Mangaluru News: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ
ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ನಡೆದಿದೆ. ಮೃತದೇಹ ಬೇಗ ಸಿಗಲಿ ಎಂಬ ಕಾರಣಕ್ಕೆ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಂಗಳೂರು: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಶಾಂತಿಮೊಗರು ಬಳಿ ನಡೆದಿದೆ. ಚಂದ್ರಶೇಖರ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿಯಾಗಿದ್ದಾರೆ. ಆಲಂಕಾರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರೂ ಆಗಿದ್ದರು.
ಚಂದ್ರಶೇಖರ ಅವರು ಬಲೂನ್ ಕಟ್ಟಿಕೊಂಡು ಶಾಂತಿಮೊಗರು ಸೇತುವೆಯ ಮೇಲಿಂದ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹ ಬೇಗ ಸಿಗಲಿ ಎಂಬ ಉದ್ದೇಶದಿಂದ ಬಲೂನ್ ಕಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ತೇಲುತ್ತರಿರುವ ಬಲೂನ್ ನೋಡಿ ಅನುಮಾನಿಸಿದ ಸ್ಥಳೀಯರು ನದಿಗೆ ಹಾರಿ ಪರಿಶೀಲಿಸಿದಾಗ ಮೃತದೇಹ ಪತ್ತೆಯಾಗಿದ್ದು, ಅದನ್ನು ಹೊರತಂದಿದ್ದಾರೆ. ಉದ್ಯಮಿ ಚಂದ್ರಶೇಖರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಂತರ ಆತ್ಮಹತ್ಯೆಗೆ ಕಾರಣ ತಿಳಿದುಬರಲಿದೆ.
ಇದನ್ನೂ ಓದಿ: ಫ್ಲೈಓವರ್ನಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ; ಅದನ್ನು ಪೊಲೀಸ್ ಕಾನ್‌ಸ್ಟೆಬಲ್ ತಡೆದಿದ್ದು ಹೇಗೆ? ನೀವೇ ನೋಡಿ!
ಅದಾಗ್ಯೂ, ಮೃತ ಚಂದ್ರಶೇಖರ್ ಖಿನ್ನತೆಯಿಂದ ಬಳಲುತ್ತಿದ್ದ ಬಗ್ಗೆ ಮಾಹಿತಿ ತಿಳಿದುಬಂದಿದೆ. ಅಲಂಕಾರಿನಲ್ಲಿ ಹಾರ್ಡ್ ವೇರ್ ಶಾಪ್ ಇಟ್ಟುಕೊಂಡಿದ್ದ ಚಂದ್ರಶೇಖರ್, ಮನೆಯವರ ಜೊತೆಗೂ ಕಡಿಮೆ ಮಾತನಾಡುತ್ತಿದ್ದರು. ಅಂಗಡಿಯಲ್ಲೂ ಮಗನ ಜೊತೆ ಕಡಿಮೆ ಮಾತುಕತೆ ನಡೆಸುತ್ತಿದ್ದರು. ಸದ್ಯ ಮೃತರ ಕುಟುಂಬಸ್ಥರಿಂದ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಆತ್ಮಹತ್ಯೆ ಸಹಾಯವಾಣಿ
ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:32 am, Fri, 26 May 23