ಬಿಪೊರ್ ಜಾಯ್ ಅಬ್ಬರ, ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ

ಬಿಪರ್ ಜಾಯ್ ಚಂಡಮಾರುತ ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಅಲ್ಲದೆ, ಮುಂದಿನ 5 ದಿನ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿಯದಂತೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಪೊರ್ ಜಾಯ್ ಅಬ್ಬರ, ಕರಾವಳಿ ಭಾಗದಲ್ಲಿ ಹೈ ವೇವ್ ಅಲರ್ಟ್, ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಸೂಚನೆ
Follow us
Rakesh Nayak Manchi
|

Updated on: Jun 14, 2023 | 3:27 PM

ಮಂಗಳೂರು: ಬಿಪೊರ್ ಜಾಯ್ ಚಂಡಮಾರುತ (Biparjoy Cyclone) ತೀವ್ರಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಅಲೆ ಏಳುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆಯು (India Meteorological Department) ಅಲರ್ಟ್ ಘೋಷಣೆ ಮಾಡಿದೆ. ಯಾವುದೇ ಕಾರಣಕ್ಕೂ ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಲಾಗಿದ್ದು, ಸಮುದ್ರದ ಹತ್ತಿರ ಓಡಾಡುವುದು, ಆಟವಾಡುವುದು ಕೂಡಾ ನಿಷೇಧಿಸಿ ದಕ್ಷಿಣಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶ ಹೊರಡಿಸಿದೆ.

ದಕ್ಷಿಣಕನ್ನಡ ಜಿಲ್ಲೆಯು 42 ಕಿ.ಮೀ ಕರಾವಳಿ ತೀರ ಹೊಂದಿದೆ. ಪಶ್ಚಿಮ ಕರಾವಳಿಗೆ ಬಿಪರ್ ಜಾಯ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಹಿನ್ನೆಲೆ ಎಚ್ಚರಿಕೆ ನೀಡಲಾಗಿದ್ದು, ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಜೂನ್ 19 ರ ವರೆಗೂ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ: Cyclone Biparjoy: ಚಂಡಮಾರುತ ಸಮಯದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಲಹೆ ನೀಡಿದ ಎನ್​ಡಿಆರ್​ಎಫ್

ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪೊರ್ ಜಾಯ್ ಚಂಡಮಾರುತವು ಮತ್ತಷ್ಟು ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಇಂದು ಬೆಳಿಗ್ಗೆ ಸೌರಾಷ್ಟ್ರ ಮತ್ತು ಕಚ್ ಕರಾವಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, ಇತರ ರಾಜ್ಯಗಳಿಗೂ ಚಂಡಮಾರುತ ಅಪ್ಪಳಿಸಲಿದೆ ಎಂದು ನಿರೀಕ್ಷಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಂಗಳವಾರ ರಾಷ್ಟ್ರ ರಾಜಧಾನಿಯಲ್ಲಿ ಬಿಪೊರ್‌ ಜಾಯ್ ಚಂಡಮಾರುತದ ಬಗ್ಗೆ ಸಭೆಯನ್ನು ನಡೆಸಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ಯಾವುದೇ ಸಾವು ನೋವುಗಳು ದಾಖಲಾಗದಂತೆ ಹಾಗೂ ಸಂಭವನೀಯ ಹಾನಿಯನ್ನು ಕಡಿಮೆ ಮಾಡಲು ಬೇಕಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ, ಸಚಿವರಿಗೆ ಸೂಚನೆ ನೀಡಿದ್ದಾರೆ.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಚಂಡಮಾರುತದ ಪ್ರಭಾವ ಬೀರಿರುವ ರಾಜ್ಯದ ಎಂಟು ಜಿಲ್ಲೆಗಳ ಸಂಸದರು ಸಭೆಯಲ್ಲಿ ಭಾಗವಹಿಸಿದ್ದರು. ಬಿಪರ್‌ಜೋಯ್ ಚಂಡಮಾರುತವು ಜೂನ್ 15 ರಂದು ಗುಜರಾತ್ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ.

ಇದನ್ನೂ ಓದಿ: Biparjoy Cyclone: ಬೆಳೆಹಾನಿ ನಷ್ಟ ಪರಿಹಾರ ಹೆಚ್ಚಿಸಲು ಕೇಂದ್ರಕ್ಕೆ ಕೃಷ್ಣಭೈರೇಗೌಡ ಮನವಿ

ಗುಜರಾತ್‌ನ ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಬಿಪರ್‌ಜೋಯ್‌ ಚಂಡಮಾರುತದ ಪ್ರಭಾವದಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಎರಡು ದಿನಗಳ ಮೊದಲೇ ಅಧಿಕಾರಿಗಳು ಕರಾವಳಿ ಪ್ರದೇಶಗಳಿಂದ 30,000 ಜನರನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿದ್ದಾರೆ.

ಹವಾಮಾನ ಇಲಾಖೆಯ ಪ್ರಕಾರ, ಚಂಡಮಾರುತವು ಗಂಟೆಗೆ ಐದು ಕಿಲೋಮೀಟರ್ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸುತ್ತಿದೆ ಮತ್ತು ಗುಜರಾತ್‌ನ ಪೋರಬಂದರ್‌ನಿಂದ ಸುಮಾರು 290 ಕಿಮೀ ನೈಋತ್ಯಕ್ಕೆ ಅಪ್ಪಳಿಸಲಿದೆ. ಇದು ಗುರುವಾರ ಗುಜರಾತ್‌ನ ಸೌರಾಷ್ಟ್ರ ಮತ್ತು ಕಚ್ ಪ್ರದೇಶಗಳು ಹಾಗೂ ಪಕ್ಕದ ಪಾಕಿಸ್ತಾನದ ಕರಾವಳಿಯನ್ನು ದಾಟುವ ನಿರೀಕ್ಷೆಯಿದೆ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ