Bomb Threat: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ

ಕಳೆದ ಕೆಲವು ತಿಂಗಳ ಹಿಂದೆ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್​ ಬೆದರಿಕೆ ಸಂದೇಶಗಳು ಬಂದಿದ್ದವು. ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿದೆ. ಇದಾದ ಬಳಿಕ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟ ಸಂಭವಿಸಿತ್ತು. ಈ ಎರಡೂ ಪ್ರಕರಣಗಳು ಜನಮನದಿಂದ ಮಾಸುವ ಮುನ್ನವೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ ಸಂದೇಶ ಬಂದಿದೆ.

Bomb Threat: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Edited By:

Updated on: May 04, 2024 | 4:12 PM

ಮಂಗಳೂರು, ಮೇ 04: ಬೆಂಗಳೂರಿನ (Bengaluru) ಶಾಲೆಗಳಿಗೆ ಬಂದಿದ್ದ ಬಾಂಬ್​ ಬೆದರಿಕೆ ಕರೆ ಜನಮನದಿಂದ ಮಾಸುವ ಮುನ್ನವೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Mangaluru International Airport) ಕಚೇರಿಗೆ ಇ-ಮೇಲ್​ ಮೂಲಕ ಬಾಂಬ್​ ಬೆದರಿಕೆ ಸಂದೇಶ (Bomb Threat) ಬಂದಿದೆ. ಉಗ್ರರ ಹೆಸರಲ್ಲಿ ಇ-ಮೇಲ್ ಬಂದಿದ್ದು, ” ವಿಮಾನ ನಿಲ್ದಾಣದ ಆವರಣದಲ್ಲಿ​​​ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಏಪ್ರಿಲ್​ 29 ರಂದು ಬೆದರಿಕೆ ಕರೆ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಜ್ಪೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಟೇಲ್​​​ಗೆ ಬಾಂಬ್​ ಬೆದರಿಕೆ

ಕಳೆದ ಕೆಲ ದಿನಗಳ ಹಿಂದೆ ಬೆಂಗಳೂರಿನ ಎಚ್‌ಎಂಟಿ ಮೈದಾನ ಬಳಿಯ ಕದಂಬ ಹೋಟೆಲ್ ಸುತ್ತಮುತ್ತ ಬಾಂಬ್ ಇರಿಸಲಾಗಿದೆ ಎಂದು ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿತ್ತು. ಕೂಡಲೆ  ಹೊಟೇಲ್​ಗೆ ತೆರಳಿದ್ದ ಜಾಲಹಳ್ಳಿ ಠಾಣೆ ಪೊಲೀಸರು ಹೋಟೆಲ್​ನಲ್ಲಿದ್ದ ಗ್ರಾಹಕರನ್ನು ಹೊರಕಳಿಸಿ ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: ಎಲ್ಲರೂ ಇಸ್ಲಾಂಗೆ ಮತಾಂತರವಾಗಿ, ಇಲ್ಲ ಎಲ್ಲರೂ ಸಾಯಲು ಸಿದ್ಧರಾಗಿ: ಇದು ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ

ಶಾಲೆಗಳಿಗೆ ಬಾಂಬ್​ ಬೆದರಿಕೆ

ಕಳೆದ ವರ್ಷ ಡಿಸೆಂಬರ್​ನಲ್ಲಿ ಬೆಂಗಳೂರಿನ 60 ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಬಂದಿತ್ತು. ಈ ಪ್ರಕರಣ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಹೆಚ್ಚುವರಿ ಆಯುಕ್ತ (ಪಶ್ಚಿಮ) ಎನ್. ಸತೀಶ್ ಕುಮಾರ್​ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಹಲವು ಆಯಾಮಗಳಲ್ಲಿ ತನಿಖೆ ನಡೆಯುತ್ತಿದ್ದು, ಆರೋಪಿಗಳು ಬಳಸಲಾದ ಇ-ಮೇಲ್​ ಐಡಿ ನಕಲು ಎಂಬುದು ಪತ್ತೆಯಾಗಿತ್ತು. ಕೃತ್ಯ ಎಸಗಲೆಂದೆ ಆರೋಪಿಗಳು ನಕಲಿ ಐಡಿ ಸೃಷ್ಟಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 1:53 pm, Sat, 4 May 24

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us