ಮಂಗಳೂರು: ಗ್ರಾ.ಪಂ ಅಧ್ಯಕ್ಷ ಚುನಾವಣೆಯಲ್ಲಿ SDPI ಜೊತೆ ಒಪ್ಪಂದ; ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ ಪಾಸ್

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆಯಲ್ಲಿ ಎಸ್​ಡಿಪಿಐಗೆ ಅಡ್ಡಮತದಾನ ಮಾಡಿದ್ದ ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ಪಾಸ್ ನೀಡಿದೆ.

ಮಂಗಳೂರು: ಗ್ರಾ.ಪಂ ಅಧ್ಯಕ್ಷ ಚುನಾವಣೆಯಲ್ಲಿ SDPI ಜೊತೆ ಒಪ್ಪಂದ; ಇಬ್ಬರು ಸದಸ್ಯರಿಗೆ ಬಿಜೆಪಿ ಗೇಟ್​ ಪಾಸ್
ತಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್​ಡಿಪಿಐಗೆ ಅಡ್ಡಮತದಾನ ಮಾಡಿದ ಬಿಜೆಪಿ ಬೆಂಬಲಿತ ಇಬ್ಬರು ಸದಸ್ಯರ ಉಚ್ಛಾಟನೆ
Follow us
TV9 Web
| Updated By: Rakesh Nayak Manchi

Updated on:Aug 11, 2023 | 11:13 PM

ಮಂಗಳೂರು, ಆಗಸ್ಟ್ 11: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ತಲಪಾಡಿ (Talapady) ಗ್ರಾಮ ಪಂಚಾಯತ್ ಅಧ್ಯಕ್ಷ ಸ್ಥಾನದಕ್ಕೆ ನಡೆದ ಚುನಾವಣೆಯಲ್ಲಿ ಎಸ್​ಡಿಪಿಐ (SDPI) ಬೆಂಬಲಿತ ಸದಸ್ಯರಿಗೆ ಅಡ್ಡಮತದಾನ ಮಾಡಿದ ಇಬ್ಬರು ಸದಸ್ಯರಿಗೆ ಬಿಜೆಪಿ (BJP) ಗೇಟ್​ ಪಾಸ್ ನೀಡಿದೆ. ಅಡ್ಡಮತದಾನದ ಬಗ್ಗೆ ಮಾಧ್ಯಮ ವರದಿಗಳನ್ನು ಬಿಜೆಪಿ ನಾಯಕರು ಅಳ್ಳಗಳೆದ ಬೆನ್ನಲ್ಲೇ ಈ ಕ್ರಮ ಜರುಗಿಸಿಲಾಗಿದೆ.

ಎಸ್​ಡಿಪಿಐ ಜೊತೆ ಸ್ವಂತ ಪಕ್ಷದ ಸದಸ್ಯರ ಒಳ ಒಪ್ಪಂದದಿಂದ ಬಿಜೆಪಿಗೆ ಸೋಲಾದ ಹಿನ್ನೆಲೆ ಅಡ್ಡಮತದಾನ ಚಲಾಯಿಸಿದ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರನ್ನು ಪಕ್ಷದಿಂದ ಉಚ್ಛಾಟಿಸಿ ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್‌ ಪಂಡಿತ್‌ ಹೌಸ್ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರು ಅಧ್ಯಕ್ಷ ಚುನಾವಣೆಯಲ್ಲಿ ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿ ಇಸ್ಮಾಯಿಲ್ ಅವರಿಗೆ ಅಡ್ಡಮತದಾನ ಚಲಾಯಿಸಿದ್ದರು. ಆ ಮೂಲಕ ಎಸ್​ಡಿಪಿಐ ಗೆಲುವಿಗೆ ಕಾರಣಕರ್ತರಾಗಿದ್ದರು.

ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್​​​ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?

ತಲಪಾಡಿ ಗ್ರಾಮ ಪಂಚಾಯತ್ ಆಡಳಿತದಲ್ಲಿ ಒಟ್ಟು 24 ವಾರ್ಡುಗಳಿವೆ. ಇದರಲ್ಲಿ 13 ಬಿಜೆಪಿ ಬೆಂಬಲಿತ ಸದಸ್ಯರು, 10 ಎಸ್​ಡಿಪಿಐ ಬೆಂಬಲಿತ ಸದಸ್ಯರು ಹಾಗೂ ಓರ್ವ ಕಾಂಗ್ರೆಸ್ ಸದಸ್ಯರಿದ್ದಾರೆ. ಅಧ್ಯಕ್ಷ ಚುನಾವಣೆ ಸಮಯದಲ್ಲಿ ಕಾಂಗ್ರೆಸ್‌ ಬೆಂಬಲಿತ ವೈಭವ್ ವೈ ಶೆಟ್ಟಿ ಮತ್ತು ಎಸ್​​ಡಿಪಿಐ ಬೆಂಬಲಿತ ಹಬೀಬಾ ಡಿ.ಬಿ ಗೈರಾಗಿದ್ದರು. ಹೀಗಾಗಿ ಬಹುಮತದ ಕಾರಣ ಬಿಜೆಪಿ ಸದಸ್ಯ ಸತ್ಯರಾಜ್‌ ಗೆಲ್ಲುವ ಸಾಧ್ಯತೆ ಇತ್ತು.

ಆದರೆ ಕೊನೆಯ ಕ್ಷಣದಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಾದ ಮಹಮ್ಮದ್‌ ಫಯಾಝ್‌ ಮತ್ತು ಮಹಮ್ಮದ್‌ ಅವರು ಎಸ್​ಡಿಪಿಐ ಬೆಂಬಲಿತ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆ ಇಸ್ಮಾಯಿಲ್‌ ಮತ್ತು ಬಿಜೆಪಿ ಸತ್ಯರಾಜ್‌ ನಡುವೆ ಸಮಬಲ ಸಾಧಿಸಿತ್ತು. ಕೊನೆಗೆ ಚೀಟಿ ಎತ್ತಲಾಗಿದ್ದು, ಇದರಲ್ಲಿ ಅಧ್ಯಕ್ಷ ಸ್ಥಾನ ಇಸ್ಮಾಯಿಲ್ ಪಲಾಯಿತು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:13 pm, Fri, 11 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್