ಮಂಗಳೂರು: ಅನ್ಯಕೋಮಿನ ಜೋಡಿಯ ಸುತ್ತಾಟ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ

| Updated By: Rakesh Nayak Manchi

Updated on: Nov 27, 2023 | 10:16 PM

ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಅನ್ಯಕೋಮಿನ ಯುವಕನೊಂದಿಗೆ ಚಿಕ್ಕಮಗಳೂರಿನ ಯುವತಿ ಸುತ್ತಾಡುತ್ತಿರುವುದನ್ನು ನೋಡಿದ ಬಜರಂಗದಳದ ಕಾರ್ಯಕರ್ತರು ಜೋಡಿಯನ್ನು ತಡೆದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಎರಡೂ ಸಮುದಾಯದ ಯುವಕರು ಜಮಾಯಿಸಿದ್ದು, ವಾಗ್ವಾದ ನಡೆಯಿತು.

ಮಂಗಳೂರು: ಅನ್ಯಕೋಮಿನ ಜೋಡಿಯ ಸುತ್ತಾಟ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ
ಮಂಗಳೂರಿನಲ್ಲಿ ಸುತ್ತಾಡುತ್ತಿದ್ದ ಅನ್ಯಕೋಮಿನ ಜೋಡಿಯನ್ನು ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದ ಬಜರಂಗದಳ ಕಾರ್ಯಕರ್ತರು
Follow us on

ಮಂಗಳೂರು, ನ.27: ಅನ್ಯಕೋಮಿನ ಜೋಡಿಯನ್ನು ತಡೆದು ಬಜರಂಗದಳದ(Bajrang Dal) ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ (Moral Policing) ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಮೊರ್ಗನ್ಸ್ ಗೇಟ್ ಬಳಿ‌ ನಡೆದಿದೆ. ಅನ್ಯಕೋಮಿನ ಯುವಕನೊಂದಿಗೆ ಚಿಕ್ಕಮಗಳೂರಿನ ಯುವತಿ ಸುತ್ತಾಡುತ್ತಿದ್ದಾಗ ತಡೆದ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಕಿ ಸ್ಟೆಂಡ್ ನಿವಾಸಿ ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದಳು. ಇವರಿಬ್ಬರು ಮಂಕಿ ಸ್ಟೆಂಡ್​ನ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೆ, ಇಂದು ಸ್ಕೂಟರ್​ನಲ್ಲಿ ಇವರಿಬ್ಬರು ಸುತ್ತಾಟ ನಡೆಸುತ್ತಿರುವುದನ್ನು ಗಮನಿಸಿದ ಬಜರಂಗದಳದ ಕಾರ್ಯಕರ್ತರು ಬೆನ್ನಟ್ಟಿದ್ದಾರೆ.

ಇದನ್ನೂ ಓದಿ: ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಕಿಸ್ಟೆಂಡ್ ಬಳಿ ಸ್ಕೋಟರ್ ಅಡ್ಡ ಹಾಕಿದ ಕಾರ್ಯಕರ್ತರು ಜೋಡಿಯನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಎರಡೂ ಕೋಮಿನ ಯುವಕರು ಸ್ಥಳದಲ್ಲಿ ಜಮಾಯಿಸಿದ್ದು, ತಂಡಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಾಂಡೇಶ್ವರ ಠಾಣೆಯ ಪೊಲೀಸರು ಗುಂಪು ಚದುರಿಸಿ ಅನ್ಯಕೋಮಿನ ಜೋಡಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ