Mangaluru: ಹೋಲಿ ಸಂಭ್ರಮದ ಡಿಜೆ ಪಾರ್ಟಿ ವೇಳೆ ಭಜರಂಗದಳ ಕಾರ್ಯಕರ್ತರ ನೈತಿಕ ಪೊಲೀಸ್ಗಿರಿ
ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಮರೋಳಿ ಬಳಿ ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಲಿ ಸಂಭ್ರಮದ ಡಿಜೆ ಪಾರ್ಟಿ ಆಯೋಜಿಸಲಾಗಿತ್ತು.
ಮಂಗಳೂರು: ಹೋಲಿ ಸಂಭ್ರಮದ ಡಿಜೆ ಪಾರ್ಟಿ ಮೇಲೆ ಭಜರಂಗದಳ ಕಾರ್ಯಕರ್ತರು (Bajrang Dal Activist) ದಾಳಿ ಮಾಡಿದ್ದಾರೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮಂಗಳೂರಿನ (Mangaluru) ಮರೋಳಿ ಬಳಿ ರಂಗ್ ದೇ ಬರ್ಸಾ ಹೆಸರಿನಲ್ಲಿ ಹೋಲಿ ಸಂಭ್ರಮದ ಡಿಜೆ ಪಾರ್ಟಿ (DJ Party) ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಯುವಕ-ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದ ವೇಳೆ ಭಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ಗಿರಿ. ಪಾರ್ಟಿಯಲ್ಲಿ ಅನ್ಯಕೋಮಿನ ಯುವಕರ ಜೊತೆ ಹೋಳಿ ಹಬ್ಬ ಆಚರಿಸಿದ್ದಾರೆ. ಡಿಜೆ ಪಾರ್ಟಿಯಲ್ಲಿ ಅಶ್ಲೀಲ ವರ್ತನೆ ತೋರಿದ್ದಾರೆ ಎಂದು ಭಜರಂಗ ಕಾರ್ಯಕರ್ತರು ಆರೋಪಿಸಿದ್ದಾರೆ
ಭಜರಂಗದಳ ಕಾರ್ಯಕರ್ತರು ಡಿಜೆ ಪಾರ್ಟಿ ಸ್ಥಳಕ್ಕೆ ಹೋಗಿ, ಕಾರ್ಯಕ್ರಮದ ಬ್ಯಾನರ್ ಹರಿದು, ವಸ್ತುಗಳನ್ನು ಬಿಸಾಡಿ ದಾಂದಲೆ ಮಾಡಿದ್ದಾರೆ. ಈ ವೇಳೆ ಆಯೋಜಕರು ಮತ್ತು ಭಜರಂಗದಳ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಅಲ್ಲದೆ ಭಜರಂಗದಳ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ. ಪೊಲೀಸರು ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ತಡೆಗೋಡೆ ನಿರ್ಮಾಣದ ವೇಳೆ ಬರೆ ಕುಸಿತ: ಮಣ್ಣಿನಡಿ ಸಿಲುಕಿದ್ದ ಮೂವರು ಕಾರ್ಮಿಕರ ಸಾವು
ಹಿಂದೂ ವಿರೋಧಿ ಕೃತ್ಯಗಳು ಮಾಯವಾಗುವಂತೆ ಅಜ್ಜನಲ್ಲಿ ಪ್ರಾರ್ಥನೆ
ತುಳುನಾಡ ದೈವಸ್ಥಾನಗಳು ಕಾರಣಿಕ ಶಕ್ತಿಯನ್ನು ಹೊಂದಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಇಂತಹ ದೈವಸ್ಥಾನದ ಮುಂದೆ ಎಂತವನೂ ಕೇಡು ಬಗೆಯಲು ಮುಂದಾಗುವುದಿಲ್ಲ. ಆದರೆ ಕೆಲ ವರ್ಷಗಳ ಹಿಂದೆ ಮಂಗಳೂರು ಸೇರಿದಂತೆ ಕರಾವಳಿಯಲ್ಲಿ ದೈವಸ್ಥಾನಗಳಿಗೆ ಅಪಚಾರ ಎಸಗುವ ಕೃತ್ಯಗಳು ನಿರಂತರವಾಗಿ ನಡೆಯುತಿತ್ತು. ಕಾಣಿಕೆ ಹುಂಡಿಗಳಿಗೆ ಅಶುದ್ದವಾದ ವಸ್ತು ಹಾಕಿ ಅಪವಿತ್ರಗೊಳಿಸುವುದು, ವಿಗ್ರಹಗಳಿಗೆ ಹಾನಿ ಮಾಡುವ ಕೃತ್ಯ ಎಸಗಲಾಗಿತ್ತು. ಈ ದುಷ್ಕೃತ್ಯ ಎಸಗುವವರು ಶೀಘ್ರ ಸೆರೆಯಾಗುವಂತೆ ವಿಶ್ವ ಹಿಂದೂ ಪರಿಷತ್ ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಮೊರೆ ಹೋಗಿತ್ತು.
ಹೌದು ಮಂಗಳೂರಿನ ಕದ್ರಿ ಮಂಜುನಾಥನ ಸನ್ನಿಧಿಯಿಂದ ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ಪಾದಯಾತ್ರೆ ನಡೆಸಿತ್ತು. ಕಳೆದ ಮೂರು ವರ್ಷಗಳಿಂದ ಈ ಪಾದಯಾತ್ರೆ ನಡೆಯುತ್ತಿದ್ದು, ಈ ಬಾರಿಯ ನಮ್ಮ ನಡೆ ಕೊರಗಜ್ಜನೆಡೆ ಪಾದಯಾತ್ರೆ ಮಾರ್ಚ್ 19 ರಂದು ನಡೆದಿತ್ತು. ಮೂರು ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಭಾಗವಹಿಸಿದ್ದರು. ಮಕ್ಕಳು, ಯುವತಿಯರು, ಮಹಿಳೆಯರು ಎನ್ನದೇ ಮೂರು ಸಾವಿರಕ್ಕೂ ಹೆಚ್ಚು ಜನ ಬರಿಗಾಲಿನಲ್ಲಿ ಹೆಜ್ಜೆ ಹಾಕಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ