ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?

Talapady Grama Panchayat Elections; ಪಂಚಾಯತ್ ಚುನಾವಣೆಗಳು ಪಕ್ಷದ ಆಧಾರದ ಮೇಲೆ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಎಸ್‌ಡಿಪಿಐ ಅಥವಾ ಇನ್ನಾವುದೇ ಪಕ್ಷವನ್ನು ಬೆಂಬಲಿಸಿಲ್ಲ. ಅಂತಹ ಸುದ್ದಿಗಳನ್ನು ಪ್ರಕಟಿಸುವ ಮೊದಲು ಮಾಧ್ಯಮಗಳು ಸತ್ಯ ಏನೆಂಬುದನ್ನು ಪರಿಶೀಲಿಸಲಿ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?
ಪುಷ್ಪಾವತಿ ಶೆಟ್ಟಿ & ಟಿ ಇಸ್ಮಾಯಿಲ್‌
Follow us
TV9 Web
| Updated By: Ganapathi Sharma

Updated on: Aug 11, 2023 | 4:42 PM

ಬೆಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ (BJP) ಬೆಂಬಲಿತ ಸದಸ್ಯರ ಅಡ್ಡಮತದಾನದಿಂದ ಎಸ್​ಡಿಪಿಐ (SDPI) ಬೆಂಬಲಿತ ಅಭ್ಯರ್ಥಿಗೆ ಅಧ್ಯಕ್ಷ ಸ್ಥಾನ ದೊರೆತಿದೆ ಎಂಬ ಮಾಧ್ಯಮ ವರದಿಗಳನ್ನು ಬಿಜೆಪಿ ನಾಯಕರು ಶುಕ್ರವಾರ ಅಲ್ಲಗಳೆದಿದ್ದಾರೆ. ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಈ ಕುರಿತ ವರದಿಯನ್ನು ಸುಳ್ಳು ಸುದ್ದಿ ಎಂದು ಕರೆದಿದ್ದಾರೆ. ಅದೇ ರೀತಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಕೂಡ ಅದನ್ನು ಸುಳ್ಳು ಸುದ್ದಿ ಎಂದು ಟ್ವೀಟ್ ಮಾಡಿದ್ದಾರೆ.

ಪಂಚಾಯತ್ ಚುನಾವಣೆಗಳು ಪಕ್ಷದ ಆಧಾರದ ಮೇಲೆ ನಡೆಯುವುದಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಎಸ್‌ಡಿಪಿಐ ಅಥವಾ ಇನ್ನಾವುದೇ ಪಕ್ಷವನ್ನು ಬೆಂಬಲಿಸಿಲ್ಲ. ಅಂತಹ ಸುದ್ದಿಗಳನ್ನು ಪ್ರಕಟಿಸುವ ಮೊದಲು ಮಾಧ್ಯಮಗಳು ಸತ್ಯ ಏನೆಂಬುದನ್ನು ಪರಿಶೀಲಿಸಲಿ ಎಂದು ತೇಜಸ್ವಿ ಸೂರ್ಯ ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಕೂಡ ಇದೇ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ. ‘ಇದು ನಕಲಿ ಸುದ್ದಿ. ಮೊದಲಿಗೆ, ಕರ್ನಾಟಕದಲ್ಲಿ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪಕ್ಷದ ಚಿಹ್ನೆಗಳನ್ನು ಬಳಸುವುದಿಲ್ಲ. ಹಾಗಾದರೆ ಮೈತ್ರಿ ಹೇಗೆ ಸಾಧ್ಯ? ಜತೆಗೆ ಎಸ್‌ಡಿಪಿಐಗೆ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ ಎಂದು ಅವರು ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದಾರೆ.

ಗುರುವಾರ ತಲಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಎಸ್‌ಡಿಪಿಐ ಸದಸ್ಯ ಟಿ ಇಸ್ಮಾಯಿಲ್‌ ಆಯ್ಕೆಯಾಗಿದ್ದರು. ಎಸ್‌ಡಿಪಿಐ ಅನ್ನು ನಿಷೇಧಿತ ಇಸ್ಲಾಮಿಸ್ಟ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ರಾಜಕೀಯ ವಿಭಾಗವೆಂದು ಪರಿಗಣಿಸಲಾಗಿದೆ. ಉಪಾಧ್ಯಕ್ಷರಾಗಿ ಬಿಜೆಪಿಯ ಪುಷ್ಪಾವತಿ ಶೆಟ್ಟಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಬಿಜೆಪಿ ಬೆಂಬಲಿತ ಸದಸ್ಯರಿಂದ ಎಸ್​ಡಿಪಿಐಗೆ ದಕ್ಕಿದ ಅಧ್ಯಕ್ಷ ಸ್ಥಾನ 

ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ವೇಳೆ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರು ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿರುವುದು ತಿಳಿದು ಬಂದಿದೆ ಎನ್ನಲಾಗಿತ್ತು.

ಈ ವಿಚಾರವಾಗಿ ಕರ್ನಾಟಕ ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ, ಬಿಜೆಪಿ ಹಾಗೂ ಎಸ್​ಡಿಪಿಐ ಸಂಬಂಧ – ಮೇಲೆ ಲಡಾಯಿ, ಒಳಗೊಳಗೆ ಭಾಯಿ ಭಾಯಿ ಎಂದು ಉಲ್ಲೇಖಿಸಿತ್ತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್