ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆ ಸೇತುವೆ ಬಳಿಯ ನೇತ್ರಾವತಿ ನದಿಯಲ್ಲಿ ಬಜರಂಗದಳ ಕಾರ್ಯಕರ್ತನ ಶವ ಪತ್ತೆಯಾಗಿದೆ. ಬಜರಂಗದಳ ಕಲ್ಲಡ್ಕ ಪ್ರಖಂಡ ಗೋರಕ್ಷಾ ಪ್ರಮುಖ ರಾಜೇಶ್ ಪೂಜಾರಿ(26) ಮೃತದೇಹ ಪತ್ತೆಯಾಗಿದೆ.
ಸೇತುವೆಯಲ್ಲಿ ದ್ವಿಚಕ್ರ ವಾಹನ ಪತ್ತೆ ಹಿನ್ನೆಲೆ ಸ್ಥಳೀಯರು ಅನುಮಾನದಿಂದ ಪೊಲೀಸರಿಗೆ ಮಾಹಿತಿ ನೀಡಿದ್ರು. ಆಗ ಸ್ಥಳಕ್ಕೆ ಬಂದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ. ಅಗ್ನಿಶಾಮಕ ದಳ, ಮುಳುಗು ತಜ್ಞರ ತಂಡದಿಂದ ಶೋಧ ಕಾರ್ಯ ನಡೆಸಿ ರಾಜೇಶ್ ಪೂಜಾರಿ ಶವ ಹೊರತೆಗೆಯಲಾಗಿದೆ. ರಾಜೇಶ್ ಪೂಜಾರಿ ಸಾವಿನ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
ಮಂಗಳೂರು ಸುರತ್ಕಲ್ ಬಸ್ ನಿಲ್ದಾಣದ ಬಳಿ ನಾಲ್ಕು ವರ್ಷದ ಹೆಣ್ಣು ಮಗುವನ್ನು ಪೋಷಕರು ಬಿಟ್ಟು ಹೋದ ಘಟನೆ ನಡೆದಿದೆ. ನಿನ್ನೆ ರಾತ್ರಿ ಮಗುವನ್ನು ಬಸ್ ನಿಲ್ದಾಣದ ಬಳಿ ಬಿಟ್ಟು ಹೋಗಿದ್ದಾರೆ. ಸ್ಥಳೀಯರು ಮಗುವನ್ನು ನೋಡಿ ಸುರತ್ಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮಗುವನ್ನು ಪೊಲೀಸರು ರಕ್ಷಿಸಿದ್ದಾರೆ. ಹಾಗೂ ಕನ್ನಡ ಮಾತಾಡುತ್ತಿರುವ ಈ ಮಗುವಿನ ಹೆತ್ತವರ ಬಗ್ಗೆ ಮಾಹಿತಿ ನೀಡಲು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಜನರಲ್ಲಿ ಮನವಿ ಮಾಡಿದ್ದಾರೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 1:19 pm, Thu, 12 January 23