ಮಂಗಳೂರು: ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಂದು ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ
ಕೋಮು ಸೂಕ್ಷ್ಮ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಧರ್ಮ ಯುದ್ಧ ಆರಂಭವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಹಿಂದೂ ದೇವಾಲಯಗಳ ಜಾತ್ರಾ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಿಸಲಾಗುತ್ತಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.
ಮಂಗಳೂರು, ಅ.12: ಕೋಮು ಸೂಕ್ಷ್ಮ ಜಿಲ್ಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಧರ್ಮ ಯುದ್ಧ ಆರಂಭವಾಗಿದೆ. ಕಳೆದ ವರ್ಷದಂತೆ ಈ ವರ್ಷವೂ ಹಿಂದೂ ದೇವಾಲಯಗಳ ಜಾತ್ರಾ ಮಹೋತ್ಸವಕ್ಕೆ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಿಸಲಾಗುತ್ತಿದೆ. ಮಂಗಳೂರಿನ (Mangaluru) ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸಿರುವ ಬಗ್ಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದೆ.
ಮುಜುರಾಯಿ ಇಲಾಖೆ ವ್ಯಾಪ್ತಿಗೆ ಬರುವ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಉತ್ಸವವು ಅಕ್ಟೋಬರ್ 15 ರಿಂದ 24 ರ ವರೆಗೆ ನಡೆಯಲಿದೆ. ಆದರೆ, ದೇವಸ್ಥಾನದ ಆಡಳಿತ ಮಂಡಳಿಯುವ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ನಿರಾಕರಿಸಿದೆ.
ಇದನ್ನೂ ಓದಿ: ಮೈಸೂರು ದಸರಾ 2023: ಉರ್ದು ಕವಿಗೋಷ್ಠಿಗೆ ಬಿಜೆಪಿ ಶಾಸಕ ಆಕ್ಷೇಪ; ಸರಣಿ ಟ್ವೀಟ್ ಮೂಲಕ ಸುನಿಲ್ ಕುಮಾರ್ ವಾಗ್ದಾಳಿ
ಸದ್ಯ ನವರಾತ್ರಿ ಸಿದ್ಧತೆ ಹಿನ್ನೆಲೆಯಲ್ಲಿ ಅಂಗಡಿ ಜಾಗದ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಜಾಗ ಹಂಚಿಕೆ ಮಾಡಲಾಗುತ್ತಿದೆ. ಮಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸರ್ಕಾರಿ ರಸ್ತೆ ಇದಾಗಿದೆ.
ಆದರೆ, ಹಲವು ವರ್ಷಗಳಿಂದ ಈ ರಸ್ತೆಯ ಬದಿಗಳಲ್ಲಿ ನವರಾತ್ರಿ ಜಾತ್ರಾ ವ್ಯಾಪಾರ ನಡೆಯುತ್ತಾ ಬಂದಿದೆ. ಪಾಲಿಕೆ ರಸ್ತೆಯಾಗಿದ್ದರೂ ಹಲವು ವರ್ಷಗಳಿಂದ ದೇವಸ್ಥಾನದ ಆಡಳಿತದಿಂದಲೇ ವ್ಯಾಪಾರದ ಜಾಗ ಹರಾಜು ಮಾಡಲಾಗುತ್ತಿದೆ.
ಸದ್ಯ ಮುಸ್ಲಿಮರ ವ್ಯಾಪಾರಕ್ಕೆ ತಡೆ ಆರೋಪ ಸಂಬಂಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿಯು ಜಿಲ್ಲಾಧಿಕಾರಿಗೆ ದೂರು ನೀಡಿದ್ದು, ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:04 pm, Thu, 12 October 23