Big Breaking News: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಮೂವರು ಆರೋಪಿಗಳನ್ನು ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸರಿಂದ ಮಾಹಿತಿ ನೀಡಲಾಗಿದೆ.

Big Breaking News: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ
ಪ್ರವೀಣ್ ನೆಟ್ಟಾರು (ಸಂಗ್ರಹ ಚಿತ್ರ)
Edited By:

Updated on: Aug 11, 2022 | 11:02 AM

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಮೂವರು ಆರೋಪಿಗಳನ್ನು  ಪೊಲೀಸರು ಬಂಧಿಸಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರು ಹತ್ಯೆಗೈದಿದ್ದ ಆರೋಪಿಗಳು ಕೇರಳಕ್ಕೆ ಪರಾರಿಯಾಗಿದ್ದರು ಎನ್ನಲಾಗಿತ್ತು. ಈ ಕುರಿತು ಮಂಗಳೂರಿನಲ್ಲಿ ಮಧ್ಯಾಹ್ನ 12 ಗಂಟೆಗೆ ಪೊಲೀಸರಿಂದ ಸುದ್ದಿಗೋಷ್ಠಿ ನಡೆಯಲಿದ್ದು, ಪ್ರವೀಣ್ ಹತ್ಯೆಗೈದಿದ್ದ ಪ್ರಮುಖ ಆರೋಪಿಗಳ ಬಂಧನ ಬಗ್ಗೆ ಮಾಹಿತಿ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Praveen Nettar: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆ ಪೊಲೀಸರು ಆಗಸ್ಟ 08ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದರು. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್.ಸಿ.ಎ(33) ಬಂಧಿತ ಆರೋಪಿ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ ಹಿನ್ನೆಲೆ ಬಂಧಿಸಲಾಗಿದೆ. ಈವರೆಗೆ ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಬೆಳ್ಳಾರೆ ಪೊಲೀಸರು ಒಟ್ಟು ಏಳು ಜನರನ್ನು ಬಂಧಿಸಿದ್ದಾರೆ. ಜುಲೈ 28ರಂದು ಬೆಳ್ಳಾರೆಯ ಶಫೀಕ್ ಮತ್ತು ಸವಣೂರಿನ ಜಾಕೀರ್​ನನ್ನು ಬಂಧಿಸಿಲಾಗಿತ್ತು. ಅಗಸ್ಟ್ 1ರಂದು ಪಲ್ಲಿ ಮಜಲು ನಿವಾಸಿಗಳಾದ ಸದ್ದಾಂ ಮತ್ತು ಹ್ಯಾರಿಸ್​ನನ್ನು ಬಂಧಿಸಲಾಗಿದೆ. ಅಗಸ್ಟ್ 07 ರಂದು ಸುಳ್ಯದ ನಾವೂರು ನಿವಾಸಿ ಅಬೀದ್(22) ಮತ್ತು ಬೆಳ್ಳಾರೆ ನಿವಾಸಿ ನೌಫಲ್(28) ನನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಇದೀಗ ಏಳನೇ ಆರೋಪಿಯಾಗಿ ಅಬ್ದುಲ್ ಕಬೀರ್ ಸಿ.ಎ(33) ನನ್ನು ಬಂಧಿಸಲಾಗಿದೆ. ಹತ್ಯೆಯಲ್ಲಿ ನೇರ ಭಾಗಿಯಾದ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.

ಆಗಸ್ಟ್​ 7 ರಂದು ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು, ಅಬೀದ್ (22), ನೌಫಾಲ್ (28) ಬಂಧಿತ ಆರೋಪಿಗಳು. ಅಬಿದ್​ ನಾವೂರು ನಿವಾಸಿ ಯಾಕೂಬ್ ಮಗ. ನೌಫಾಲ್ ಬೆಳ್ಳಾರೆಯ ಗೌರಿಹೊಳೆ ನಿವಾಸಿ ಮೊಹಮ್ಮದ್ ಮಗನಾಗಿದ್ದಾನೆ. ಹಂತಕರು ಕೊಲೆ ಮಾಡಲು ಅಬೀದ್ ಬಳಿ ಇದ್ದ ಕೇರಳ ರಿಜಿಸ್ಟ್ರೇಷನ್​ ಬೈಕ್​ನ್ನು ಬಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಆರೋಪಿಗಳ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ ಆರಂಭ

ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ಎನ್​​ಎ ಅಧಿಕಾರಿಗಳ ಜೊತೆ ಕರ್ನಾಟಕ ತಂಡ ಮುಟ್ಟುಗೋಲು ಹಾಕಿಕೊಳ್ಳುವ  ಕೆಲಸ ಮಾಡಲಿದೆ. ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ಲಭ್ಯವಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆವಾಗವಾಗ ಅವರ ಸ್ಥಳಬದಲಾವಣೆ ಮಾಡಲಾಗುತ್ತಿದೆ. ಪೊಲೀಸರ ದಾಳಿ ವೇಳೆ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದರು. ಆರೋಪಿಗಳಿಗೆ ಪಿಎಫ್ಐ ಲಿಂಕ್ ಇದೆ ಎಂಬ ವಿಚಾರವಾಗಿ ಮಾತನಾಡಿದ ಅವರು ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ, ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್​ಐ ಲಿಂಕ್ ಇದೆ ಎಂದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 10:55 am, Thu, 11 August 22