AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ

ಇತ್ತೀಚೆಗಷ್ಟೇ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದೆ. ಈ ಮಧ್ಯೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. ಹೌದು, ಉತ್ತರ ಕರ್ನಾಟಕ ಭಾಗದಲ್ಲಿ ಮಾಸ್​ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ.

ಉತ್ತರ ಕರ್ನಾಟಕ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಾಸ್ ಕಾಪಿ ಆಗ್ತಿತ್ತು;ಭೋಜೇಗೌಡ ಗಂಭೀರ ಆರೋಪ
ಭೋಜೇಗೌಡ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 19, 2024 | 3:55 PM

Share

ದಕ್ಷಿಣ ಕನ್ನಡ, ಮೇ.19: ಈ ಹಿಂದೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ(SSLC Exam)ಯಲ್ಲಿ ಮಾಸ್ ಕಾಪಿ‌ ಆಗುತ್ತಿತ್ತು ಎಂದು ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ(SL Bhojegowda) ಆರೋಪ ಮಾಡಿದ್ದಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ವಿದ್ಯಾಭ್ಯಾಸಕ್ಕೆ ಮಾರಕವಾಗುತ್ತಿತ್ತು. ಈ ಹಿನ್ನಲೆ ನೈರುತ್ಯ ಕ್ಷೇತ್ರಗಳಿಗೆ ಪರೀಕ್ಷೆ ಸಮಯ ಅನ್ಯಾಯ ಆಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನಲ್ಲಿ ಹೇಳಿದ್ದೆ. ಜೊತೆಗೆ ಪರೀಕ್ಷೆ ವೇಳೆ ಸಿಸಿಟಿವಿ ಅಳವಡಿಕೆ ಕುರಿತು ಪರಿಷತ್​​ನಲ್ಲಿ ಆಗ್ರಹಿಸಿದ್ದೆ ಎಂದರು.

ಮಂಗಳೂರಿನಲ್ಲಿ ಮಾತನಾಡಿದ ಅವರು, ‘ ಆಗ ಆ ಭಾಗದಲ್ಲಿ ಮಾಸ್ ಕಾಪಿ‌ ಆಗ್ತಾ ಇತ್ತು ಎಂದು ಪರೋಕ್ಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕಾಪಿ ಆಗುತ್ತಿತ್ತು ಎಂದು ಆರೋಪಿಸಿದ್ದಾರೆ. ಅದನ್ನು ತಡೆದು ಮಾಸ್ ಕಾಪಿ ನಿಲ್ಲಿಸಲು‌ ಕ್ಯಾಮಾರ ಹಾಕಲು ಹೇಳಿದ್ದೆ. ಅದರ ಪರಿಣಾಮ ಈ ಬಾರಿ‌ ಪರೀಕ್ಷೆಯಲ್ಲಿ ಸಿಸಿಟಿವಿ ಹಾಕಿದ್ದಾರೆ. ಹೀಗಾಗಿ ಈ ಬಾರಿ ಸರಿಯಾಗಿ ಪರೀಕ್ಷೆ ನಡೆದು ಫಲಿತಾಂಶ ಬಂದಿದೆ ಎಂದರು.

ಇದನ್ನೂ ಓದಿ:ಯಾದಗಿರಿ: ಎಸ್‌ಎಸ್‌ಎಲ್‌ಸಿ‌ ಪರೀಕ್ಷೆಯಲ್ಲಿ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರ ಅಮಾನತು

ಬಹಳ ಹಿಂದಿನಿಂದಲೂ ಅನ್ಯಾಯ ಆಗ್ತಾ ಇದೆ ಎಂದು ಹೋರಾಟ ಮಾಡಿದ್ದೆ. ನಿಜವಾದ ಶಿಕ್ಷಣ ಸಿಗಬೇಕು ಎಂದು  ಪರಿಷತ್​ನಲ್ಲಿ‌ ಆಗ್ರಹಿಸಿದ್ದೆ. ಈಗ ನಾವು ಮತ್ತೆ ಅದರ ಬಗ್ಗೆ ಧ್ವನಿ ಎತ್ತಬೇಕಿದೆ. ಈ ಹಿಂದಿನ ಅನಾಹುತದ ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು. ಈಗಿನ ರಿಸಲ್ಟ್ ನೋಡಿಯಾದ್ರೂ ಹಿಂದಿನ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಈ ಬಗ್ಗೆ ನಾನು ಮುಂದೆ ಪರಿಷತ್​ನಲ್ಲಿ ಆಗ್ರಹ‌ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?