AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧ

ಕೇಂದ್ರ ಸರ್ಕಾರ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಸೇವೆ ಘೋಷಿಸಿದೆ. ಸಚಿವ ವಿ. ಸೋಮಣ್ಣ ಈ ಕುರಿತು ಮಾಹಿತಿ ನೀಡಿದ್ದು, ಕರಾವಳಿ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿದೆ. ಈ ಸೆಮಿ-ಹೈಸ್ಪೀಡ್ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಿ, ಆರಾಮದಾಯಕ ಪ್ರಯಾಣ ಒದಗಿಸುತ್ತದೆ. ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆಯ ಘಾಟ್ ವಿಭಾಗದ ವಿದ್ಯುದೀಕರಣ ಕಾರ್ಯದಿಂದ ಪರಿಸರ ಸ್ನೇಹಿ ಮತ್ತು ಇಂಧನ ದಕ್ಷ ರೈಲು ಸಂಚಾರ ಸಾಧ್ಯವಾಗಲಿದೆ. ಇದು ಪ್ರಮುಖ ಮೂಲಸೌಕರ್ಯ ಮೈಲಿಗಲ್ಲು.

ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೋಗುವವರಿಗೆ ಗುಡ್​​​ ನ್ಯೂಸ್​​ ನೀಡಿದ ಕೇಂದ್ರ, ವಂದೇ ಭಾರತ್ ಎಕ್ಸ್‌ಪ್ರೆಸ್ ಸಂಚಾರಕ್ಕೆ ಸಿದ್ಧ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Dec 31, 2025 | 10:18 PM

Share

ಮಂಗಳೂರು, ಡಿ.31: ಮಂಗಳೂರು ಜನರಿಗೆ ಬಿಗ್​​ ಗುಡ್​​​ನ್ಯೂಸ್​​ ನೀಡಿದ ಕೇಂದ್ರ ಸರ್ಕಾರ, ಇನ್ಮುಂದೆ ರೈಲು ಪ್ರಯಾಣಿಕರ ವೇಗವನ್ನು ಹೆಚ್ಚಿಸಲಿದೆ. ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ಸಂಪರ್ಕಿಸಲಿದೆ ಎಂದು ಹಿಂದೂಸ್ಥಾನ್​​​​​​​​​​​ ಟೈಮ್ಸ್​​​ ವರದಿ ಮಾಡಿದೆ. ಈ ಮೂಲಕ ಕರಾವಳಿಗೆ ಹೋಗುವ ಬೆಂಗಳೂರಿನ ಪ್ರಯಾಣಿಕರು ಶೀಘ್ರದಲ್ಲೇ ವೇಗವಾದ ಮತ್ತು ಹೆಚ್ಚು ಆರಾಮದಾಯಕ ರೈಲು ಪ್ರಯಾಣವನ್ನು ಆನಂದಿಸಬಹುದು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಹುನಿರೀಕ್ಷಿತ ಸೆಮಿ-ಹೈಸ್ಪೀಡ್ ರೈಲು ಸೇವೆ ಕೊನೆಗೂ ಹಳಿಗೆ ಬರಲಿದೆ ಎಂಬ ಸುಳಿವು ನೀಡಿದ್ದಾರೆ. ಇದೀಗ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುವ ಜನರಿಗೆ ಇದು ಆಶಾಭಾವನೆಯನ್ನು ಮೂಡಿಸಿದೆ. ವಂದೇ ಭಾರತ್ ಸೇವೆಯನ್ನು ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಯೋಜಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯ ಕ್ಷೇತ್ರಗಳಿಗೆ ಹೋಗುವವರಿಗೆ ಇದು ಸಹಾಯವಾಗಲಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲೂ ಸಚಿವ ವಿ. ಸೋಮಣ್ಣ ಹಂಚಿಕೊಂಡಿದ್ದಾರೆ. ಈಗಾಗಲೇ ಮಂಗಳೂರು – ಬೆಂಗಳೂರು ವಂದೇ ಭಾರತ್ ಸೇವೆ ಅಂತಿಮವಾಗಿದೆ. ಕರ್ನಾಟಕದ ರಮಣೀಯ ಪಶ್ಚಿಮ ಘಟ್ಟಗಳ ಮೂಲಕ ಐಕಾನಿಕ್ ವಂದೇ ಭಾರತ್ ರೈಲುಗಳು ಶೀಘ್ರದಲ್ಲೇ ಓಡುವುದನ್ನು ಕಾಣಬಹುದು. ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಬರೆದುಕೊಂಡಿದ್ದಾರೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿಮೀ ಘಾಟ್ ವಿಭಾಗದಲ್ಲಿ ವಿದ್ಯುದೀಕರಣ ಕಾರ್ಯವನ್ನು ಪೂರ್ಣಗೊಳಿಸುವ ಮೂಲಕ ಹೊಸ ಸೇವೆಗೆ ದಾರಿ ಮಾಡಿಕೊಡಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮಡಗಾಂವ್‌ ನಡುವೆ ವಂದೇ ಭಾರತ್​​ ರೈಲು ಆರಂಭಕ್ಕೆ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಮನವಿ

ಇದು ಮುಖ್ಯ ಮೂಲಸೌಕರ್ಯ ಮೈಲಿಗಲ್ಲು ಎಂದು ಹೇಳಿದ್ದಾರೆ. ಈ ರೈಲು ಮಾರ್ಗದಲ್ಲಿ ಸಂಪೂರ್ಣ ವಿದ್ಯುದ್ದೀಕರಣವಾಗಲಿದೆ. ಈ ರೈಲು ಕಾರ್ಯಾಚರಣೆ ಸ್ವಚ್ಛ, ತ್ವರಿತ ಮತ್ತು ಹೆಚ್ಚು ಇಂಧನ ಉಳಿತವನ್ನು ಮಾಡಲಿದೆ ಎಂದು ಹೇಳಿದ್ದಾರೆ. ಈ ಮೂಲಕ ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ರೈಲು ಜಾಲವನ್ನು ಬಲಪಡಿಸುತ್ತದೆ. ಇನ್ನು ಬೆಂಗಳೂರು ಮತ್ತು ಮಂಗಳೂರು ನಡುವೆ ವಂದೇ ಭಾರತ್ ರೈಲಿನ ದೀರ್ಘಕಾಲದ ಬೇಡಿಕೆಯ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನದಾಸ್ ಪೈ ಅವರ ಹಂಚಿಕೊಂಡಿದ್ದ ಪೋಸ್ಟ್​​​ಗೆ ಸಚಿವ ವಿ. ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:09 pm, Wed, 31 December 25

ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​