AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಪೊಲೀಸರಿಂದ ರೇಡ್​​: 10 ಮೊಬೈಲ್​​ಗಳು ಪತ್ತೆ

ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಠಾಣೆ ಪೊಲೀಸರು ಹಠಾತ್ ದಾಳಿ ನಡೆಸಿದ್ದು, ಎ-ಬ್ಲಾಕ್‌ನಲ್ಲಿದ್ದ 9 ಜೈಲುಬಂಧಿಗಳಿಂದ ಒಟ್ಟು 10 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ. ಜೈಲು ಬಂಧಿಗಳಿಂದ ಮೊಬೈಲ್ ಬಳಕೆ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಹಿನ್ನೆಲೆಯೇ ಪೊಲೀಸರು ಈ ರೇಡ್​​ ನಡೆಸಿದ್ದಾರೆ ಎನ್ನಲಾಗಿದೆ.

ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಪೊಲೀಸರಿಂದ ರೇಡ್​​: 10 ಮೊಬೈಲ್​​ಗಳು ಪತ್ತೆ
ಮಂಗಳೂರು ಜಿಲ್ಲಾ ಕಾರಾಗೃಹImage Credit source: The Hindu
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Sep 08, 2026 | 3:22 PM

Share

ಮಂಗಳೂರು, ಸೆಪ್ಟೆಂಬರ್​​ 08: ಮೇಲಿಂದ ಮೇಲೆ ಸಾಕಷ್ಟು ಪ್ರಕರಣಗಳು ಸಾರ್ವಜನಿಕ ಚರ್ಚೆಗೆ ಗ್ರಾಸವಾದ ಬಳಿಕವೂ ರಾಜ್ಯದ ಜೈಲುಗಳಲ್ಲಿ ಮಾತ್ರ ಜೈಲುಬಂಧಿಗಳಿಗೆ ರಾಜಾತಿಥ್ಯಕ್ಕೆ ಬ್ರೇಕ್​​ ಬಿದ್ದಿಲ್ಲ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಕೈದಿಗಳ ಬ್ಯಾರಕ್​​ನಲ್ಲಿ ಮೊಬೈಲ್​​ ಫೋನ್​​ಗಳು ಪತ್ತೆಯಾಗಿದ್ದ ಘಟನೆ ಮಾಸುವ ಮುನ್ನವೇ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿಯೂ ಎಲ್ಲವೂ ಖುಲ್ಲಂ ಖುಲ್ಲವಾಗಿ ನಡೆಯುತ್ತಿರುವುದು ಬರ್ಕೆ ಪೊಲೀಸರ ದಾಳಿಯ ವೇಳೆ ಬಟಾ ಬಯಲಾಗಿದೆ.

ಜೈಲಿನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಪತ್ತೆ

ಮಂಗಳೂರು ಜಿಲ್ಲಾ ಕಾರಾಗೃಹದ ಮೇಲೆ ಬರ್ಕೆ ಠಾಣೆ ಪೊಲೀಸರ ದಾಳಿ ವೇಳೆ ಜೈಲಿನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಫೋನ್​​ಗಳು ಪತ್ತೆಯಾಗಿವೆ. ಮೊಬೈಲ್ ಬಳಕೆ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಹಿನ್ನೆಲೆಯೇ ಪೊಲೀಸರು ಈ ರೇಡ್​​ ನಡೆಸಿದ್ದರು ಎನ್ನಲಾಗಿದ್ದು, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಬಳಿಯಿದ್ದ 10 ಮೊಬೈಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವೂದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್, ಅರ್ಫಜ್ ಎಂಬುವರ ಬಳಿ ಮೊಬೈಲ್​​ಗಳು ಇದ್ದವು ಎನ್ನಲಾಗಿದೆ. ಈ ಪೈಕಿ ನಾಲ್ವರು ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಕೇಸ್​ನ ಆರೋಪಿಗಳು ಎನ್ನಲಾಗಿದ್ದು, ಮೊಬೈಲ್ ಬಳಕೆ ಮತ್ತು ಪೂರೈಕೆ ಸಂಬಂಧ ಬರ್ಕೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.

LIVE TV

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ: ಪ್ರಜ್ವಲ್​​ ರೇವಣ್ಣ ಬ್ಯಾರಕ್​​ ಸೇರಿ ವಿವಿಧೆಡೆ ಒಟ್ಟು 10ಕ್ಕೂ ಹೆಚ್ಚು ಮೊಬೈಲ್​​ಗಳು​​ ಪತ್ತೆ

ಪ್ರತಿ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚನೆ ಹಿನ್ನೆಲೆ ಜೈಲಿನಲ್ಲಿರುವ ರೌಡಿಗಳು ಹೊರಗಿನ ರೌಡಿಗಳ ಜೊತೆ ಸಂಪರ್ಕದಲ್ಲಿರುವ ಮಾಹಿತಿ ಮತ್ತು ಜೈಲಿನಲ್ಲಿ ಅಕ್ರಮ ಚಟುವಟಿಕೆಗಳ ಆರೋಪ ಹಿನ್ನೆಲೆ ಆಗಸ್ಟ್​​ 11ರಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ ನಡೆಸಿತ್ತು. ಈ ವೇಳೆ ಅತ್ಯಾಚಾರ ಕೇಸ್​​ನಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವದಿ ಶಿಕ್ಷೆಗೆ ಗುರಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್​​ನಲ್ಲಿದ್ದ ಮೊಬೈಲ್​​ ಸೇರಿ 10ಕ್ಕೂ ಹೆಚ್ಚು ಮೊಬೈಲ್​​​ಗಳನ್ನು ಸಿಸಿಬಿ ಪತ್ತೆ ಮಾಡಿತ್ತು. ಆ ಪ್ರಕರಣದ ತನಿಖೆ ನಡೆಯುತ್ತಿರುವ ಹೊತ್ತಲ್ಲೇ ರಾಜ್ಯದ ಮತ್ತೊಂದು ಜೈಲಿನ ಕರ್ಮಕಾಂಡವೀಗ ಹೊರಬಿದ್ದಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More