ಉಪ್ಪಿನಂಗಡಿಯಲ್ಲಿ ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಅಂಗಡಿ ಸಂಪೂರ್ಣ ಭಸ್ಮ
ಅಶೋಕ್ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.

ಮಂಗಳೂರು: ತಡರಾತ್ರಿ ಕಿಡಿಗೇಡಿಗಳು ಮೀನಿನ ಅಂಗಡಿಗೆ ಬೆಂಕಿ ಹಚ್ಚಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಸುಬ್ರಹ್ಮಣ್ಯ ಕ್ರಾಸ್ ಬಳಿ ನಡೆದಿದೆ. ಅಶೋಕ್ ಶೆಟ್ಟಿ ಎಂಬವರಿಗೆ ಸೇರಿದ ಮೀನಿನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೀನು ಸಂಗ್ರಹದ ಬಾಕ್ಸ್ ಸೇರಿದಂತೆ ಅಂಗಡಿ ಸಂಪೂರ್ಣವಾಗಿ ಭಸ್ಮವಾಗಿದೆ. ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಚ್ಚಲು ಕಾರಣವೇನು? ಎಂಬುದು ತಿಳಿದುಬರಬೇಕಿದೆ.
ಅಶೋಕ್ ಹಿಂದೂ ಪರ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ಉದ್ದೇಶಪೂರ್ವಕವಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಇಂದು ಬೆಳಿಗ್ಗೆ (ಆಗಸ್ಟ್ 23) ಆಗಮಿಸಿ, ಕೃತ್ಯ ಎಸಗಿದವರಿಗೆ ತಕ್ಕ ಶಿಕ್ಷೆ ನೀಡುವಂತೆ ಆಗ್ರಹಿಸಿದ್ದಾರೆ. ಜೊತೆಗೆ ಘಟನಾ ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಸುಟ್ಟು ಹೋಗಿರುವ ಬಾಕ್ಸ್ಗಳು
ಹೈದರಾಬಾದ್ನಲ್ಲಿ ಅಗ್ನಿ ಅವಗಡ ಹೈದರಾಬಾದ್ನ ರಂಗರೆಡ್ಡಿ ಜಿಲ್ಲಾ ರಾಜೇಂದ್ರನಗರದಲ್ಲಿ ಅಗ್ನಿ ಅವಗಡ ಸಂಭವಿಸಿದೆ. ಇಂಡಸ್ಟ್ರಿವೊಂದರಲ್ಲಿ ಅಗ್ನಿ ಅವಗಡವಾಗಿದೆ. ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿದೆ. ವಿನಾಯಕ ಸ್ಪಾಂಜ್ ಕಂಪನಿ ಹಾಗೂ ದಾನಮ್ಮ ಪ್ಲಾಸ್ಟಿಕ್ ಕಂಪನಿಯಲ್ಲಿ ಅರ್ಧ ರಾತ್ರಿ ಬೆಂಕಿ ಹತ್ತಿಕೊಂಡಿದೆ. ಅರ್ಧರಾತ್ರಿ ವೇಳೆ ನಡೆದ ಅವಗಡದಿಂದಾಗಿ ಪ್ರಾಣ ಹಾನಿ ತಪ್ಪಿದೆ. ಆದರೆ ಭಾರಿ ಪ್ರಮಾಣದ ನಷ್ಟವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ.
ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಏರ್ಪೋರ್ಟ್ ರಸ್ತೆಯ ಕಾವೇರಿ ಜಂಕ್ಷನ್ ಬಳಿ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ
ಮನೆ ತೆರವು ಆತಂಕದಲ್ಲಿ ಶಿವರಾಮ ಕಾರಂತ ಬಡಾವಣೆಯ ಜನ; 800 ಮನೆಗಳಲ್ಲಿ ನೀರವ ಮೌನ
(bastards set fire to the fish shop in Uppinangady Mangalore)