ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಬ್ಯಾಂಕ್ ಮ್ಯಾನೇಜರ್​ ಪತ್ತೆ; ಆತ್ಮಹತ್ಯೆ ಶಂಕೆ

ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್​ನ ಜನರಲ್ ಮ್ಯಾನೇಜರ್(Bank Manager) ಪತ್ತೆಯಾಗಿದ್ದು, ಗಂಭೀರ ಗಾಯಗೊಂಡಿದ್ದ ವಾದಿರಾಜ ಅವರು ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಕೆ.ಎ(51) ಮೃತ ವ್ಯಕ್ತಿ.

ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಬ್ಯಾಂಕ್ ಮ್ಯಾನೇಜರ್​ ಪತ್ತೆ; ಆತ್ಮಹತ್ಯೆ ಶಂಕೆ
ಮೃತ ಬ್ಯಾಂಕ್​ ಮ್ಯಾನೇಜರ್​
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on:Nov 09, 2023 | 6:19 PM

ದಕ್ಷಿಣ ಕನ್ನಡ, ನ.09: ಮಂಗಳೂರು ನಗರ ಹೊರವಲಯದ ಬೊಂದೇಲ್​ನಲ್ಲಿರುವ ಅಪಾರ್ಟ್ಮೆಂಟ್​ನಲ್ಲಿ ಕತ್ತುಕೊಯ್ದ ಸ್ಥಿತಿಯಲ್ಲಿ ಕರ್ನಾಟಕ ಬ್ಯಾಂಕ್​ನ ಜನರಲ್ ಮ್ಯಾನೇಜರ್(Bank Manager) ಪತ್ತೆಯಾಗಿದ್ದು, ಗಂಭೀರ ಗಾಯಗೊಂಡಿದ್ದ ವಾದಿರಾಜ ಅವರು ಇದೀಗ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಕೆ.ಎ(51) ಮೃತ ವ್ಯಕ್ತಿ. ಪತ್ನಿ ಮಕ್ಕಳು ಹೊರಗಡೆ ಹೋಗಿದ್ದಾಗ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಎಂಬ ಶಂಕೆ ಮೂಡಿದೆ. ಇನ್ನು ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಘಟನೆ ಕುರಿತು ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ‘ ವಾದಿರಾಜ ಆಚಾರ್ಯ ಒಂದು ವರ್ಷದಿಂದ ಇಲ್ಲಿ ಬಾಡಿಗೆ ಮನೆಯಲ್ಲಿದ್ದರು. ಕರ್ನಾಟಕ ಬ್ಯಾಂಕ್​ನಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್ ಆಗಿ, ನಾಲ್ಕು ವರ್ಷದಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಇಂದು ವಾದಿರಾಜ ಅವರ ಹೆಂಡತಿ ಮಕ್ಕಳ ಜೊತೆ ಶಾಲೆಯಲ್ಲಿ ಪೋಷಕರ ಸಭೆಗೆ ತೆರಳಿದ್ದರು. ಈ ವೇಳೆ ವಾದಿರಾಜ ಒಬ್ಬರೇ ಮನೆಯಲ್ಲಿದ್ದರು, ಕಾರು ಚಾಲಕ ಮನೆಗೆ ಬಂದು ನೋಡಿದಾಗ ವಾದಿರಾಜ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ತಕ್ಷಣ ಅಪಾರ್ಟ್ಮೆಂಟ್​ನಲ್ಲಿದ್ದವರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ನಿಖಿಲ್​ ಸಾವಿಗೆ ಕೇಶ್ವಾಪುರ ಠಾಣೆ ಪೊಲೀಸರು ಕಾರಣ; ಕ್ರಮಕೈಗೊಳ್ಳದಿದ್ದರೇ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕುಟುಂಬಸ್ಥರ ಎಚ್ಚರಿಕೆ

ಬಳಿಕ ಹೆಚ್ಚಿನ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ವಾದಿರಾಜ ಮನೆಯವರು ನೀಡುವ ದೂರಿನ ಮೇಲೆ ಎಫ್.ಐ.ಆರ್ ದಾಖಲು ಮಾಡುತ್ತೇವೆ. ಮರಣೋತ್ತರ ಪರೀಕ್ಷೆ ನಡೆಯುವುದು ಇನ್ನೂ ಬಾಕಿಯಿದೆ. ಆ ಬಳಿಕ ಯಾವ ಕಾರಣಕ್ಕೆ ಈ ಸಾವಾಗಿದೆ ಎಂದು ಹೇಳಬಹುದು. ಚಾಕುವಿನಿಂದ ಹೊಟ್ಟೆ ಮತ್ತು ಕುತ್ತಿಗೆ ಮೇಲೆ ಕೊಯ್ದಿರುವ ಗಾಯವಿದೆ. ದೂರಿನ ಆಧಾರದಲ್ಲಿ ತನಿಖೆ ಮಾಡುತ್ತೇವೆ. ಈಗಾಗಲೇ ಸಿಸಿಟಿವಿ ಫೂಟೇಜ್ ಎಲ್ಲಾ ಚೆಕ್ ಮಾಡಿದ್ದೇವೆ. ಆ ಸಂದರ್ಭ ಫೋನ್​ನಲ್ಲಿ ಯಾರೆಲ್ಲಾ ಮಾತನಾಡಿದ್ದಾರೆ ಎಂದು ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದರು.

ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಸಾವು

ಕೊಡಗು: ವಿರಾಜಪೇಟೆ ತಾಲೂಕಿನ ಹೆಗ್ಗಳ ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ಲೈನ್​ಮ್ಯಾನ್ ಸಾವನ್ನಪ್ಪಿದ ಘಟನೆ ನಡೆದಿದೆ.​ ಅನಿಲ್, ಮೃತ ವ್ಯಕ್ತಿ. ಇತ ವಿದ್ಯುತ್ ಕಂಬ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Thu, 9 November 23

Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
Daily Devotional: ಶನಿ ನೇರ ಸಂಚಾರ ಯಾರಿಗೆಲ್ಲ ಅದೃಷ್ಟ? ವಿಡಿಯೋ ನೋಡಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಶನಿದೇವ ಕುಂಬ ರಾಶಿಗೆ ಪ್ರವೇಶಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ತಮಗೊಂದು ಗ್ಯಾರಂಟಿ ನೀಡುವಂತೆ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಡಿಸಿಎಂ ಉತ್ತರ
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ರಸ್ತೆ ದಾಟುವಾಗ ಬಸ್ ಡಿಕ್ಕಿ ಹೊಡೆದು ಕಾಲೇಜು ಯುವತಿ ಭೀಕರ ಸಾವು
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಬೃಹತ್ ಹೆಬ್ಬಾವನ್ನು ಮೈಗೆಲ್ಲ ಸುತ್ತಿಕೊಂಡ ವಿಡಿಯೋ ನೋಡಿದರೆ ಶಾಕ್ ಗ್ಯಾರಂಟಿ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಮಕ್ಕಳು ಕ್ರೀಡಾಪಟುಗಳಾಗಿದ್ದರೆ ಕೃಪಾಂಕ ನೀಡುವ ಬಗ್ಗೆ ಪರಾಮರ್ಶೆ: ಸಿಎಂ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಡ್ಯಾನ್ಸ್ ವೇದಿಕೆಯಾಗಿ ಬದಲಾದ ಬಿಗ್ ಬಾಸ್ ಮನೆ; ಧರ್ಮ-ಐಶೂ ಮಸ್ತ್ ಕುಣಿತ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ: ಅಶೋಕ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಮಹಾರಾಷ್ಟ್ರದ ಪನ್ವೇಲ್​ನಲ್ಲಿ ಇಸ್ಕಾನ್​ನಿಂದ ಮೋದಿಗೆ ವಿಶೇಷ ಸ್ವಾಗತ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ
ಬಸ್​​ನಿಂದ ಎಳೆದೊಯ್ದು ಕಂಡಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ