Mangaluru News: ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ

ಭಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ.

Mangaluru News: ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ಹಲ್ಲೆ
ಹಲ್ಲೆಗೊಳಗಾದವರು

Updated on: May 24, 2023 | 5:38 PM

ಮಂಗಳೂರು: ಭಜರಂಗದಳ (Bajrang Dal) ಮತ್ತು ಬಿಜೆಪಿ (BJP) ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ತಲವಾರಿನಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ (Bantwal) ತಾಲೂಕಿನ ಮಾಣಿ ಎಂಬಲ್ಲಿ ಬುಧವಾರ ನಡೆದಿದೆ. ದಾಳಿ ನಡೆಸಿದವರು ಕಾಂಗ್ರೆಸ್ (Congress) ಕಾರ್ಯಕರ್ತರು ಎಂಬ ಆರೋಪ ಕೇಳಿಬಂದಿದೆ. ಚುನಾವಣಾ ಫಲಿತಾಂಶದ ದಿನದ ಸಂಭ್ರಮಾಚರಣೆ ವೇಳೆ ನಡೆದಿದ್ದ ಗಲಾಟೆಗೆ ಪ್ರತೀಕಾರ ಈ ದಾಳಿ ನಡೆದಿರುವ ಶಂಕೆ ಇದೆ ಎಂದು ಹೇಳಲಾಗುತ್ತಿದೆ. ಪೆರಾಜೆ ಬಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಣಿ ಜಂಕ್ಷನ್​ ಬಳಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ಯುವಕರ ಮೇಲೆ ತಂಡವೊಂದು ದಾಳಿ ನಡೆಸಿದೆ. ಓಮ್ನಿ ಕಾರಿನಲ್ಲಿ ಬಂದ ತಂಡ ಸ್ಕೂಟರ್​​ಗೆ ಡಿಕ್ಕಿ ಹೊಡೆಸಿ ನಂತರ ತಲವಾರಿನಿಂದ ಹಲ್ಲೆ ನಡೆಸಿದೆ. ಮಹೇಂದ್ರ ಹಾಗೂ ಪ್ರಶಾಂತ್ ನಾಯ್ಕ್ ಅವರ ಕಾಲು ಮತ್ತು ತಲೆಯ ಭಾಗಕ್ಕೆ ಗಾಯವಾಗಿದೆ. ವಿಟ್ಲ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು ನಿವಾಸಿ ರಾಕೇಶ್, ಮಾಣಿ ಮಂಜುನಾಥ್ ಯಾನೆ ಮಂಜು ಹಾಗೂ ಪ್ರವೀಣ್ ನಾಯ್ಕ್ ಯಾನೆ ಮಹಾಲಿಂಗ ಮತ್ತಿತರ ತಂಡ ಹಲ್ಲೆ ನಡೆಸಿದ ಬಗ್ಗೆ ‌ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ವಿಟ್ಲ ಪೋಲೀಸರ ತಂಡ ಭೇಟಿ ನೀಡಿ ಪ್ರಾಥಮಿಕ ತನಿಖೆ ನಡೆಸಿದೆ.

ಇದನ್ನೂ ಓದಿ: ನಳಿನ್, ಡಿವಿ ಚಿತ್ರಕ್ಕೆ ಚಪ್ಪಲಿ ಹಾರ ಪ್ರಕರಣ; ಆರೋಪಿಗಳ ಮೇಲೆ ಪೊಲೀಸ್ ದೌರ್ಜನ್ಯ ಖಂಡಿಸಿದ ನಳಿನ್ ಕುಮಾರ್ ಕಟೀಲ್

ಯಾರೇ ತಪ್ಪು ಮಾಡಿದರೂ ಕ್ರಮ; ದಕ್ಷಿಣಕನ್ನಡ ಎಸ್​ಪಿ

ಬಂಟ್ವಾಳದ ಮಾಣಿಯಲ್ಲಿ ನಡೆದ ದಾಳಿಯ ಬಗ್ಗೆ ದಕ್ಷಿಣಕನ್ನಡ ಎಸ್​​ಪಿ ವಿಕ್ರಂ ಅಮಾಟೆ ಮಾಹಿತಿ ನೀಡಿದ್ದು, ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ ಹಲ್ಲೆ ನಡೆಸಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಘಟನೆಯ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಸುತ್ತಾ ಇದ್ದೇವೆ. ಹಲ್ಲೆಗೆ ಒಳಗಾದವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಂದ ಹೆಚ್ಚಿನ ಮಾಹಿತಿ ಪಡೆಯಲಾಗುವುದು. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:38 pm, Wed, 24 May 23

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us