ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆ

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಲ್ಲಡ್ಕ ಪ್ರಖಂಡ ಗೋರಕ್ಷಾ ಪ್ರಮುಖ ರಾಜೇಶ್ ಪೂಜಾರಿ(26) ಮೃತದೇಹ ಪತ್ತೆಯಾಗಿದೆ.

ಮಂಗಳೂರು: ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆ
Follow us
TV9 Web
| Updated By: ಆಯೇಷಾ ಬಾನು

Updated on:Jan 12, 2023 | 2:27 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆಯಾಗಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡ ಗೋರಕ್ಷಾ ಪ್ರಮುಖ ರಾಜೇಶ್ ಪೂಜಾರಿ(26) ಮೃತದೇಹ ಪತ್ತೆಯಾಗಿದೆ.

ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆ ಹಿನ್ನೆಲೆ ಸ್ಥಳೀಯರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ರು. ಆಗ ಸ್ಥಳಕ್ಕೆ ಬಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಗ್ನಿಶಾಮಕ ದಳ, ಮುಳುಗು ತಜ್ಞರ ತಂಡದಿಂದ ಶೋಧ ಕಾರ್ಯ ನಡೆಸಿ ರಾಜೇಶ್ ಪೂಜಾರಿ ಶವ ಹೊರತೆಗೆಯಲಾಗಿದೆ. ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

4 ವರ್ಷದ ಹೆಣ್ಣು ಮಗುಬಿಟ್ಟು ಹೋದ ಪೋಷಕರು

ಮಂಗಳೂರು ಸುರತ್ಕಲ್ ಬಸ್ ನಿಲ್ದಾಣದ ಬಳಿ ನಾಲ್ಕು ವರ್ಷದ ಹೆಣ್ಣು ಮಗುವನ್ನು ಪೋಷಕರು ಬಿಟ್ಟು ಹೋದ ಘಟನೆ ನಡೆದಿದೆ. ನಿನ್ನೆ ರಾತ್ರಿ ಮಗುವನ್ನು ಬಸ್​ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾರೆ. ಸ್ಥಳೀಯರು ಮಗುವನ್ನು ನೋಡಿ ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮಗುವನ್ನು ಪೊಲೀಸರು ರಕ್ಷಿಸಿದ್ದಾರೆ. ಹಾಗೂ ಕನ್ನಡ ಮಾತಾಡುತ್ತಿರುವ ಈ ಮಗುವಿನ ಹೆತ್ತವರ ಬಗ್ಗೆ ಮಾಹಿತಿ ನೀಡಲು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಜನರಲ್ಲಿ ಮನವಿ ಮಾಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:19 pm, Thu, 12 January 23

ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು