Mangaluru News: ರನ್ ವೇನಿಂದ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

Mangaluru News: ರನ್ ವೇನಿಂದ ಟೇಕಾಫ್ ಆಗುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

Updated on: May 25, 2023 | 10:29 AM

ಮಂಗಳೂರು: ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Mangaluru International Airport) ಭಾರೀ ದುರಂತ ತಪ್ಪಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ 8.30ಕ್ಕೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ.

ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಇಂಡಿಗೋ ವಿಮಾನ ಸಾಗುತ್ತಿತ್ತು. ಈ ವೇಳೆ ಏಕಾಏಕಿಯಾಗಿ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯದ ಸೂಚನೆ ಅರಿತು ಪೈಲಟ್ ಎಟಿಸಿಗೆ ಮಾಹಿತಿ ನೀಡಿದ್ದಾರೆ. ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಿಮಾನವನ್ನು ವಾಪಾಸ್ ತರಲಾಗಿದೆ. ಸದ್ಯ ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡಲಾಗುತ್ತಿದೆ. ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ಪ್ರಯಾಣಿಕರನ್ನು ದುಬೈಗೆ ಕಳಿಸಲು ವ್ಯವಸ್ಥೆ ಮಾಡಲಾಗಿದೆ. ಕೆಲ ಕಾಲ ಮಂಗಳೂರು ಏರ್ಪೋರ್ಟ್ ನಲ್ಲಿ ಈ ಅವಘಡ ಆತಂಕಕ್ಕೆ ಕಾರಣವಾಗಿತ್ತು.

ಮಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:17 am, Thu, 25 May 23