ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್​ನಲ್ಲಿ ರಿಲೀಫ್

24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ಮತ ಯಾಚಿಸಿದ್ದೀರಿ. ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಕೇಳಿದ್ದೀರಿ ಎಂದು ಪೂಂಜಾ ಹೇಳಿದ್ದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಭಾಷಣ; ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್​ನಲ್ಲಿ ರಿಲೀಫ್
ಹರೀಶ್ ಪೂಂಜಾ
Follow us
Ganapathi Sharma
|

Updated on: Jun 10, 2023 | 3:46 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು 24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ್ದಾರೆ ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ದಕ್ಷಿಣ ಕನ್ನಡದ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ಅವರಿಗೆ ಕರ್ನಾಟಕ ಹೈಕೋರ್ಟ್​​ನಲ್ಲಿ ಶುಕ್ರವಾರ ರಿಲೀಫ್ ಸಿಕ್ಕಿದೆ. ಪೂಂಜಾ ಪರ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠವು ಪ್ರಕರಣದ ಪೊಲೀಸ್ ತನಿಖೆಗೆ ತಡೆ ನೀಡಿದೆ. ಶಾಸಕರ ವಿರುದ್ಧ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಮೂರು ದೂರುಗಳು ದಾಖಲಾಗಿದ್ದವು.

ಪೂಂಜಾ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ, ಐಪಿಸಿ ಸೆಕ್ಷನ್ 153ಎ ಅಡಿಯಲ್ಲಿ ಪ್ರಕರಣ ದಾಖಲಿಸುವುದು ಸೂಕ್ತವಲ್ಲ. ಅದಕ್ಕಾಗಿಯೇ ಪೂಂಜಾ ವಿರುದ್ಧ ಎಫ್‌ಐಆರ್ ದಾಖಲಿಸಲು ವಿಳಂಬವಾಗಿದೆ. ಹೇಳಿಕೆಯ ನಂತರ ಯಾವುದೇ ಹಿಂಸಾಚಾರದ ಘಟನೆಗಳು ವರದಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಟ್ಟರು. ವಾದವನ್ನು ಆಲಿಸಿ, ಪರಿಗಣಿಸಿದ ಪೀಠವು ತನಿಖೆಗೆ ತಡೆಯಾಜ್ಞೆ ನೀಡಿದೆ.

ಇತ್ತೀಚೆಗೆ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಹಿಂದೂ ಕಾರ್ಯಕರ್ತ ಸತ್ಯಜಿತ್ ಸುರತ್ಕಲ್ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ನಡೆಸಿದ್ದರು ಎನ್ನಲಾಗಿತ್ತು. ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದ ಪೂಂಜಾ, ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಡಿಯೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

24 ಹಿಂದೂ ಕಾರ್ಯಕರ್ತರ ಹತ್ಯೆ ಮಾಡಿದ ಸಿದ್ದರಾಮಯ್ಯನವರಿಗೆ ಮತ ಯಾಚಿಸಿದ್ದೀರಿ. ಭಜರಂಗದಳವನ್ನು ನಿಷೇಧಿಸಲು ಮುಂದಾಗಿರುವ ಕಾಂಗ್ರೆಸ್‌ಗೆ ಮತ ಕೇಳಿದ್ದೀರಿ ಎಂದು ಪೂಂಜಾ ಹೇಳಿದ್ದರು.

ಇದನ್ನೂ ಓದಿ: ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ: ಡಿಜಿ ಐಜಿಪಿ ಅಲೋಕ್ ಮೋಹನ್

2013ರಿಂದ 2018ರ ಸಿದ್ದರಾಮಯ್ಯನವರ ಆಡಳಿತಾವಧಿಯಲ್ಲಿ ಕರಾವಳಿ ಕರ್ನಾಟಕ ಭಾಗದಲ್ಲಿ, ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯು ಹಿಂದೂ ಕಾರ್ಯಕರ್ತರ ಸರಣಿ ಹತ್ಯೆಗಳಿಗೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಹೇಳುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಕೇಸರಿ ಪಕ್ಷ ಆರೋಪಿಸಿದೆ.

ಬಿಜೆಪಿ ಇದನ್ನು 2018 ರ ಚುನಾವಣಾ ವಿಷಯವಾಗಿಸಿತ್ತು ಮತ್ತು ಕರಾವಳಿ ಪ್ರದೇಶದಲ್ಲಿ ಚುನಾವಣೆಗಳಲ್ಲಿ ಗೆದ್ದಿತ್ತು. ಆದರೆ, ಈ ಆರೋಪಗಳನ್ನು ತಳ್ಳಿಹಾಕಿರುವ ಸಿದ್ದರಾಮಯ್ಯ, ವೈಯುಕ್ತಿಕ ದ್ವೇಷ ಹಾಗೂ ವೈಷಮ್ಯದಿಂದ ಕೊಲೆ ನಡೆದಿದೆ ಎಂದು ಹೇಳಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ