ಮಂಗಳೂರು: ರಸ್ತೆ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಂಜಿನಿಯರಿಂಗ್ ವಿದ್ಯಾರ್ಥಿ(Engineering Student)ಯೊರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಸಹ್ಯಾದ್ರಿ ಕಾಲೇಜು ಸಮೀಪದ ಅಡ್ಯಾರ್‌ನಲ್ಲಿ ಬುಧವಾರ ನಡೆದಿದೆ. ಮೃತರನ್ನು ಮೊಹಮ್ಮದ್ ನಶಾತ್ (21) ಎಂದು ಗುರುತಿಸಲಾಗಿದೆ. ಸ್ಥಳೀಯ ವರದಿಗಳ ಪ್ರಕಾರ, ಇಂಜಿನಿಯರಿಂಗ್ ವಿದ್ಯಾರ್ಥಿಯಾದ ನಶಾತ್ ಅವರು ಬೆಳಿಗ್ಗೆ 11.30 ರ ಸುಮಾರಿಗೆ ಕಾಲೇಜಿಗೆ ಹೋಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ. ಇನ್ನು ಭೀಕರ ಅಪಘಾತದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನಶಾತ್ ಅವರ ಮೋಟಾರ್‌ಸೈಕಲ್ ಬ್ಯಾಲೆನ್ಸ್ ಕಳೆದುಕೊಂಡು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ವೇಗದಲ್ಲಿ ಬರುತ್ತಿದ್ದ ಮೃತ ವಿದ್ಯಾರ್ಥಿ ಮೊಹಮ್ಮದ್ ನಶಾತ್ ಅವರು ಕಾಲೇಜಿಗೆ ತೆರಳುತ್ತಿದ್ದರು. ಈ ವೇಳೆ ಅವರ ಬೈಕ್ನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ. ಇನ್ನು ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಮೃತ ಯುವಕ ಗಾಳಿಯಲ್ಲಿ ಮೇಲಕ್ಕೆ ಹಾರಿ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ಆತನ ಹೆಲ್ಮೇಟ್ ಕೂಡ ಕೆಳಗಡೆ ಬಿದ್ದಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಪರಿಣಾಮ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
#Mangaluru CCTV footage of a bike accident which killed an engineering student near Sahyadri Engineering College at Adyar @XpressBengaluru @compolmlr @MangaloreCity @Lolita_TNIE @112Mangaluru pic.twitter.com/LG9DfGmmoY
— vincent dsouza (@vinndz_TNIE) July 19, 2023
Published On - 1:40 pm, Thu, 20 July 23