ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ

ಮಂಗಳೂರಿನ ಬೆಂದೂರುವೆಲ್​ನಲ್ಲಿರುವ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಬಿಲ್ಡರ್​ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರಿನಲ್ಲಿ ಅಪಾರ್ಟ್​ಮೆಂಟ್​ನಿಂದ ಹಾರಿ ಬಿಲ್ಡರ್ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 06, 2023 | 1:00 PM

ದಕ್ಷಿಣ ಕನ್ನಡ, ಆ.6: ಬಹುಮಹಡಿ ಕಟ್ಟಡದಿಂದ ಕೆಳಗೆ ಹಾರಿ ಬಿಲ್ಡರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ (Mangalore) ಬೆಂದೂರುವೆಲ್​ನಲ್ಲಿ ನಡೆದಿದೆ. ಮೋಹನ್​ ಅಮೀನ್ ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಮಂಗಳೂರಿನಲ್ಲಿ ವಿವಿಧ ಅಪಾರ್ಟ್ಮೆಂಟ್ ನಿರ್ಮಾಣ ಮಾಡಿದ್ದ. ಇದೀಗ ಅಟ್ಲಾಂಟಿಕ್ ಅಪಾರ್ಟ್ಮೆಂಟ್​ನಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಈ ಕುರಿತು ಕದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಮನೆಯ ಮುಂದೆ ನಿಲ್ಲಿಸಿದ್ದ ಕಾರು ಕಳ್ಳತನ

ಹಾಸನ: ನಗರದ ವಾರ್ಡ್‌ ನಂಬರ್‌ 35 ಕೆ.ಹೊಸಕೊಪ್ಪಲಿನಲ್ಲಿ ಕಾರು ಕದ್ದು, ಬೈಕ್ ಬಿಟ್ಟು ಹೋದ ಘಟನೆ ನಡೆದಿದೆ. ಅಭಿಷೇಕ್‌ ಎಂಬುವವರಿಗೆ ಸೇರಿದ ಮಾರುತಿ 800 ಕಾರನ್ನು ಜುಲೈ 30 ರಂದು ಬೆಳಿಗ್ಗೆ 4 ಗಂಟೆ ಸುಮಾರಿಗೆ ಬಂದು ಕಾರಿನ ಡೋರ್ ತೆಗೆದು ಸ್ವಲ್ಪ ದೂರು ಕಾರನ್ನು ತಳ್ಳಿಕೊಂಡು ಹೋಗಿ, ಆ ನಂತರ ಕಾರು ಸ್ಟಾರ್ಟ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾರೆ. ಕಾರು ಕದಿಯಲು ಬೈಕ್‌ನಲ್ಲಿ ಬಂದಿದ್ದ ಚೋರರು, ಬೈಕ್‌ನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು, ಕಾರು ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕುರಿತು ಕೆ.ಆರ್.ಪುರಂ ಪೊಲೀಸ್‌ ಠಾಣೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬ್ಯಾಂಕ್ ಸಾಲ ತೀರಿಸಲಾಗದೆ ಪತಿ-ಪತ್ನಿ ನಡುವೆ ಗಲಾಟೆ: ಹೆಂಡತಿಯನ್ನು ಮಚ್ಚಿನಿಂದ ಕೊಚ್ಚಿ ಸಾಯಿಸಿ, ಆತ್ಮಹತ್ಯೆಗೆ ಶರಣಾದ ಗಂಡ

ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಆರೋಪ

ಮೈಸೂರು: ನಿವೇಶನ ವಿಚಾರಕ್ಕೆ ಇಬ್ಬರ ಮೇಲೆ ಹಲ್ಲೆ ಮಾಡಿದ ಘಟನೆ ಮೈಸೂರು ತಾಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದೆ. ಗುಂಡೇಗೌಡ ಪತ್ನಿ ಸುಶೀಲಾ ಹಾಗೂ ಆಕೆಯ ಸಂಬಂಧಿ ಮೇಲೆ, ಗ್ರಾಮದ ಶಿವಣ್ಣ ಹಾಗೂ ಕುಟುಂಬಸ್ಥರಿಂದ ಹಲ್ಲೆ ನಡೆಸಲಾಗಿದೆ. 14 ವರ್ಷಗಳ ಹಿಂದೆ ಶಿವಣ್ಣ, 5 ಲಕ್ಷ ರೂಪಾಯಿಗೆ ಗುಂಡೇಗೌಡ ಎಂಬುವರಿಗೆ ನಿವೇಶನವನ್ನು ಮಾರಾಟ ಮಾಡಿದ್ದರು. 2016ರಿಂದ ನಿವೇಶನ ವಾಪಸ್​ ಕೊಡುವಂತೆ ಗಲಾಟೆ ಮಾಡಲು ಶುರು ಮಾಡಿದ್ದನಂತೆ. ಇದೀಗ ನಿವೇಶನ ಬಳಿ ಇದ್ದ ಗುಂಡೇಗೌಡ ಪತ್ನಿ ಹಾಗೂ ಸಂಬಂಧಿ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು