ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ

ವಿಧಾನ ಪರಿಷತ್ ಅಡ್ಡ ಮತದಾನ, ಡಿ.ಕೆ.ಶಿವಕುಮಾರ್ ಜೊತೆಗಿನ ರಾಜಕೀಯ ಹಾಗೂ ವ್ಯವಾಹಾರಿಕ ಸಂಬಂಧದ ಊಹಾಪೋಹಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೆರೆಯರಳೆದಿದ್ದು, ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಪೂಜೆ ಸಲ್ಲಿಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ನನಗೂ ಡಿ.ಕೆ ಶಿವಕುಮಾರ್​ಗೂ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧವಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ನನಗೂ, ಡಿಕೆ ಶಿವಕುಮಾರ್​ಗೂ ರಾಜಕೀಯ, ವ್ಯವಾಹಾರಿಕ ಸಂಬಂಧ ಇಲ್ಲ: ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ
ಬಿ ವೈ ವಿಜಯೇಂದ್ರ ಸುದ್ದಿಗೋಷ್ಠಿ
Edited By:

Updated on: Jun 26, 2026 | 10:41 AM

ಮುಖ್ಯಾಂಶಗಳು

  • ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಬ್ಯುಸಿನೆಸ್ ಮತ್ತು ರಾಜಕೀಯ ಸಂಬಂಧವಿಲ್ಲವೆಂದು ಬಿವೈವಿ ಹೇಳಿದ್ದಾರೆ.
  • ಪಕ್ಷದ ಹಿರಿಯರ ಸಲಹೆಯಂತೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವ ಆಲೋಚನೆ ಕೈಬಿಟ್ಟಿದ್ದಾರೆ.
  • ಅಡ್ಡ ಮತದಾನಕ್ಕೆ ಸಹಕರಿಸಿದ್ದೇನೆ ಎಂಬ ಸ್ವಪಕ್ಷೀಯರ ಆರೋಪ ಸಂಪೂರ್ಣ ಸುಳ್ಳು ಎಂದಿದ್ದಾರೆ.

ಮಂಗಳೂರು, ಜೂನ್ 26: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಮತ್ತು ಸಿಎಂ ಡಿಕೆ ಶಿವಕುಮಾರ್ (DK Shivakumar) ನಡುವೆ ರಾಜಕೀಯ ಮತ್ತು ವ್ಯಾವಹಾರಿಕ ಸಂಬಂಧವಿದೆ, ಅವರಿಬ್ಬರೂ ಬ್ಯುಸಿನೆಸ್ ಪಾರ್ಟ್ನರ್ಸ್ ಎಂಬ ಸುದ್ದಿ ಹಿಂದಿನಿಂದಲೂ ಚರ್ಚೆಯಲ್ಲಿತ್ತು. ಹೀಗಾಗಿಯೇ ವಿಧಾನ ಪರಿಷತ್ ಚುನಾವಣೆಯಲ್ಲಿ ವಿಜಯೇಂದ್ರ ಅವರೇ ಅಡ್ಡ ಮತದಾನ ಮಾಡಿಸಿದ್ದಾರೆ ಎಂಬ ಆರೋಪವೂ ಈಗ ಮುನ್ನೆಲೆಗೆ ಬಂದಿದೆ. ಇದನ್ನು ತಳ್ಳಿಹಾಕಿರುವ ಬಿವೈವಿ, ಧರ್ಮಸ್ಥಳದಲ್ಲಿ ಸ್ಪಷ್ಟನೆ ನೀಡಿದ್ದಾರೆ.ಈ ವೇಳೆ ಅವರೊಂದಿಗೆ ಓರ್ವ ಸಂಸದ, 8 ಶಾಸಕರು ಹಾಗೂ ಇಬ್ಬರು ಎಂಎಲ್‌ಸಿಗಳು ಉಪಸ್ಥಿತರಿದ್ದರು.

ಕೇವಲ ದರ್ಶನಕ್ಕೆ ಬಂದಿದ್ದೇನೆ : ಬಿವೈವಿ

ಧರ್ಮಸ್ಥಳದ ಸನ್ನಿಧಿ ಗೆಸ್ಟ್ ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲಿನ ಎಲ್ಲಾ ಅಪಪ್ರಚಾರಗಳಿಗೂ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಪೂರ್ಣವಿರಾಮ ಇಟ್ಟಿದ್ದಾರೆ. ಡ್ಡ ಮತದಾನದ ಪ್ರಸಂಗ ನನಗೆ ಹಾಗೂ ಲಕ್ಷಾಂತರ ಕಾರ್ಯಕರ್ತರಿಗೆ ತೀವ್ರ ಆಘಾತ ಮತ್ತು ನೋವು ತಂದಿತ್ತು. ನಾನು ಭಾವನಾತ್ಮಕ ವ್ಯಕ್ತಿಯಾಗಿದ್ದರಿಂದಲೇ ಸತ್ಯಾಸತ್ಯತೆ ಹೊರಬರಲಿ ಎಂದು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣದ ಮಾತುಗಳನ್ನಾಡಿದ್ದೆ. ಆದರೆ, ಪಕ್ಷದ ಹಿರಿಯರು ನಮ್ಮ ನಮ್ಮಲ್ಲೇ ಬಗೆಹರಿಸಿಕೊಳ್ಳೋಣ ಎಂದಿದ್ದರಿಂದ ಆ ನಿರ್ಧಾರದಿಂದ ಹಿಂದೆ ಸರಿದು, ಕೇವಲ ದರ್ಶನಕ್ಕೆ ಬಂದಿದ್ದೇನೆ ಎಂದು ವಿಜಯೇಂದ್ರ ವಿವರಿಸಿದ್ದಾರೆ.

ಇದನ್ನೂ ಓದಿ BY Vijayendra visit Dharmasthala: ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ

ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ, ಇವೆಲ್ಲವೂ ಸುಳ್ಳು!

ಇದೇ ವೇಳೆ ತಮ್ಮದೇ ಪಕ್ಷದ ಕೆಲವರು ಮಾಡುತ್ತಿರುವ ಗಂಭೀರ ಆರೋಪಗಳಿಗೆ ಉತ್ತರಿಸಿದ ಅವರು, ನನಗೂ ಮತ್ತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧವಿಲ್ಲ. ಸಿಎಂ ಪರವಾಗಿ ನಾನೇ ಅಡ್ಡ ಮತದಾನಕ್ಕೆ ಸಹಕಾರ ನೀಡಿದ್ದೇನೆ ಎಂದು ನನ್ನ ವಿರುದ್ಧವೇ ಅಪಪ್ರಚಾರ ಮಾಡಲಾಗಿದೆ. ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ, ಇವೆಲ್ಲವೂ ಸುಳ್ಳು. ಕೆಪಿಸಿಸಿ ಅಧ್ಯಕ್ಷರಾಗಿದ್ದವರಿಗೆ ಹಾಗೂ ಸಿಎಂ ಸ್ಥಾನಕ್ಕೆ ನೀಡಬೇಕಾದ ಗೌರವವನ್ನಷ್ಟೇ ನಾನು ನೀಡುತ್ತಿದ್ದೇನೆ. ನನ್ನ ವಿರುದ್ಧ ಅಪಪ್ರಚಾರ ಮಾಡಿದವರಿಗೂ ಆ ದೇವರು ಒಳ್ಳೆಯದು ಮಾಡಲಿ ಎಂದು ಮಾರ್ಮಿಕವಾಗಿ ನುಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us