ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ಗೆ ಕಾರು ಡಿಕ್ಕಿ
ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಪಲ್ಟಿಯಾಗಿದ್ದರೆ, ಮತ್ತೊಂದೆಡೆ ಮತ್ತೋರ್ವ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ.

ಮಂಗಳೂರು, (ಜನವರಿ, 11): ಬಂಟ್ವಾಳ ಬಿಜೆಪಿ ಶಾಸಕ ಶಾಸಕ ರಾಜೇಶ್ ನಾಯ್ಕ್ (BJP MLA Rajesh Naik) ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ. ಇಂದು (ಜನವರಿ 14) ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್ಗೆ ಗಾಯವಾಗಿದೆ.
ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಕೆಳಗಿಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ: ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ರಾಜೇಶ್ ನಾಯ್ಕ್ ಕಾರಿಗೆ ಡಿಕ್ಕಿ ಹೊಡೆದ ಬಳಿಕ ಎಸ್ಕೇಪ್ ಆಗುತ್ತಿದ್ದ ಸ್ವಿಫ್ಟ್ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಅಡ್ಡಗಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಜ್ಪೆ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ರಾಜೇಶ್ ನಾಯ್ಕ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ.
Published On - 6:31 pm, Sun, 14 January 24




