ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್​ಗೆ ಕಾರು ಡಿಕ್ಕಿ

ಕಲಬುರಗಿ ಗ್ರಾಮೀಣ ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್ ಕಾರು ಪಲ್ಟಿಯಾಗಿದ್ದರೆ, ಮತ್ತೊಂದೆಡೆ ಮತ್ತೋರ್ವ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ತೆರಳುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ.

ಪೂಜೆ ಮುಗಿಸಿಕೊಂಡು ಬರುತ್ತಿದ್ದ ಬಿಜೆಪಿ ಶಾಸಕ ರಾಜೇಶ್ ನಾಯ್ಕ್​ಗೆ ಕಾರು ಡಿಕ್ಕಿ
ರಾಜೇಶ್ ನಾಯ್ಕ್​
Edited By:

Updated on: Jan 14, 2024 | 6:34 PM

ಮಂಗಳೂರು, (ಜನವರಿ, 11):  ಬಂಟ್ವಾಳ ಬಿಜೆಪಿ ಶಾಸಕ ಶಾಸಕ ರಾಜೇಶ್ ನಾಯ್ಕ್ (BJP MLA Rajesh Naik) ಅವರಿಗೆ ಕಾರು ಡಿಕ್ಕಿ ಹೊಡೆದಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ತೆಂಕ ಎಡಪದವು ಬಳಿ ಈ ಘಟನೆ ನಡೆದಿದೆ. ಇಂದು (ಜನವರಿ 14) ಎಡಪದವು ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ಹಿಂದಿರುಗುತ್ತಿದ್ದಾಗ ರಾಜೇಶ್ ನಾಯ್ಕ್​ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ಹಿನ್ನೆಲೆಯಲ್ಲಿ ರಾಜೇಶ್ ನಾಯ್ಕ್​ಗೆ ಗಾಯವಾಗಿದೆ.

ಸಂಕ್ರಮಣದ ಅಂಗವಾಗಿ ಪೂಜೆ ಮುಗಿಸಿ ಕಾರಿನತ್ತ ನಡೆದುಕೊಂಡು ಬರುವಾಗ ಮೂಡಬಿದ್ರೆ ಕಡೆಯಿಂದ ಬರುತ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಶಾಸಕ ರಾಜೇಶ್ ನಾಯ್ಕ್ ಕೆಳಗಿಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಬಿಜೆಪಿ ಶಾಸಕ ಬಸವರಾಜ್ ಮತ್ತಿಮೂಡ್​ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ರಾಜೇಶ್ ನಾಯ್ಕ್​ ಕಾರಿಗೆ ಡಿಕ್ಕಿ ಹೊಡೆದ ಬಳಿಕ ಎಸ್ಕೇಪ್ ಆಗುತ್ತಿದ್ದ ಸ್ವಿಫ್ಟ್ ಕಾರನ್ನು ಸ್ಥಳೀಯರು ಗುರುಪುರದಲ್ಲಿ ಅಡ್ಡಗಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸದ್ಯ ಬಜ್ಪೆ ಪೊಲೀಸರು, ಚಾಲಕನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸದ್ಯ ರಾಜೇಶ್ ನಾಯ್ಕ್​ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ವಾಪಸ್ ಆಗಿದ್ದಾರೆ.

Published On - 6:31 pm, Sun, 14 January 24