ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿ ಬಂಧನ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಮತ್ತೋರ್ವ ಆರೋಪಿಯನ್ನು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ.
ದಕ್ಷಿಣ ಕನ್ನಡ, ಜೂ.04: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು(Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ (NIA) ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಇತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ. ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು.
ಕಳೆದ ತಿಂಗಳಷ್ಟೇ ಓರ್ವ ಅರೆಸ್ಟ್
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಹೌದು, ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.
ಇದನ್ನೂ ಓದಿ:ನನ್ನ ಪತಿ ಹತ್ಯೆಯಲ್ಲಿ ಮುಸ್ತಫಾ ಪೈಚಾರ್ ಪ್ರಮುಖ ಆರೋಪಿ: ಪ್ರವೀಣ್ ನೆಟ್ಟಾರು ಪತ್ನಿ ನೂತನಾ
ಘಟನೆ ವಿವರ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಈ ಹಿನ್ನಲೆ ಎನ್ಐಎ ಅಧಿಕಾರಿಗಳು ತನಿಖೆ ಶುರು ಮಾಡಿದ್ದು, ಇದೀಗ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ