲ ದೀಕ್ಷೆ ಕಾರ್ಯಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಚೂರಿ ಮಾದರಿಯ ತ್ರಿಶೂಲದಂತಹ ಶಸ್ತ್ರಗಳನ್ನು ಹಂಚಲಾಗಿದೆ.
ಶರಣ್ ಪಂಪ್ವೆಲ್, ವಿಹೆಚ್ಪಿ ವಿಭಾಗ ಕಾರ್ಯದರ್ಶಿಗಳು ಆಯುಧ ಪೂಜೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ತ್ರಿಶೂಲ ನೀಡಿ ಪೂಜೆ ಮಾಡಿದ್ದಾರೆ. ಸದ್ಯ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿದೆ.
ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ ಮತಾಂತರಕ್ಕೆ ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ ಧಾರವಾಡ ಜಿಲ್ಲೆ ಅಳ್ನಾವರದಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ಮನೆ ಮೇಲೆ ದಾಳಿ ನಡೆಸಲಾಗಿದೆ. ದಯಾಸಾಗರ ಎಂಬುವವರ ಮನೆ ಮೇಲೆ ಭಜರಂಗದಳದ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದವರನ್ನು ಕಾರ್ಯಕರ್ತರು ಹೊರಕಳಿಸಿದ್ದಾರೆ.
ಅಳ್ನಾವರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಅಳ್ನಾವರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಧಾರವಾಡ: ಮತಾಂತರಕ್ಕೆ ಯತ್ನ ಆರೋಪ; ಮನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ
Published On - 9:59 am, Fri, 15 October 21