Praveen Nettar: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

Praveen Nettar: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ
ಮೃತ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು
Follow us
TV9 Web
| Updated By: ವಿವೇಕ ಬಿರಾದಾರ

Updated on:Aug 09, 2022 | 7:42 PM

ದಕ್ಷಿಣ ಕನ್ನಡ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್.ಸಿ.ಎ(33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಹಿನ್ನೆಲೆ ಬಂಧಿಸಲಾಗಿದೆ. ಈವರೆಗೆ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ.

ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್​ನನ್ನು ಬಂಧಿಸಿಲಾಗಿತ್ತು. ಅಗಸ್ಟ್ 1ರಂದು ಪಲ್ಲಿ ಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್​ನನ್ನು ಬಂಧಿಸಲಾಗಿದೆ. ಅಗಸ್ಟ್ 07 ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಮತ್ತು ಬೆಳ್ಳಾರೆ ನಿವಾಸಿ ನೌಫಲ್(28) ನನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಏಳನೇ ಆರೋಪಿಯಾಗಿ ಅಬ್ದುಲ್ ಕಬೀರ್ ಸಿ.ಎ(33) ನನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಆಗಸ್ಟ್​ 7 ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು, ಅಬೀದ್ (22), ನೌಫಾಲ್ (28) ಬಂಧಿತ ಆರೋಪಿಗಳು. ಅಬಿದ್​ ನಾವೂರು ನಿವಾಸಿ ಯಾಕೂಬ್ ಮಗ. ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟ್ರೇಷನ್​ ಬೈಕ್​ನ್ನು ಬಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಅದೇ ಬೈಕ್​​ನಲ್ಲಿ ಬಂದು ಕೊಲೆ ಮಾಡಿ ಮೂವರು ಹಂತಕರು ಹೋಗಿದ್ದಾರೆ ಎಂದು ಆರೋಪವಿದೆ.  ಅಬೀದ್​​  ಮತ್ತು ನೌಫಾಲ್​​ಗೆ ಹಂತಕರ ಜೊತೆ ನೇರಾನೇರ ಸಂಪರ್ಕ ಇತ್ತು ಎನ್ನಲಾಗುತ್ತಿದೆ. ಹಂತಕರಿಗೆ ಪ್ರವೀಣ್ ಅಂಗಡಿ ಬಗ್ಗೆ ನೌಫಾಲ್ ಮಾಹಿತಿ ನೀಡಿದ್ದ ಎಂದು ಹೇಳಲಾಗುತ್ತಿದೆ.  ಅಂಗಡಿ ಬಳಿ ಬಂದು ಪ್ರವೀಣ್ ಇದ್ದಾನಾ ಇಲ್ವಾ ಅಂತಾ  ನೌಫಾಲ್​ನದ್ದು ಮಾಹಿತಿ ಕೊಡೊ ಕೆಲಸ ಮಾಡಿದ್ದಾನೆ. ನೌಫಾಲ್ ಸ್ಥಳೀಯನೇ ಆಗಿದ್ದರಿಂದ ಅಲ್ಲಿನ ಸಂಪೂರ್ಣ ಮಾಹಿತಿ ಸಿಗುತ್ತಿತ್ತು‌ ಎಂದು ಆರೋಪಿಸಲಾಗುತ್ತಿತ್ತು.

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು:

ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ. ಪ್ರವೀಣ್ ಕೊಲೆಯಾಗೊ ಮೊದಲು ಎರಡು ಬಾರಿ ಹತ್ಯೆ ಯತ್ನ ನಡೆದಿತ್ತು. ಜು.23 ಮತ್ತು ಜು.24 ರಂದೇ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜು.23 ರಂದು ಅದೇ ಬೈಕ್​ನಲ್ಲಿ ಕೊಲ್ಲಲು ತಂಡ ಬಂದಿದ್ದು, ಆದರೆ ಅಂಗಡಿ ಬಳಿ ಜನ ಇದ್ದಿದ್ದರಿಂದ ವಾಪಾಸ್ ಹೋಗಿದ್ದಾರೆ. ಜು.24 ರಂದು ಸಂಜೆ 4.30 ಕ್ಕೆ ಕೊಲ್ಲಲು ಸಂಚು ರೂಪಿಸಿದ್ದು, ಅಂದು ಆ ಮೂವರ ತಂಡದಲ್ಲಿ ಅಬೀದ್ ಕೂಡ ಇದ್ದ ಎಂದು ಹೇಳಲಾಗಿದೆ.

ವಿಚಾರಣೆ ವೇಳೆ ಪೊಲೀಸರಿಗೆ ಅಬೀದ್ ಹೇಳಿಕೆ‌ ನೀಡಿದ್ದು, ಅಂದು ಕೊಲೆ ಮಾಡಲು ಇಬ್ಬರ ಜೊತೆ ಅಬೀದ್ ಹೋಗಿದ್ದು, ಅಂಗಡಿ ಬಳಿ ಪ್ರವೀಣ್ ಇದ್ದಾನ ಇಲ್ವಾ ಅಂತಾ ನೋಡಲು  ನೌಫಾಲ್ ಹೋಗಿದ್ದ. ಅವತ್ತು ಪ್ರವೀಣ್ ಅಂಗಡಿಯಲ್ಲಿ ಇರಲಿಲ್ಲ‌. ಪ್ರವೀಣ್ ಅಂಗಡಿಯಲ್ಲಿ ಇಲ್ಲ ಅಂತಾ ನೌಫಾಲ್‌ ಮಾಹಿತಿ ನೀಡಿದ್ದನು.

Published On - 7:32 pm, Tue, 9 August 22

ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
ಹನುಮಂತನಿಗೆ ಕಳಪೆ ಕೊಟ್ಟ ಮನೆಮಂದಿ, ಜೈಲು ಸೇರಿದ ಹಾಡು ಹಕ್ಕಿ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
Video: ಮನೆ ಎದುರು ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಮದುವೆ ಮಂಟಪದಲ್ಲಿ ಕೋಪಗೊಂಡ ಪೂಜಾರಿ, ಮಾಡಿದ್ದೇನು ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್