AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ

ಭಾರತದ 'ಬ್ರಿಡ್ಜ್ ಮ್ಯಾನ್' ಎಂದೇ ಪ್ರಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಗಿರೀಶ್, ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಲ್ಲಿ ಕಡಿಮೆ ವೆಚ್ಚದ 120ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿ ಹಳ್ಳಿಗಳಿಗೆ ಕೊಂಡಿಯಾಗಿದ್ದರು. ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಮೃತರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ನಿಧನ
ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರಧ್ವಾಜ್ ವಿಧಿವಶ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jul 07, 2026 | 9:18 AM

Share

ಮುಖ್ಯಾಂಶಗಳು

  • ಪದ್ಮಶ್ರೀ ಪುರಸ್ಕೃತ ತೂಗು ಸೇತುವೆಗಳ ಸರದಾರ ಗಿರೀಶ್ ಭಾರದ್ವಾಜ್ ನಿಧನರಾಗಿದ್ದಾರೆ.
  • ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಸಮಸ್ಯೆಯಿಂದ ಕೊನೆಯುಸಿರೆಳೆದರು.
  • ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ತೂಗು ಸೇತುವೆಗಳನ್ನು ನಿರ್ಮಿಸಿದ್ದರು.

ಮಂಗಳೂರು, ಜುಲೈ 07: ಭಾರತದ ‘ಬ್ರಿಡ್ಜ್ ಮ್ಯಾನ್’ (Bridge Man) ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ ಮತ್ತು ದುರ್ಗಮ ಪ್ರದೇಶಗಳಿಗೆ ಸಂಪರ್ಕದ ಕೊಂಡಿಯಾಗಿದ್ದ ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ (ಜು 7) ಮುಂಜಾನೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಪತ್ನಿ ಉಷಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ಪಯಸ್ವಿನಿ ನದಿಯಿಂದ ಆರಂಭವಾದ ಸಾಧನೆಯ ಪಯಣ

1950 ರ ಮೇ 2 ರಂದು ಸುಳ್ಯದಲ್ಲಿ ಜನಿಸಿದ ಗಿರೀಶ್ ಭಾರದ್ವಾಜ್ ಅವರು 1973ರಲ್ಲಿ ಮಂಡ್ಯದ ಪಿಇಎಸ್ ಕಾಲೇಜ್ ಆಫ್ ಎಂಜಿನಿಯರಿಂಗ್‌ನಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿದ್ದರು. ಗ್ರಾಮೀಣ ಭಾಗದ ಜನರ ಕಷ್ಟಕ್ಕೆ ಮಿಡಿಯುತ್ತಿದ್ದ ಇವರು, 1989ರಲ್ಲಿ ತಮ್ಮ ಸ್ವಗ್ರಾಮವಾದ ಸುಳ್ಯದ ಅರಂಬೂರಿನಲ್ಲಿ ಪಯಸ್ವಿನಿ ನದಿಗೆ ಅಡ್ಡಲಾಗಿ ಮೊದಲ ಕಡಿಮೆ ವೆಚ್ಚದ ತೂಗು ಸೇತುವೆಯನ್ನು ನಿರ್ಮಿಸುವ ಮೂಲಕ ತಮ್ಮ ಐತಿಹಾಸಿಕ ಪಯಣವನ್ನು ಆರಂಭಿಸಿದರು.

ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ತೂಗು ಸೇತುವೆಗಳ ನಿರ್ಮಾಣ

ದುರ್ಗಮ ಕಾಡುಗಳು, ನದಿ ದಾಟಲು ದೋಣಿಯನ್ನೇ ಅವಲಂಬಿಸಿದ್ದ ಹಳ್ಳಿಗಳು ಹಾಗೂ ರಸ್ತೆ ಸಂಪರ್ಕವಿಲ್ಲದ ನೂರಾರು ಪ್ರದೇಶಗಳಿಗೆ ಗಿರೀಶ್ ಅವರ ತೂಗು ಸೇತುವೆಗಳು ಜೀವನಾಡಿಯಾದವು. ಕರ್ನಾಟಕ ಮಾತ್ರವಲ್ಲದೆ ಕೇರಳ, ಒಡಿಶಾ, ತೆಲಂಗಾಣ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ 120ಕ್ಕೂ ಹೆಚ್ಚು ಪರಿಸರ ಸ್ನೇಹಿ ಹಾಗೂ ಕಡಿಮೆ ವೆಚ್ಚದ ತೂಗು ಸೇತುವೆಗಳನ್ನು ನಿರ್ಮಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇವರ ಈ ಅದ್ವಿತೀಯ ಸಾಧನೆಯನ್ನು ಗುರುತಿಸಿ ಭಾರತ ಸರ್ಕಾರ 2017 ರಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಪದ್ಮಶ್ರೀ’ ನೀಡಿ ಗೌರವಿಸಿತ್ತು. ಇದರೊಂದಿಗೆ ಇವರು ಟಿವಿ9 ನವನಕ್ಷತ್ರ ಸನ್ಮಾನಕ್ಕೂ ಭಾಜನರಾಗಿದ್ದರು.

ಡಾ. ಗಿರೀಶ್ ಭಾರದ್ವಾಜ್ ಅವರ ನಿಧನಕ್ಕೆ ನಾಡಿನ ಗಣ್ಯರು, ತಾಂತ್ರಿಕ ವಲಯದ ತಜ್ಞರು ಹಾಗೂ ಗ್ರಾಮೀಣ ಭಾಗದ ಜನತೆ ತೀವ್ರ ಕಂಬನಿ ಮಿಡಿದಿದ್ದಾರೆ. ಹಳ್ಳಿಗಳ ಸಂಪರ್ಕ ಕೊಂಡಿಯನ್ನು ಬೆಸೆದ ಮಹಾನ್ ತಾಂತ್ರಿಕ ಚೇತನವೊಂದು ಮರೆಯಾದಂತಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:05 am, Tue, 7 July 26

Follow Us
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಇಂಡೋನೇಷ್ಯಾ ತಲುಪಿದ ಪ್ರಧಾನಿ ನರೇಂದ್ರ ಮೋದಿ; ಸರ್ಕಾರಿ ಗೌರವದ ಸ್ವಾಗತ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ
ಈ ತಿಂಗಳ ಅಂತ್ಯದಲ್ಲಿ ಕ್ಯಾಬಿನೆಟ್ ವಿಸ್ತರಣೆ