AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಪಕ್ಷ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಮಂಗಳೂರಲ್ಲಿ ಭುಗಿಲೆದ್ದ ಅಸಮಾಧಾನ

ಮಂಗಳೂರಿನಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ ವಿರುದ್ಧ ಸ್ವಪಕ್ಷದ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ಸರಣಿ ಅಪಘಾತಗಳಿಗೆ ಪರಿಹಾರ ಕೇಳಲು ಹೋದವರಿಗೆ ಸಂಸದರು ಉಡಾಫೆ ಉತ್ತರ ನೀಡಿದ್ದಾರೆ ಎಂದು ದೂರಲಾಗಿದೆ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಹಲವು ಜೀವಗಳು ಬಲಿಯಾಗಿದ್ದರೂ ಸಂಸದರ ಬೇಜವಾಬ್ದಾರಿ ವರ್ತನೆ ತೋರಿರೋದಾಗಿ ಆರೋಪಿಸಲಾಗಿದೆ.

ಸ್ವಪಕ್ಷ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಮಂಗಳೂರಲ್ಲಿ ಭುಗಿಲೆದ್ದ ಅಸಮಾಧಾನ
ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶImage Credit source: Tv9 Kannada
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: May 17, 2026 | 7:51 AM

Share

ಮಂಗಳೂರು, ಮೇ 17: ದಕ್ಷಿಣ ಕನ್ನಡ ಜಿಲ್ಲೆಯ ಸ್ವಪಕ್ಷದ ಸಂಸದನ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ. ಸಂಸದ ಕ್ಯಾ‌.ಬ್ರಿಜೇಶ್ ಚೌಟ ವಿರುದ್ಧ ಬಿಜೆಪಿ ಮಂಡಲ ಉಪಾಧ್ಯಕ್ಷನಿಂದಲೇ ಅಸಮಾಧಾನ ವ್ಯಕ್ತವಾಗಿದ್ದು, ರಸ್ತೆ ಸಮಸ್ಯೆಗೆ ಪರಿಹಾರ ಕೇಳಲು ಹೋದವರಿಗೆ ಅವಮಾನ ಆರೋಪ ಕೇಳಿಬಂದಿದೆ. ಸಂಸದರು ಬೇಜವಾಬ್ದಾರಿ ವರ್ತನೆ ತೋರಿದ್ದಾರೆ ಎಂದೂ ದೂರಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಪೋಸ್ಟ್ ಹಾಕಿ ಮೂಲ್ಕಿ-ಮೂಡಬಿದ್ರೆ ಬಿಜೆಪಿ ಉಪಾಧ್ಯಕ್ಷ ಸೂರಜ್ ಜೈನ್ ಕಿಡಿ ಕಾರಿದ್ದಾರೆ.

ಆಗಿದ್ದೇನು?

ಮೂಡಬಿದಿರೆಯ ಬನ್ನಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಮೂರು ವರ್ಷಗಳಲ್ಲಿ 8ಕ್ಕೂ ಹೆಚ್ಚು ಜೀವಗಳು ಬಲಿಯಾಗಿವೆ. ಮಂಗಳೂರಿನಿಂದ ಕಾರ್ಕಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸರ್ವಿಸ್ ರಸ್ತೆ ಇಲ್ಲದ ಕಾರ ಭೀಕರ ಅಪಘಾತಗಳು ನಡೆಯುತ್ತಿದ್ದು, ಕೇವಲ ಮೂರು ದಿನಗಳಲ್ಲಿ 4 ಅಪಘಾತ ನಡೆದು ಓರ್ವ ಮಹಿಳೆ ಮೃತಪಟ್ಟಿದ್ದರು. ಈ ವಿಚಾರವಾಗಿ ಸಂಸದರನ್ನ ಭೇಟಿಯಾಗಲು ಬಿಜೆಪಿ ಮುಖಂಡ ಸೂರಜ್ ಜೈನ್ ತಂಡ ತೆರಳಿತ್ತು. ಆ ವೇಳೆ ಸಂಸದ ಬ್ರಿಜೇಶ್ ಚೌಟ ಉಡಾಫೆ ಉತ್ತರ ನೀಡಿದ ಆರೋಪ‌ ಕೇಳಿಬಂದಿದೆ.

ಇದನ್ನೂ ಓದಿ: ಫಲನಾಭವಿಗಳು ಮೃತಪಟ್ಟ ಬಳಿಕವೂ ಖಾತೆಗೆ ಗೃಹಲಕ್ಷ್ಮಿ ಹಣ; ದಕ್ಷಿಣ ಕನ್ನಡದಲ್ಲಿ 22 ಕೋಟಿ ಜಮೆ ಬೆಳಕಿಗೆ

ಅವಘಡಗಳಿಗೆ ಹೆದ್ದಾರಿ ಇಲಾಖೆಯ ಕಾಮಗಾರಿಯೇ ಕಾರಣ ಎಂದು ನೀವು ಹೇಗೆ ಹೇಳುತ್ತೀರಿ? ಈ ಕಾಮಗಾರಿ ಪೂರ್ಣ ಆಗುವವರೆಗೆ ಸರ್ವಿಸ್ ರಸ್ತೆ ಮಾಡಲು ಸಾಧ್ಯವಿಲ್ಲ. 2023ರಲ್ಲಿ ಮನವಿ ಕೊಟ್ಟಿದ್ದರೆ ಕೊಟ್ಟಿರುವವರ ಬಳಿ ಹೋಗಿ ಕೇಳಿ. ನೀವು ಹೇಳಿದಂತೆ ಕಾಮಗಾರಿ ಮಾಡಲು ಆಗಲ್ಲ. ಜನರ ಪ್ರತಿಭಟನೆಗೆ ನಾನು ಹೆದರೋದಿಲ್ಲ. ಸ್ಥಳಕ್ಕೆ ಭೇಟಿ ನೀಡಲು ಕೇಳಿಕೊಂಡರೆ ಸದ್ಯಕ್ಕೆ ಸಾಧ್ಯವಿಲ್ಲ. ಆ ಕಡೆ ಬಂದಾಗ ಸ್ಥಳಕ್ಕೆ ಬರುತ್ತೇನೆ ಎಂದು ಸಂಸದರು ಹೇಳಿರೋದಾಗಿ ದೂರಲಾಗಿದೆ. ಬನ್ನಡ್ಕ ಸರಣಿ ಅಪಘಾತಗಳನ್ನ ಕಂಡು ಧೃತಿಗೆಟ್ಟಿರುವ ಸಾರ್ವಜನಿಕರಿಂದ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Ashok
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More