ಅಬ್ದುಲ್‌ ರಹಿಮಾನ್‌ ಕೊಲೆ ಕೇಸ್​: ಮತ್ತಿಬ್ಬರು ಆರೋಪಿಗಳ ಬಂಧನ

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಹೊಸ ಆರೋಪಿಗಳನ್ನು ಬಂಧಿಸಿದ್ದಾರೆ. ತೇಜಾಕ್ಷ ಮತ್ತು ಅಭಿನ್ ರೈ ಎಂಬುವವರು ಬಂಧಿತರು. ಈಗಾಗಲೇ ಐದು ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. 15 ಜನರ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಕೊಲೆಗೆ ಕಾರಣ ಮತ್ತು ಕೊಲೆ ಹೇಗೆ ನಡೆಯಿತು ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.

ಅಬ್ದುಲ್‌ ರಹಿಮಾನ್‌ ಕೊಲೆ ಕೇಸ್​: ಮತ್ತಿಬ್ಬರು ಆರೋಪಿಗಳ ಬಂಧನ
ಅಬ್ದುಲ್​ ರಹಿಮಾನ್​
Edited By:

Updated on: Jun 03, 2025 | 9:36 PM

ಮಂಗಳೂರು, ಜೂನ್​ 03: ಬಂಟ್ವಾಳದಲ್ಲಿ (Bantwal) ನಡೆದ ಅಬ್ದುಲ್‌ ರಹಿಮಾನ್‌ (Abdul Rahiman) ಕೊಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತೇಜಾಕ್ಷ, ಅಭಿನ್‌ ರೈ ಬಂಧಿತರು. ಆರೋಪಿಗಳು ಕೊಲೆ ಬಳಿಕ ತಲೆ ಮರೆಸಿಕೊಂಡಿದ್ದರು. ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಅಬ್ದುಲ್‌ ರಹಿಮಾನ್‌ ಹತ್ಯೆ ಪ್ರಕರಣ ಸಂಬಂಧ 15 ಮಂದಿಯ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್‌ ರಹಿಮಾನ್‌ ಕೊಲೆ

ಕಟ್ಟಡದ ಕೆಲಸಕ್ಕೆ ತುರ್ತಾಗಿ ಒಂದು ಲೋಡ್ ಮರಳು ತರುವಂತೆ ಅಬ್ದುಲ್ ರಹಿಮಾನ್ ಗೆ ದೀಪಕ್ ಕರೆ ಮಾಡಿದ್ದನು. ಮರಳನ್ನು ಪಿಕಪ್ ವಾಹನದಲ್ಲಿ ತಂದು ಇಳಿಸುವಾಗ ಅಬ್ದುಲ್ ರಹಿಮಾನ್ ಮೇಲೆ ಹಲ್ಲೆ ನಡೆದಿತ್ತು. ಬೈಕಿನಲ್ಲಿ ಬಂದ ಇಬ್ಬರು ತಲವಾರಿನಿಂದ ಹಲ್ಲೆ, ಮಾಡಿ ಕೊಲೆಗೈದು ಪರಾರಿಯಾಗಿದ್ದರು. ಕೊಲೆ ಸಂಚಿನಲ್ಲಿ ಬಂಧಿತ ಆರೋಪಿಗಳು ನೇರವಾಗಿ ಭಾಗಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅಬ್ದುಲ್ ರಹಿಮಾನ್ ಕೊಲೆ ಮತ್ತು ಜೊತೆಗಾರ ಕಲಂದರ್ ಕಾಫಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿತ್ತು.

ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್ ತಂಡ ರಚನೆ

ರಹಿಮಾನ್ ಹತ್ಯೆ ಪ್ರಕರಣ ಸಂಬಂಧ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ 15 ಜನರ ವಿರುದ್ಧ FIR ದಾಖಲಾಗಿದೆ. ನಿಸಾರ್ ಎಂಬುವವರು ನೀಡಿದ ದೂರಿನ ಅನ್ವಯ, ದೀಪಕ್, ಸುಮಿತ್ ಸೇರಿ ರಹಿಮಾನ್ ಪರಿಚಯಸ್ಥರೇ ಆಗಿರುವ ಆಗಿರುವ 15 ಜನರ ವಿರುದ್ಧ FIR ದಾಖಲಾಗಿದೆ. ದುಷ್ಕರ್ಮಿಗಳ ಸೆರೆಗೆ 5 ಪೊಲೀಸ್​ ತಂಡ ರಚನೆ ಮಾಡಲಾಗಿದ್ದು, ಡಿವೈಎಸ್​ಪಿ ವಿಜಯ್ ಪ್ರಕಾಶ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ
ಪರಮೇಶ್ವರ್, ಗುಂಡೂರಾವ್ ಬದಲಾವಣೆಗೆ ಮಂಗಳೂರು ಮುಸ್ಲಿಂ ಮುಖಂಡರ ಪಟ್ಟು
ಬಂಟ್ವಾಳ ರಹಿಮಾನ್ ಹತ್ಯೆ ಹೇಗಾಯ್ತು?ಮಂಗಳೂರಿನಲ್ಲಿ ಏನೇನಾಯ್ತು?ಈಗ ಹೇಗಿದೆ?
ಅಬ್ದುಲ್ ಹತ್ಯೆ ಕೇಸ್​: ಕೈ ನಾಯಕರ ರಾಜೀನಾಮೆಗೆ ಮುಸ್ಲಿಂ ಮುಖಂಡರ ಆಗ್ರಹ
ಬಂಟ್ವಾಳ ಅಬ್ದುಲ್ ಹತ್ಯೆ​: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಇದನ್ನೂ ಓದಿ: VHP ಮುಖಂಡ ಶರಣ್ ಪಂಪ್ವೆಲ್ ಅರೆಸ್ಟ್: ಹಿಂದೂ ಕಾರ್ಯಕರ್ತರ ಜಮಾವಣೆ

15 ಮಂದಿ ವ್ಯವಸ್ಥಿತವಾಗಿ ಹತ್ಯೆ ಮಾಡಿದ್ದಾರೆ: ಎಸ್​ಡಿಪಿಐ ಜಿಲ್ಲಾಧ್ಯಕ್ಷ

ಕೊಲ್ತಮಜಲು ಬಳಿ ಪಿಕಪ್ ಚಾಲಕನಾಗಿದ್ದ ಮುಸ್ಲಿಂ ಯುವಕನಿಗೆ ಮರಳು ಲೋಡ್​ಗೆ ಕರೆದಿದ್ದರು. ಸಂಘ ಪರಿವಾರಕ್ಕೆ ಸೇರಿದ ಗೂಂಡಾ ಪಡೆ ಏಕಾಏಕಿ ತಲವಾರಿನಿಂದ ದಾಳಿ ನಡೆಸಿದೆ. ಇಮ್ತಿಯಾಜ್ ಆಲಿಯಾಸ್ ಅಬ್ದುಲ್ ರಹೀಂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ಕೆಲ ಕಿಡಿಗೇಡಿಗಳು ಮುಸ್ಲಿಮರಿಗೆ ಬಹಿರಂಗ ಬೆದರಿಕೆ ಹಾಕುತ್ತಿದ್ದಾರೆ. ರೌಡಿಶೀಟರ್ ಒಬ್ಬನ ಹತ್ಯೆಗೆ ಪ್ರತೀಕಾರವಾಗಿ ಬೆದರಿಕೆ ಹಾಕುತ್ತಿದ್ದಾರೆ. ಮೊನ್ನೆ ಪ್ರತಿಭಟನೆಯಲ್ಲಿ ಶ್ರೀಕಾಂತ್ ಶೆಟ್ಟಿ ಎಂಬಾತ ರಕ್ತಕ್ಕೆ ರಕ್ತ ಅಂತ ಹೇಳಿದ್ದಾನೆ. ಮತ್ತೊಬ್ಬ ಭರತ್ ಕುಮ್ಡೇಲ್ ಎಂಬ ಗೂಂಡಾ ಪೋಸ್ಟ್​ಮಾರ್ಟ್ಂ ಕೂಡ ಮಾಡಲು ಆಗದ ರೀತಿಯಲ್ಲಿ ಕೊಲೆ ಮಾಡುತ್ತೇನೆ ಎಂದಿದ್ದಾನೆ ಎಂದು ಎಸ್​ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ವಾಗ್ದಾಳಿ ಮಾಡಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ