ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾಗಿದೆ. ಈ ಘಟನೆಯ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ನಿನ್ನೆ ರಾತ್ರಿ ಮಂಗಳೂರಿಂದ ಫರಂಗಿಪೇಟೆವರೆಗೆ ಶಾಸಕರ ಕಾರು ಹಿಂಬಾಲಿಸಿಕೊಂಡು ಬಂದು ಬೆದರಿಕೆ ಹಾಕಿದ್ದಾರೆ. ಸ್ಕಾರ್ಪಿಯೋ ಕಾರಿನಲ್ಲಿ ಬಂದಿದ್ದ ಕೆಲವರಿಂದ ಈ ಕೃತ್ಯ ಮಾಡಲಾಗಿದೆ.
ಶಾಸಕರ ಕಾರು ಮತ್ತು ಶಾಸಕ ಹರೀಶ್ ಸಂಚಾರ ಮಾಡುತ್ತಿದ್ದ ಬೇರೊಂದು ಕಾರಿಗೆ ಬೆದರಿಕೆ ಹಾಕಿದ್ದಾರೆ. ಮಾರಕಾಸ್ತ್ರಗಳನ್ನು ತೋರಿಸಿ ಅವಾಚ್ಯವಾದಿ ನಿಂದಿಸಿದ ಆರೋಪ ಮಾಡಲಾಗಿದೆ. ಹರೀಶ್ ಪೂಂಜಾ ಕಾರು ಚಾಲಕ ನವೀನ್ ದೂರು ನೀಡಿದ್ದು, ಪೊಲೀಸರು ಚಾಲಕ ನೀಡಿದ ದೂರಿನಡಿ ಪ್ರಕರಣ ದಾಖಲು ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಘಟನೆ ನಡೆದಿದೆ.
ಶಾಸಕ ಹರೀಶ್ ಪೂಂಜಾ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ್ದಾರೆ ಎಂದು ಶಾಸಕರ ಕಾರು ಚಾಲಕ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ವೈಟ್ ಸ್ಕಾರ್ಪಿಯೋ ಕಾರೊಂದು ನಿನ್ನೆ ರಾತ್ರಿ ಮಂಗಳೂರಿನಿಂದ ಫರಂಗಿಪೇಟೆವರೆಗೆ ಶಾಸಕರ ಕಾರನ್ನು ಹಿಂಬಾಲಿಸಿಕೊಂಡು ಬಂದಿದೆ.
Published On - 11:08 am, Fri, 14 October 22