AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?

ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ದೇಗುಲಕ್ಕೆ ಹೊರಟಿದ್ದ 15 ವರ್ಷದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಆರಂಭದಲ್ಲಿ ಪ್ರಾಣಿ ದಾಳಿ ಎಂದು ಶಂಕಿಸಿದ್ದರೂ ತಲೆಯ ಮೇಲಿನ ಗಾಯಗಳು ಕೊಲೆ ಆಗಿರುವ ಅನುಮಾನಗಳನ್ನು ಮೂಡಿಸಿವೆ. ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲಿಯೂ ತೀವ್ರ ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಘಟನೆಗೆ ಕಾರಣ ಗೊತ್ತಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ದೇಗುಲಕ್ಕೆಂದು ಹೋದ ಬಾಲಕ ಕೆರೆಯಲ್ಲಿ ಹೆಣವಾಗಿ ಪತ್ತೆ: ಪ್ರಾಣಿ ದಾಳಿಯೋ? ಕೊಲೆಯೋ?
ಮರತ ಬಾಲಕ ಸುಮಂತ್​
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 14, 2026 | 4:28 PM

Share

ಮಂಗಳೂರು, ಜನವರಿ 14: ಧನುರ್ಮಾಸ ಹಿನ್ನೆಲೆ ದೇಗುಲಕ್ಕೆಂದು ಮುಜಾನೆಯೇ ಮನೆಯಿಂದ ಹೊರಟಿದ್ದ 9ನೇ ತರಗತಿಯ ಬಾಲಕನೊಬ್ಬ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ನಿವಾಸಿ ಸುಮಂತ್​​ (15) ಮೃತ ದುರ್ದೈವಿಯಾಗಿದ್ದು, ಬಾಲಕನ ಸಾವಿನ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಹೀಗಾಗಿ ಎಲ್ಲಾ ಆಯಾಮಗಳಲ್ಲಿಯೂ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ.

ಕುವೆಟ್ಟು ಸಮೀಪದ ಸಂಬೋಳ್ಯ ಬರಮೇಲು ನಿವಾಸಿಯಾದ ಸುಬ್ರಹ್ಮಣ್ಯ ನಾಯಕ್ ಅವರ ಮಗ ಸುಮಂತ್​​ ಧನುರ್ಮಾಸದ ಹಿನ್ನಲೆಯಲ್ಲಿ ಬೆಳಗ್ಗೆ 4 ಗಂಟೆಗೆ ಎದ್ದು ನಾಳದಲ್ಲಿರೋ ದೇವಸ್ಥಾನಕ್ಕೆ ಹೋಗಿಬರುತ್ತಿದ್ದ. ಹಾಗೆ ಇಂದು ಕೂಡ ದೇವಸ್ಥಾನಕ್ಕೆ ಅಂತಾ ಹೋಗಿದ್ದಾನೆ. ಆದರೆ ಈತನ ಸಹೋದರ ಸುದರ್ಶನ್​​ಗೆ ಬೆಳಗ್ಗೆ 6.30ರ ಸುಮಾರಿಗೆ ದೇವಸ್ಥಾನದಿಂದ ಸ್ನೇಹಿತರು ಕರೆ ಮಾಡಿ ಸುಮಂತ್ ದೇವಸ್ಥಾನಕ್ಕೆ ಯಾಕೆ ಬರಲಿಲ್ಲ ಅಂತಾ ಕೇಳಿದ್ದಾರೆ. ಆಗ ಸುಮಂತ್​​ ಮಿಸ್ಸಿಂಗ್​​ ಆಗಿರುವ ವಿಚಾರ ಮನೆಯವರಿಗೆ ಗೊತ್ತಾಗಿದೆ. ಮನೆಯಿಂದ ಕಾಲು ದಾರಿಯಲ್ಲಿ ನಡೆದುಕೊಂಡು ಹೋಗಿ ರಸ್ತೆ ಸಮೀಪ ನಿಲ್ಲಿಸಿದ್ದ ಬೈಸಿಕಲ್​​ ತೆಗೆದುಕೊಂಡು ಸುಮಂತ್​​ ದೇಗುಲಕ್ಕೆ ಹೋಗುತ್ತಿದ್ದ. ಅಲ್ಲಿಗೆ ಹೋಗಿ ನೋಡಿದ್ರೆ ಸೈಕಲ್ ನಿಲ್ಲಿಸಿದ್ದಲಿಯೇ ಇತ್ತು. ಇದ್ರಿಂದ ಅನುಮಾನಗೊಂಡು ಆತನನ್ನು ಎಲ್ಲರೂ ಹುಡುಕಿದ್ದಾರೆ. ಈ ವೇಳೆ ರಕ್ತದ ಹನಿಗಳು ಪತ್ತೆಯಾಗಿದ್ದು, ಅವನ್ನು ಹಿಂಬಾಲಿಸಿ ಹೋದಾಗ ಸಮೀಪದ ಕೆರೆ ಪಕ್ಕದಲ್ಲೇ ಇದ್ದ ಕಲ್ಲೊಂದಕ್ಕೆ ರಕ್ತ ಅಂಟಿಕೊಂಡಿರೋದು ಕಾಣಿಸಿದೆ. ಬಳಿಕ ಅಗ್ನಿಶಾಮಕದಳ ಸಿಬ್ಬಂದಿ ಬಂದು ಕೆರೆಯಲ್ಲಿ ಹುಡುಕಾಡಿದಾಗ ಅಲ್ಲಿ ಸುಮಂತ್ ಮೃತದೇಹ ಪತ್ತೆಯಾಗಿದೆ.

ಇದನ್ನೂ ಓದಿ: ತಾಯಿಗೆ ಹೊಡೆದ ಎಂದು ಮಲತಂದೆಯನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಮಗ

ನಾಯಿ ಅಟ್ಟಿಸಿಕೊಂಡು ಬಂದು ಕಚ್ಚಿದ ಕಾರಣ ಬಾಲಕ ಓಡಿ ಹೋಗಿ ಕೆರೆಗೆ ಬಿದ್ದಿದ್ದಾನೆ ಅಂತಾ ಆರಂಭದಲ್ಲಿ ಅನುಮಾನಿಸಲಾಗಿತ್ತು. ಚಿರತೆ ದಾಳಿಯಿಂದ ಸಾವನ್ನಪ್ಪಿರಬಹುದು ಅಂತಲೂ ಅಂದಾಜಿಸಲಾಗಿತ್ತು. ಆದ್ರೆ ಬಾಕಲನ ತಲೆಯ ಮೇಲ್ಭಾಗದಲ್ಲಿ ಮಚ್ಚಿನಲ್ಲಿ ಹೊಡೆದಿರುವ ರೀತಿ ಎರಡು ಕಡೆ ಗಾಯವಾಗಿರೋದು ಕಂಡುಬಂದಿದೆ. ಹಾಗಿ ಇದು ಕೊಲೆಯಾಗಿರಬಹುದೆಂಬ ಅನುಮಾನ ಮೂಡಿದ್ದು, ಎಸ್ಪಿ ಡಾ.ಅರುಣ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಾಗ್ ಸ್ಕ್ವಾಡ್​ನಿಂದಲೂ ತಪಾಸಣೆ ನಡೆದಿದೆ. ಮರಣೋತ್ತರ ಪರೀಕ್ಷೆ ಬಳಿಕ ಘಟನೆ ಹೇಗಾಯ್ತು ಅಂತಾ ಗೊತ್ತಾಗಲಿದ್ದು, ಎಲ್ಲ ಆಯಾಮದಲ್ಲಿಯೂ ತನಿಖೆ ಮಾಡುತ್ತೇವೆ ಅಂತಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ಕೈ ಮುಖಂಡ, ಕಣ್ಣೀರಿಟ್ಟ ಕಮಿಷನರ್
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ಸಂಕ್ರಾಂತಿ ಸಂಭ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಸೌಮ್ಯ ರೆಡ್ಡಿ!
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ರಾಹುಲ್​​ ಜೊತೆ ಪ್ರತ್ಯೇಕವಾಗಿ ಏನೇನು ಚರ್ಚೆ? ಡಿಕೆ ಹೇಳಿದ್ದೇನು ನೋಡಿ
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
ಒಂದೇ ಬಸ್​​ಗೆ 2 ರಾಜ್ಯಗಳ ನಂಬರ್​​ ಪ್ಲೇಟ್​​ ಕಂಡು ಅಧಿಕಾರಿಗಳೇ ದಂಗು
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
KSRTC ಬಸ್ಸಿನಡಿ ಸಿಲುಕಿದರೂ ಪ್ರಯಾಣಿಕ ಪವಾಡಸದೃಶ ಪಾರು!
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ವಿಡಿಯೋ: ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ
ಕೇಂದ್ರ ಸಚಿವ ಮುರುಗನ್ ನಿವಾಸದಲ್ಲಿ ಪೊಂಗಲ್ ಆಚರಿಸಿದ ಪ್ರಧಾನಿ ಮೋದಿ
ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ನೆಲಮಂಗಲದಲ್ಲಿ ಚಿರತೆ ದಾಳಿ ಹೆಚ್ಚಳ
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!
ಚೊಚ್ಚಲ ಪಂದ್ಯ... ಅರ್ಧದಲ್ಲೇ ಬ್ಯಾಟಿಂಗ್ ನಿಲ್ಲಿಸಿ ವಾಪಸ್ ಕರೆಸಿದ ಕೋಚ್..!
JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​
JDS ಮುಖಂಡೆ ಪುತ್ರನ ಕಿರುಕಳಕ್ಕೆ ಯುವತಿ ಆತ್ಮಹತ್ಯೆ ಕೇಸ್​​ಗೆ ಟ್ವಿಸ್ಟ್​​