ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ

ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ದಂಧೆಕೋರರನ್ನು ತಡೆದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ವಿಫ್ಟ್ ಕಾರಿನಲ್ಲಿ ನಾಲ್ಕು ಗೋವುಗಳ ಸಾಗಾಟ ತಡೆದ ಬಜರಂಗದಳ; ಕಾರು ಚರಂಡಿಗೆ ಪಲ್ಟಿ, ಖದೀಮರು ಪರಾರಿ
ಚರಂಡಿಗೆ ಬಿದ್ದ ಕಾರಿನಲ್ಲಿರುವ ಹಸುಗಳು
Edited By: ಆಯೇಷಾ ಬಾನು

Updated on: Mar 25, 2024 | 9:39 AM

ಮಂಗಳೂರು, ಮಾರ್ಚ್​.25: ನಾಲ್ಕು ಗೋವುಗಳನ್ನು ಹಿಂಸಾತ್ಮಕವಾಗಿ ಸ್ವಿಫ್ಟ್ ಕಾರಿನಲ್ಲಿ (Swift Car) ತುಂಬಿ ಕೊಂಡು ಅಕ್ರಮವಾಗಿ ಸಾಗಾಟ ಮಾಡುವಾಗ ಬಜರಂಗದಳ ಕಾರ್ಯಕರ್ತರು (Bajrang Dal Workers) ತಡೆದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕದ ಪದ್ಮಡ್ಕ ಎಂಬಲ್ಲಿ ಕೆಲ ದಂಧೆಕೋರರು ತಡರಾತ್ರಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡಲು ಯತ್ನಿಸುತ್ತಿದ್ದರು. ವಿಚಾರ ತಿಳಿಯುತ್ತಿದ್ದಂತೆ ಬಜರಂಗದಳ ಕಾರ್ಯಕರ್ತರು ದಂಧೆಕೋರರನ್ನು ತಡೆದಿದ್ದಾರೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು ಚರಂಡಿಗೆ ಬಿದ್ದು ಜಖಂಗೊಂಡಿದೆ. ಖದೀಮರು ಕಾರು ಬಿಟ್ಟು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋವುಗಳ ಸಹಿತ ಕಾರನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ರಕ್ಷಣೆ ಮಾಡಿದ ಗೋವುಗಳಿಗೆ ಬಜರಂಗದಳ ಕಾರ್ಯಕರ್ತರು ನೀರು ಮೇವಿನ ವ್ಯವಸ್ಥೆ ಮಾಡಿದ್ದಾರೆ.

ಬೈಕ್​ಗಳ ಮುಖಾಮುಖಿ ಡಿಕ್ಕಿ, ಇಬ್ಬರು ದುರ್ಮರಣ

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ರೇವಡಿಕೊಪ್ಪ ಗ್ರಾಮದ ಬಳಿ ಅಪಘಾತ ನಡೆದಿದೆ. ಕೊಳಚಿ ಗ್ರಾಮದ ವೆಂಕನಗೌಡ ಪಾಟೀಲ್ ಮತ್ತು ಲಕ್ಕನಾಯಕನಕೊಪ್ಪ ಗ್ರಾಮದ ಪ್ರಮೋದ್ ಕುಂಬಾರ್ ಉಸಿರು ಚೆಲ್ಲಿದ್ದಾರೆ. ಮತ್ತಿಬ್ಬರು ಸವಾರರು ಗಂಭೀರ ಗಾಯಗೊಂಡಿದ್ದು, ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಇಳಿಕೆ! ಕಾರಣ ಇಲ್ಲಿದೆ

ಕೆಐಎಡಿಬಿ ವಿರುದ್ಧ ರೈತರ ಆಕ್ರೋಶ

ಕೃಷಿ ಭೂಮಿ ಸ್ವಾಧೀನಕ್ಕೆ ಮುಂದಾದ ಕೆಐಎಡಿಬಿ ವಿರುದ್ಧ ರೈತರು ಪ್ರತಿಭಟನೆ ನಡೆದಿದ್ರು. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಂದೇನಹಳ್ಳಿ ಸುತ್ತಮುತ್ತಲ ರೈತ ಆಕ್ರೋಶ ವ್ಯಕ್ತಪಡಿಸಿದ್ರು. ಲೋಕಸಭಾ ಚುನಾವಣೆ ಘೋಷಣೆ ದಿನವೇ 6 ಹಳ್ಳಿಗಳ 600 ಎಕರೆ ಭೂಸ್ವಾಧೀನಕ್ಕೆ ಪ್ರಾಥಮಿಕ ಹಂತದ ನೋಟಿಫಿಕೇಶನ್ ನೀಡಲಾಗಿತ್ತು. ನೋಟಿಸ್​ನಲ್ಲಿ ಫಲವತ್ತಾದ ಭೂಮಿಯನ್ನ ಬರಡು ಭೂಮಿ ಎಂದು ಉಲ್ಲೇಖ ಮಾಡಲಾಗಿತ್ತು.

ಅಪಾರ್ಟ್​ಮೆಂಟ್​ಗೆ ನುಗ್ಗಿ ವಿದ್ಯಾರ್ಥಿ ಮೇಲೆ ಹಲ್ಲೆ

ಅಪಾರ್ಟ್​ಮೆಂಟ್​ಗೆ ನುಗ್ಗಿದ ದುಷ್ಕರ್ಮಿಗಳು ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿರುವ ಘಟನೆ, ಉಡುಪಿ ತಾಲೂಕಿನ ಮಣಿಪಾಲದ ಸರಳಬೆಟ್ಟುವಿನಲ್ಲಿ ನಡೆದಿದೆ. ಮಣಿಪಾಲದ ಎಂಐಟಿಯ ಬಿ.ಟೆಕ್ ವಿದ್ಯಾರ್ಥಿ ಅಭಿಷೇಕ್ ಮೇಲೆ ಹಲ್ಲೆ ಮಾಡಲಾಗಿದೆ. ಕಾರು, ಬೈಕ್​ನಿಂದ ಬಂದಿದ್ದ 5-6 ಜನ ದುಷ್ಕರ್ಮಿಗಳ ತಂಡ ಹಲ್ಲೆ ಮಾಡುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us