ಮಂಗಳೂರು: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಗರ್ಡಾಡಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್, ಸಾದಿಕ್ ಮೃತಪಟ್ಟಿದ್ದಾರೆ. ಸಾವಿಗೀಡಾದ ಇಬ್ಬರೂ ವಿದೇಶದಲ್ಲಿ  ಉದ್ಯೋಗದಲ್ಲಿದ್ದವರು.

ಮಂಗಳೂರು: ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ; ಸಹೋದರರಿಬ್ಬರ ಸಾವು
ಕೆಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ
Follow us
TV9 Web
| Updated By: preethi shettigar

Updated on:Mar 18, 2022 | 7:31 PM

ದಕ್ಷಿಣ ಕನ್ನಡ:  ಕೆಸ್​ಆರ್​​ಟಿಸಿ ಬಸ್​ಗೆ ಬೈಕ್(Bike)​ ಡಿಕ್ಕಿಯಾಗಿದ್ದು, ಬೈಕ್​ನಲ್ಲಿದ್ದ ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿಯ ಗರ್ಡಾಡಿ ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ(Accident) ಉಪ್ಪಿನಂಗಡಿ ಸಮೀಪದ ಹಿರೇಬಂಡಾಡಿ ನಿವಾಸಿಗಳಾದ ಸಿರಾಜ್, ಸಾದಿಕ್ ಮೃತಪಟ್ಟಿದ್ದಾರೆ(Death). ಮರಣದ ಮನೆಗೆ ಹೋಗಿ ಬರುತ್ತಿದ್ದಾಗ ಅವಗಢ ಸಂಭವಿಸಿದೆ. ಸಾವಿಗೀಡಾದ ಇಬ್ಬರೂ ವಿದೇಶದಲ್ಲಿ  ಉದ್ಯೋಗದಲ್ಲಿದ್ದವರು.

ಚಿಕ್ಕಮಗಳೂರು: ಮನೆ ಮೇಲೆ ಬುಡಸಮೇತ ಉರುಳಿ ಬಿದ್ದ ತೆಂಗಿನ ಮರ; ತಪ್ಪಿದ ಅನಾಹುತ

ಮನೆ ಮೇಲೆ ಬುಡಸಮೇತ ತೆಂಗಿನ ಮರ ಉರುಳಿ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ಪಟ್ಟಣದ ಮೇಲಂಗಡಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ. ರಾಜಶೇಖರ್ ಎಂಬುವವರಿಗೆ ಸೇರಿದ ಮನೆ ಬಹುತೇಕ ಜಖಂ ಆಗಿದೆ. ಮಕ್ಕಳನ್ನ ಶಾಲೆಯಿಂದ ಕರೆ ತರಲು ಪೋಷಕರು ಹೋಗಿದ್ದ ವೇಳೆ ಮನೆ ಮೇಲೆ ತಂಗಿನ ಮರ ಉರುಳಿಬಿದ್ದಿದೆ.

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಆಗಿ, ಇಬ್ಬರು ದುರ್ಮರಣವನ್ನಪ್ಪಿದ ಘಟನೆ ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್‌ನಲ್ಲಿ ನಡೆದಿದೆ. ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಹೋಗುವಾಗ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ರಂಜಿತ್, ರಾಕೇಶ್ ಸ್ಥಳದಲ್ಲೇ ದುರ್ಮರಣವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರಿಗೆ ಗಂಭೀರ ಗಾಯವಾಗಿದ್ದು ಕಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.

ಕಲಬುರಗಿ: ವ್ಯಕ್ತಿಯನ್ನು ಕೊಂದು ಶವ ಸುಡಲಾಗಿದೆ

ವ್ಯಕ್ತಿ ಒಬ್ಬನನ್ನು ಕೊಲೆ ಮಾಡಿ ಶವ ಸುಟ್ಟಿರುವ ಘಟನೆ ಕಲಬುರಗಿ ತಾಲೂಕಿನ ತಾಜಸುಲ್ತಾನಪುರದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ಶವ ಸುಟ್ಟು ಹಾಕಲಾಗಿದೆ. ಜೋಳದ ಕಣಿಕೆಯಲ್ಲಿ ಶವ ಸುಡಲಾಗಿದೆ. ತಾಲಸುಲ್ತಾನಪುರ ಗ್ರಾಮದ ನಿವಾಸಿ ಮನೋಹರ್ ರುದ್ರಕರ್ (36) ಕೊಲೆಯಾದ ವ್ಯಕ್ತಿ. ಕಳೆದ ಕೆಲ ವರ್ಷಗಳಿಂದ ಮಹಾರಾಷ್ಟ್ರದ ಪುಣೆಯಲ್ಲಿದ್ದ ಮನೋಹರ್, ಎರಡು ದಿನದ ಹಿಂದಷ್ಟೇ ತನ್ನೂರಿಗೆ ಬಂದಿದ್ದ ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಮನೆಯಿಂದ ಹೊರಹೋಗಿದ್ದ ಮನೋಹರ್ ಕೊಲೆ ಮಾಡಲಾಗಿದೆ. ಮನೋಹರನನ್ನು ಕೊಲೆ ಮಾಡಿ, ನಂತರ ಶವ‌ ಸುಟ್ಟು ಹಾಕಲಾಗಿದೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಹಾಸನ: ಸಕಲೇಶಪುರದಲ್ಲಿ ಹಾಡುಹಗಲೇ ಯುವಕನಿಗೆ ಚೂರಿ ಇರಿದು ಹತ್ಯೆ

ಸಕಲೇಶಪುರದಲ್ಲಿ ನಿನ್ನೆ (ಮಾರ್ಚ್ 17) ಹಾಡುಹಗಲೇ ಯುವಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ, ಯುವಕನನ್ನ ಅಡ್ಡಗಟ್ಟಿ ಅಟ್ಟಾಡಿಸಿ ಇರಿದು ಕೊಲ್ಲುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ ಆಗಿದೆ. ಸಕಲೇಶಪುರ ಪಟ್ಟಣದ ಅಜಾದ್ ರಸ್ತೆಯಲ್ಲಿ ನಿನ್ನೆ ಮದ್ಯಾಹ್ನ ಘಟನೆ ನಡೆದಿತ್ತು. ಸಕಲೇಶಪುರ ಕುಶಾಲನಗರ ಬಡಾವಣೆಯ ಅಪ್ಸರ್ (27) ಎಂಬಾತನನ್ನು ಇರಿದು ಹತ್ಯೆ ಮಾಡಲಾಗಿತ್ತು. ಕ್ಷುಲ್ಲಕ ಕಾರಣಕ್ಕೆ ಅಕ್ಕ ಪಕ್ಕದವರ ಮನೆಯವರ ನಡುವೆ ಗಲಾಟೆ ಉಂಟಾಗಿತ್ತು. ಇದೇ ವಿಚಾರವಾಗಿ ಐಸಾನ್ ಖುರೇಷಿ ಕತ್ತು ಇತರೆ ಮೂವರಿಂದ ಯುವಕನ ಬರ್ಬರ ಕೊಲೆ ನಡೆದಿದೆ. ಕೊಲೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿ ಕ್ಯಾಮರಾ ದೃಶ್ಯ ಆದರಿಸಿ ಆರೋಪಿಗಳ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: Crime News: ಎರಡು ಪ್ರತ್ಯೇಕ ಅಪಘಾತ: ಏಳು ಮಂದಿ ಸಾವು, ಒಂಬತ್ತು ಜನರಿಗೆ ಗಾಯ

ಅಪಘಾತದ ಬಳಿಕ ಎಚ್ಚೆತ್ತ ಅಧಿಕಾರಿಗಳು; ರಸ್ತೆ ಗುಂಡಿ ಮುಚ್ಚುವ ಕೆಲಸ ಶುರು, ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೌರವ್ ಗುಪ್ತಾ ಹೇಳಿಕೆ

Published On - 7:03 pm, Fri, 18 March 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್