ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ಪಾಲು; ಕೈ ಮುಖಂಡ ಮಿಥುನ್ ರೈ ಮತ್ತು ಬೆಂಬಲಿಗರಿಂದ ಗಲಾಟೆ
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಹಳೆಯಂಗಡಿ ಗ್ರಾಮ ಪಂಚಾಯತ್ನ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ. ಅದರಂತೆ, ಎರಡೂ ಸ್ಥಾನಗಳು ಬಿಜೆಪಿ ಬೆಂಬಲಿತರ ಪಾಲಾಗಿದ್ದು, ಕಾಂಗ್ರೆಸ್ ಮುಖಂಡ ಮಿಥುನ್ ರೈಗೆ ಮುಖಭಂಗವಾಗಿದೆ.
ಮಂಗಳೂರು, ಆಗಸ್ಟ್ 11: ಗೊಂದಲದ ಗೂಡಾಗಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಲ್ಕಿ ತಾಲೂಕಿನ ಹಳೆಯಂಗಡಿ (Haleyangadi) ಗ್ರಾಮ ಪಂಚಾಯತ್ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಇಂದು ನಡೆದಿದೆ. ಕಾಂಗ್ರೆಸ್ ಬೆಂಬಲಿತ ಸದಸ್ಯೆಯ ಸದಸ್ಯತ್ವ ರದ್ದು ಮಾಡಿರುವುದರಿಂದ ಬಿಜೆಪಿ (BJP) ಬೆಂಬಲಿತ ಸದಸ್ಯರು ಎರಡೂ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಇತ್ತ, ಮುಖಭಂಗ ಅನುಭವಿಸಿದ ಕಾಂಗ್ರೆಸ್ (Congress) ಮುಖಂಡ ಮಿಥುನ್ ರೈ (Mithun Rai) ಮತ್ತು ಬೆಂಬಲಿಗರು ಗಲಾಟೆ ನಡೆಸಿದ್ದಾರೆ.
ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 22 ವಾರ್ಡ್ಗಳಿದ್ದು, ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು 11 ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು 11 ಮಂದಿ ಆಯ್ಕೆಯಾಗಿದ್ದರು. ಮೊದಲ ಅವಧಿಯಲ್ಲಿ ಎರಡು ಪಕ್ಷಗಳ ಬೆಂಬಲಿತರ ಸಮಬಲದಿಂದ ಚೀಟಿ ಎತ್ತುವ ಮೂಲಕ ಬಿಜೆಪಿ ಬೆಂಬಲಿತ ಸದಸ್ಯರಿಗೆ ಅಧಿಕಾರದ ಪಟ್ಟ ಒಲಿದಿತ್ತು.
ಬಿಜೆಪಿ ಬೆಂಬಲಿತರ ಎರಡೂವರೆ ವರ್ಷಗಳ ಅಧಿಕಾರದ ಬಳಿಕ ಈ ಬಾರಿ ಬದಲಾದ ವಿದ್ಯಮಾನಗಳಲ್ಲಿ ಬಿಜೆಪಿ ಬೆಂಬಲಿತ ಓರ್ವ ಸದಸ್ಯೆ ಕಾಂಗ್ರೆಸ್ ಬೆಂಬಲಿತ ಸದಸ್ಯರ ಜೊತೆ ಗುರುತಿಸಿಕೊಂಡಿದ್ದರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೊಬ್ಬರು ಬಿಜೆಪಿ ಜೊತೆ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ: ತಲಪಾಡಿ ಗ್ರಾ.ಪಂ. ಚುನಾವಣೆ: ಎಸ್ಡಿಪಿಐ ಬೆಂಬಲಿಸಿಲ್ಲ ಎಂದ ಬಿಜೆಪಿ ನಾಯಕರು, ತೇಜಸ್ವಿ ಸೂರ್ಯ, ಅಮಿತ್ ಮಾಳವೀಯ ಹೇಳಿದ್ದೇನು?
ಬದಲಾದ ವಿದ್ಯಾಮಾನದಲ್ಲಿಯೂ ಸಮಬಲವಾಗಿದ್ದು ಮಾತ್ರವಲ್ಲದೆ, ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯರೊಬ್ಬರು ಬ್ರಷ್ಟಾಚಾರ ಆರೋಪದ ಕಾರಣ ಅವರ ಸದಸ್ಯತ್ವ ರದ್ದಾಗಿತ್ತು. ಕೋರ್ಟ್ ತೀರ್ಪಿನ ಪ್ರಕಾರ, ಆ ಮಹಿಳೆ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವಂತಿಲ್ಲ ಎಂಬುದು ಬಿಜೆಪಿ ಕಾರ್ಯಕರ್ತರ ವಾದವಾದವಾದರೆ, ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂಬುದು ಕಾಂಗ್ರೇಸ್ ಕಾರ್ಯಕರ್ತರ ವಾದವಾಗಿತ್ತು.
ಈ ಕಾರಣದಿಂದ ಇಂದು ಬೆಳಗ್ಗೆ ಸ್ಥಳದಲ್ಲಿ ಕಾಂಗ್ರೇಸ್ ಬಿಜೆಪಿ ಸದಸ್ಯರು ಜಮಾಯಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೋಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮದ್ಯಾಹ್ನ 12 ಗಂಟೆಗೆ ಚುನಾವಣಾ ಪ್ರಕ್ರಿಯೆ ನಡೆದು 1 ಗಂಟೆಗೆ ಫಲಿತಾಂಶ ಬರಬೇಕಾಗಿದ್ದರೂ, ಸಂಜೆ 5 ಗಂಟೆ ವರೆಗೆ ಚುನಾವಣೆ ನಡೆದಿರಲಿಲ್ಲ. ನಂತರ ಚುನಾವಣಾ ಅಧಿಕಾರಿಗಳು ಹಿರಿಯ ಅಧಿಕಾರಿಗಳ ಮಾಹಿತಿ ಪಡೆದು ಕಾಂಗ್ರೇಸ್ ಬೆಂಬಲಿತ ಮಹಿಳಾ ಸದಸ್ಯೆಯನ್ನು ಹೊರಗಿಟ್ಟು ಚುನಾವಣಾ ಪ್ರಕ್ರಿಯೆ ನಡೆಸಿದರು.
ಅದರಂತೆ ಬಿಜೆಪಿ ಬೆಂಬಲಿತರು ಪೂರ್ಣಿಮಾ ಅಧ್ಯಕ್ಷರಾಗಿ ಮತ್ತು ಚಂದ್ರಿಕಾ ಕೋಟ್ಯಾನ್ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಘೋಷಣೆ ಕೂಗಲಾರಂಭಿಸಿದರು. ಇನ್ನೊಂದೆಡೆ ಕಾಂಗ್ರೇಸ್ ಬೆಂಬಲಿತರು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಈ ಮಧ್ಯೆ ಪರಿಸ್ಥಿತಿ ಬಿಗಾಡಾಯಿಸುವ ಲಕ್ಷಣ ಗೋಚರಿಸುತ್ತಿದಂತೆ ಪೋಲೀಸರು ಬಿಗಿ ಬಂದೋಬಸ್ತ್ ನಡೆಸಿ ಪರೀಸ್ಥಿಯನ್ನು ಹತ್ತೋಟಿಗೆ ತಂದರು. ಮದ್ಯಾಹ್ನದಿಂದಲ್ಲೇ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಮತ್ತು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮಿಥುನ್ ರೈ ಸ್ಥಳದಲ್ಲಿ ಇದ್ದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ