AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ

ಮಂಗಳೂರು ಟು ಬೆಂಗಳೂರು ರೈಲು ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದರೂ, ಯಶವಂತಪುರ-ಮಡಗಾಂವ್ ವಂದೇ ಭಾರತ್ ರೈಲು ಮಂಗಳೂರಿನಲ್ಲಿ ನಿಲುಗಡೆ ನೀಡದಿರುವುದು ಕರಾವಳಿ ಜನರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ. ರೈಲ್ವೆ ಇಲಾಖೆಯ ಈ ನಿರ್ಧಾರದ ವಿರುದ್ಧ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ನಿಲುಗಡೆಗಾಗಿ ಒತ್ತಾಯಿಸಲಾಗಿದೆ.

ಮಂಗಳೂರಿನಲ್ಲಿ ನಿಲ್ಲದ ವಂದೇ ಭಾರತ್ ರೈಲು​​: ನಿಂತು ಟಾಟಾ ಮಾತ್ರ ಮಾಡ್ಬೇಕಾ ಎಂದು ಕರಾವಳಿಗರು ಆಕ್ರೋಶ
ವಂದೇ ಭಾರತ್ ರೈಲುImage Credit source: tv9 kannada
ಅಶೋಕ್​ ಪೂಜಾರಿ
| Edited By: |

Updated on: Feb 25, 2026 | 4:52 PM

Share

ಮಂಗಳೂರು, ಫೆಬ್ರವರಿ 25: ಮಂಗಳೂರು-ಬೆಂಗಳೂರು ರೈಲು ಮಾರ್ಗದಲ್ಲಿ ಬಾಕಿಯಿದ್ದ ಘಾಟ್ ಸೆಕ್ಷನ್‌ನ ಹಳಿ ವಿದ್ಯುದೀಕರಣ ಪೂರ್ತಿ ಆಗಿದೆ. ಇನ್ನೇನು ಕಡಲನಗರಿಗೆ ವಂದೇ ಭಾರತ್ ರೈಲು (Vande Bharat) ಸಂಚಾರ ಮಾಡುತ್ತೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಮಂಗಳೂರಿಗೆ (Mangaluru) ರೈಲ್ವೆ ಇಲಾಖೆ ಬಿಗ್‌ ಶಾಕ್‌ ನೀಡಿದೆ. ವಂದೇ ಭಾರತ್ ರೈಲು ಮಂಗಳೂರು ಮೂಲಕವೇ ಹಾದು ಹೋದರೂ ಇಲ್ಲಿ ನಿಲುಗಡೆ ನೀಡದಿರುವುದು ರೈಲು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಹೆಬ್ಬಾಗಿಲನ್ನೇ ಮರೆತ ವಂದೇ ಭಾರತ್ ರೈಲು

ಕರಾವಳಿ ತೀರದಲ್ಲಿ ಕರ್ನಾಟಕದ ಹೆಬ್ಬಾಗಿಲೆಂದೇ ಪ್ರಸಿದ್ಧಿ ಪಡೆದ ಮಂಗಳೂರಿಗೆ ಎರಡು ವಂದೇ ಭಾರತ್ ರೈಲು ನೀಡುವುದಾಗಿ ಇತ್ತಿಚೇಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭರವಸೆ ನೀಡಿದ್ದರು. ಆದರೆ ಇದೀಗ ಮಂಗಳೂರು ಉಡುಪಿಗೆ ಈ ವಂದೇ ಭಾರತ್ ರೈಲು ಕೈ ತಪ್ಪುವ ಶಂಕೆ ಎದುರಾಗಿದೆ. ಯಶವಂತಪುರ-ಮಡಗಾಂವ್ ನಡುವೆ ಪ್ರಸ್ತಾವಿತ ವಂದೇ ಭಾರತ್ ರೈಲು ಮಂಗಳೂರು ವ್ಯಾಪ್ತಿಯಲ್ಲಿ ಹಾದು ಹೋಗುತ್ತಿದ್ದರೂ ನಗರದಲ್ಲಿ ನಿಲುಗಡೆ ನೀಡದಿರುವುದು ರೈಲ್ವೆ ಪ್ರಯಾಣಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ನಾವು ರೈಲು ನಿಲ್ದಾಣದಲ್ಲಿ ನಿಂತು ಕೇವಲ ಟಾಟಾ ಮಾತ್ರ ಮಾಡಬೇಕಾ ಎಂದು ಪ್ರಯಾಣಿಕರು ಪ್ರಶ್ನಿಸುತ್ತಿದ್ದಾರೆ.

ರೈಲು ವೇಳಾಪಟ್ಟಿ ಹೀಗಿದೆ

ದಕ್ಷಿಣ-ಪಶ್ಚಿಮ ರೈಲ್ವೆಯ ಕಾರ್ಯಾಚರಣೆ ವಿಭಾಗ ಹೊರಡಿಸಿದ ಅಧಿಕೃತ ಪತ್ರದ ಪ್ರಕಾರ ಯಶವಂತಪುರ ಮತ್ತು ಮಡಗಾಂವ್ ನಡುವೆ ವಂದೇ ಭಾರತ್ ರೈಲು ಸೇವೆಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲಾಗಿದೆ. ಪ್ರಸ್ತಾವನೆಯಂತೆ ರೈಲು ಬೆಳಗ್ಗೆ 6.05ಕ್ಕೆ ಯಶವಂತಪುರದಿಂದ ಹೊರಟು ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ಮಾರ್ಗವಾಗಿ ಪಡೀಲ್ ಹಾಗೂ ತೋಕೂರು ಮೂಲಕ ಸಂಜೆ 7.15ಕ್ಕೆ ಮಡಗಾಂವ್ ತಲುಪಲಿದೆ.

ಮರಳಿ ಮಡಗಾಂವ್‌ನಿಂದ ಬೆಳಗ್ಗೆ 5.30ಕ್ಕೆ ಹೊರಟು ಸಂಜೆ 6.40ಕ್ಕೆ ಯಶವಂತಪುರ ತಲುಪುವಂತೆ ಯೋಜಿಸಲಾಗಿದೆ. ಆದರೆ ಈ ವೇಳಾಪಟ್ಟಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಬ್ರಹ್ಮಣ್ಯ ನಿಲ್ದಾಣಕ್ಕೆ ಮಾತ್ರ ನಿಲುಗಡೆ ಸೂಚಿಸಲಾಗಿದೆ. ಮಂಗಳೂರು ಜಂಕ್ಷನ್ ಅಥವಾ ಮಂಗಳೂರು ಸೆಂಟ್ರಲ್ ನಿಲ್ದಾಣಗಳಲ್ಲಿ ಯಾವುದೇ ನಿಲುಗಡೆ ಇಲ್ಲ. ಬದಲಾಗಿ ಪಡೀಲ್ ಮೂಲಕ ರೈಲು ಹಾದು ಹೋಗಲಿದೆ. ಹೀಗಾಗಿ ಕರಾವಳಿಯ ಪ್ರಮುಖ ವಾಣಿಜ್ಯ, ಶಿಕ್ಷಣ ಹಾಗೂ ಆರೋಗ್ಯ ಕೇಂದ್ರವಾದ ಮಂಗಳೂರಿಗೆ ನಿಲ್ದಾಣ ನೀಡದಿರುವುದು ಪ್ರಯೋಜನವಿಲ್ಲದ ಸೇವೆ ಎಂಬ ಟೀಕೆಗೆ ಕಾರಣವಾಗಿದೆ.

ಇದನ್ನೂ ಓದಿ: ಶಿರಸಿ ಮಾರಿಕಾಂಬಾ ಜಾತ್ರೆಗೆ ಹೋಗುವ ಭಕ್ತರಿಗೆ ಡಬಲ್ ಗುಡ್​​​ ನ್ಯೂಸ್​​ ನೀಡಿದ ರೈಲ್ವೆ ಇಲಾಖೆ

ಕೇವಲ ಮಂಗಳೂರು ಮಾತ್ರವಲ್ಲ ಉಡುಪಿ, ಕಾರವಾರಗಳಂತಹ ಜಿಲ್ಲಾ ಕೇಂದ್ರಗಳಲ್ಲು ನಿಲುಗಡೆ ನೀಡದಿರುವುದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಉಭಯ ಜಿಲ್ಲೆಗಳ ರೈಲು ಬಳಕೆದಾರರು, ಸಂಸದರು ಹಾಗೂ ರೈಲ್ವೆ ಸಚಿವರಿಗೆ ಟ್ವಿಟ್ಟರ್ ಮೂಲಕ ಹಕ್ಕೊತ್ತಾಯ ಆರಂಭಿಸಿದ್ದಾರೆ.

ಒಟ್ಟಿನಲ್ಲಿ ಅಂತಿಮ ವೇಳಾಪಟ್ಟಿ ಪ್ರಕಟಿಸುವ ಮುನ್ನ ರೈಲ್ವೆ ಇಲಾಖೆ ಸ್ಥಳೀಯ ಜನಪ್ರತಿನಿಧಿಗಳು, ಹೋರಾಟಗಾರರು ಮತ್ತು ಸಾರ್ವಜನಿಕ ಅಭಿಪ್ರಾಯವನ್ನು ಪರಿಗಣಿಸಿ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ್​ ಪೂಜಾರಿ
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್​​​ಗೆ​​ 14 ದಿನ ನ್ಯಾಯಾಂಗ ಬಂಧನ
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಸರ್ಕಾರಿ ಆಸ್ಪತ್ರೆಗಳಲ್ಲಿ ಹುಟ್ಟಿದ ಕಂದಮ್ಮಗಳಿಗೆ ಈ ವಿಶೇಷ ವಸ್ತು ಗಿಫ್ಟ್​
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!