ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್

Arun Kumar Puthila Deportation Notice: ಮಂಗಳೂರಿನಲ್ಲಿ ಕೋಮು ಉದ್ವಿಗ್ನತೆಯ ಬೆನ್ನಲ್ಲೇ ಇದೀಗ ಹಿಂದೂ ಮುಖಂಡರ ವಿರುದ್ಧ ಪೊಲೀಸರು ಕಠಿಣ ಕ್ರಮ ಆರಂಭಿಸಿದ್ದಾರೆ. ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಗಡೀಪಾರು ನೋಟೀಸ್ ಜಾರಿ ಮಾಡಲಾಗಿದೆ. ಆದರೆ, ಗಡೀಪಾರಿಗೆ ಕಾರಣ ಏನೆಂಬುದನ್ನು ಉಲ್ಲೇಖಿಸಿಲ್ಲ. ಜೂನ್ 6 ರಂದು ವಿಚಾರಣೆ ನಿಗದಿಯಾಗಿದ್ದು, ವಕೀಲರ ಮೂಲಕ ಅಥವಾ ಖುದ್ದು ಹಾಜರಾಗುವಂತೆ ಸೂಚಿಸಲಾಗಿದೆ.

ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್
ಅರುಣ್ ಪುತ್ತಿಲ ಹಾಗೂ ಗಡೀಪಾರು ನೋಟಿಸ್ ಪ್ರತಿ
Updated By: Ganapathi Sharma

Updated on: Jun 02, 2025 | 12:19 PM

ಮಂಗಳೂರು, ಜೂನ್ 2: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಕೋಮು ಉದ್ವಿಗ್ನತೆ ಬೆನ್ನಲ್ಲೇ ಇದೀಗ ಪೊಲೀಸರು ಹಿಂದೂ ಮುಖಂಡರ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ವಿರುದ್ಧ ಕಠಿಣ ಕ್ರಮ ಆರಂಭಿಸಿದ್ದಾರೆ. ಪೊಲೀಸರು ಮತ್ತು ಗೃಹ ಇಲಾಖೆಯ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ಗೃಹ ಸಚಿವ ಡಾ. ಜಿ ಪರಮೇಶ್ವರ್ ಹಾಗೂ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾವಣೆಗೆ ಆಗ್ರಹಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆಯುತ್ತಿದೆ. ಆರ್​​ಎಸ್​​​ಎಸ್​​ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಸೇರಿ 15 ಮಂದಿ ಕಾರ್ಯಕರ್ತರ ವಿರುದ್ಧ ಎಫ್ಎಆರ್ ದಾಖಲಾದ ಬೆನ್ನಲ್ಲೇ, ಬಿಜೆಪಿ (BJP) ಮುಖಂಡ ಅರುಣ್ ಕುಮಾರ್ ಪುತ್ತಿಲ (Arun Kumar Puthila) ವಿರುದ್ಧ ಗಡೀಪಾರು ನೋಟಿಸ್ ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ಕರ್ನಾಟಕ ಪೊಲೀಸು ಅಧಿನಿಯಮ, 1963 ಕಲಂ: 58 ರಡಿ ನೋಟೀಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ.

ಅರುಣ್ ಪುತ್ತಿಲ ಗಡಿಪಾರು ನೋಟಿಸ್​ನಲ್ಲೇನಿದೆ?

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ
ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​
ಬಿಬಿಎಂಪಿ ಶುಭ ಸುದ್ದಿ: ಬಿ ಖಾತಾ ಬದಲಿಗೆ ಎ ಖಾತಾ ನೀಡುವ ಸುಳಿವು!
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಹಿಂದೂ ಮುಖಂಡನಿಗೆ ಜೈಷ್ ಉಗ್ರ ಸಂಘಟನೆ ಹೆಸರಿನಲ್ಲಿ ಕೊಲೆ ಬೆದರಿಕೆ

‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಮಂಗಳೂರು: ಕಲ್ಲಡ್ಕ ಪ್ರಭಾಕರ ಭಟ್ ಸೇರಿ ಹಿಂದೂ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ಎಫ್​ಐಆರ್​​​

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷ ಭಾಷಣ ಮಾಡುವವರ ಹಾಗೂ ಕೋಮು ಪ್ರಚೋದನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಖಡನ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಹಿಂದು ಮುಖಂಡರ ವಿರುದ್ಧ ಕ್ರಮ ಆರಂಭವಾಗಿದೆ. ಆದರೆ, ಅರುಣ್ ಪುತ್ತಿಲಗೆ ಯಾವ ಕಾರಣಕ್ಕೆ ಗಡಿಪಾರು ನೋಟಿಸ್ ನೀಡಲಾಗಿದೆ ಎಂಬುದನ್ನು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೋಟಿಸ್​​ನಲ್ಲಿ ಉಲ್ಲೇಖಿಸಿಲ್ಲ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ