ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರ: ನಳಿನ್​ ಕುಮಾರ್​ ಕಟೀಲ್​

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರವಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಾಗ್ದಾಳಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರ: ನಳಿನ್​ ಕುಮಾರ್​ ಕಟೀಲ್​
ಸಂಸದ ನಳೀನ್​ ಕುಮಾರ್​ ಕಟೀಲ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ವಿವೇಕ ಬಿರಾದಾರ

Updated on: Jul 31, 2023 | 2:36 PM

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ರಾಷ್ಟ್ರ ವಿರೋಧಿ ಹಾಗೂ ಭಯೋತ್ಪಾದಕರ ಪರವಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಬಂದ ಮೇಲೆ ಜಿಹಾದಿಗಳು ತಲೆ ಎತ್ತಿದ್ದಾರೆ. ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಂದೂ ವಿರೋಧಿ ನೀತಿ ಹೆಚ್ಚಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಿಎಂ, ಗೃಹ ಸಚಿವರು ವಿಫಲರಾಗಿದ್ದಾರೆ. ಸಿದ್ದರಾಮಯ್ಯ, ಜಿ. ಪರಮೇಶ್ವರ್ ಕೇರಳ ಫೈಲ್ಸ್ (Kerala Files) ಸಿನಿಮಾ ನೋಡಲಿ. ಉಡುಪಿಯಲ್ಲಿ ನಡೆದಿರೋದು ಕೇರಳ ಫೈಲ್ಸ್ ಸಿನಿಮಾ. ಕಾಂಗ್ರೆಸ್ ಗೆದ್ದಾಗಲೇ ಪಾಕಿಸ್ತಾನ ಪರ ಜಯಘೋಷ ಕೂಗಿದರು. ಆದರೆ ಈವರೆಗೂ ಅವರನ್ನು ಸಿದ್ದರಾಮಯ್ಯ ಜೈಲಿಗೆ ಹಾಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಾಗ್ದಾಳಿ ಮಾಡಿದರು.

ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ಖಾಸಗಿ ಚಿತ್ರಿಕರಣ ಪ್ರಕರಣ ಖಂಡಿಸಿ ಮಂಗಳೂರಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಇದು ಷಂಡತನದ ಮತ್ತು ನಿರ್ವೀರ್ಯದ ಸರ್ಕಾರ‌. ಬಿಜೆಪಿ ಸರ್ಕಾರ ಇಲ್ಲಿ ತಾಕತ್ತು ತೋರಿಸಿದೆ. ಎನ್ಐಎ ಮೂಲಕ ಪಿಎಫ್​ಐ ಹುಟ್ಟಡಗಿಸಿ ನಿಷೇಧ ಮಾಡಲಾಗಿದೆ. ಇವತ್ತು ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಜಿಹಾದಿಗಳ ಜೊತೆ ಕೈ ಜೋಡಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟದ ಮಾಸ್ಟರ್​ಮೈಂಡ್​ ಬಂಧಿತ ಉಗ್ರ ಅಫ್ಸರ್​ ಪಾಷಾ

ಉಡುಪಿ ಘಟನೆ ಮುಚ್ಚಿ ಹಾಕುವ ಪ್ರಯತ್ನಗಳಾಯ್ತು‌. ಮತಾಂತರ ನಿಷೇಧ ಕಾಯ್ದೆ ರದ್ದು ಪಡಿಸುವ ಕೆಲಸ ಆಗುತ್ತಿದೆ. ಪಠ್ಯದಲ್ಲಿ ಸಾವರ್ಕರ್ ಹೆಸರು ತೆಗೆಯಲು ಯತ್ನಿಸುವ ಮೂಲಕ ಕಾಂಗ್ರೆಸ್ ರಾಷ್ಟ್ರ ವಿರೋಧಿ ಆಗಿದೆ. ನಮ್ಮ ಕಾರ್ಯಕರ್ತೆಯ‌ನ್ನ ಟ್ವೀಟ್ ಮಾಡಿದ ಕಾರಣಕ್ಕೆ ಜೈಲಿಗೆ ಹಾಕುತ್ತಾರೆ. ಆದರೆ ಜಿಹಾದಿಗಳನ್ನ, ವಿಡಿಯೋ ಮಾಡಿದವರನ್ನ ಹಾಗೂ ಹತ್ಯೆ ಮಾಡಿದವರನ್ನ ಜೈಲಿಗೆ ಹಾಕುವ ತಾಕತ್ತು ಸಿದ್ದರಾಮಯ್ಯಗೆ ಇಲ್ಲ ಎಂದು ಆಕ್ರೋಶ ವ್ಯಕ್ತಪಿಡಿಸಿದರು.

ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಭಯ ಆರಂಭವಾಗಿದೆ. ಕಾಂಗ್ರೆಸ್ ಗೆದ್ದಾಗಲೇ ಪಾಕಿಸ್ತಾನ ಪರ ಜಯಘೋಷ ಹಾಕಿದರು. ಆದರೆ ಈವರೆಗೆ ಅವರನ್ನು ಜೈಲಿಗೆ ಹಾಕಲು ಸಿದ್ದರಾಮಯ್ಯಗೆ ಆಗಿಲ್ಲ. ಮಂಗಳೂರು ಕುಕ್ಕರ್ ಬ್ಲಾಸ್ಟ್ ಆದಾಗ ಡಿಸಿಎಂ ಡಿಕೆ ಶಿವಕುಮಾರ್​ ಅವರು ನಮ್ಮ ಬ್ರದರ್ಸ್ ಅಂದಿದ್ದರು. ಆದರೆ ಇವತ್ತು ಎನ್ಐಎ ತನಿಖೆಯಲ್ಲೇ ಅವರು ಭಯೋತ್ಪಾದಕರು ಅಂತ ಬಹಿರಂಗವಾಗಿದೆ ಎಂದು ತಿಳಿಸಿದರು.

ಮೂಡಬಿದಿರೆಯಲ್ಲಿ ಪಂಚಾಯತ್ ಕಟ್ಟಡ ಉದ್ಘಾಟನೆಗೆ ಪ್ರಿಯಾಂಕ್ ಖರ್ಗೆ ಕರೆದಿಲ್ಲ ಅಂತ ಕಾರ್ಯಕ್ರಮ ರದ್ದು ಮಾಡಲಾಗಿದೆ. ಅಲ್ಲಿನ ಪಿಡಿಓ ಅನ್ನ ಇವರು ಅಮಾನತು ಮಾಡಿದ್ದಾರೆ. ಪ್ರೋಟೋಕಾಲ್ ಪ್ರಕಾರ ಉಸ್ತುವಾರಿ ಸಚಿವರು, ಶಾಸಕರ ಹೆಸರು ಹಾಕಲಾಗಿದೆ. ಆದರೆ ಪ್ರಿಯಾಂಕ್ ಖರ್ಗೆ ಹೆಸರು ಹಾಕಿಲ್ಲ ಅಂತ ಕಾರ್ಯಕ್ರಮ ರದ್ದಾಗಿದೆ. ನಾನು ಶಾಸಕ ಉಮಾನಾಥ್ ಕೋಟ್ಯಾನ್​ಗೆ ಹೇಳುತ್ತಿದ್ದೇನೆ, ನೀವು ಹೋಗಿ ಉದ್ಘಾಟನೆ ಮಾಡಿ, ತಾಕತ್ತು ಇದ್ದರೇ ಇವರು ನಿಮ್ಮನ್ನು ಅಮಾನತು ಮಾಡಲಿ ಎಂದು ಸವಾಲು ಎಸೆದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ