AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ತಲೆ ಎತ್ತಿದ ವಿದೇಶಿ ಅಡಿಕೆ ಮಾಫಿಯಾ, ಅಕ್ರಮ ಅಮದು ತಡೆ ಕೋರಿ ಪ್ರಧಾನಿಗೆ ಪತ್ರ

ಅಡಿಕೆ ಬೆಳೆಯನ್ನೇ ನಂಬಿರುವ ಕೃಷಿಕರಿಗೆ ಸಂಕಷ್ಟ ಎದುರಾಗಿದೆ. ರಾಜ್ಯದಲ್ಲಿ ವಿದೇಶಿ ಅಡಿಕೆ ದಂಧೆ ನಡೆಯುತ್ತಿದ್ದು ಇದರಿಂದ ನಮ್ಮ ರಾಜ್ಯದ ಅಡಿಕೆಗೆ ಹೊಡೆತ ಬಿದ್ದಿದೆ. ಅಡಿಕೆ ಅಕ್ರಮದ ವಿರುದ್ದ ಕ್ಯಾಂಪ್ಕೋ ಸಂಸ್ಥೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಪತ್ರ ಬರೆದಿದೆ.

ರಾಜ್ಯದಲ್ಲಿ ತಲೆ ಎತ್ತಿದ ವಿದೇಶಿ ಅಡಿಕೆ ಮಾಫಿಯಾ, ಅಕ್ರಮ ಅಮದು ತಡೆ ಕೋರಿ ಪ್ರಧಾನಿಗೆ ಪತ್ರ
ಅಡಿಕೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: ಆಯೇಷಾ ಬಾನು|

Updated on: Feb 29, 2024 | 1:04 PM

Share

ಮಂಗಳೂರು, ಫೆ.29: ಕರಾವಳಿಯಲ್ಲಿ ಅಕ್ರಮ ಅಡಿಕೆ (Arecanut) ದಂಧೆಗೆ ಬೆಳೆಗಾರರು ತತ್ತರಿಸಿದ್ದಾರೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ಅಡಿಕೆ ಬೆಳೆಗಾರರಿಗೆ ಅಡಿಕೆ ಅಕ್ರಮ ದಂಧೆಯ ವ್ಯವಸ್ಥಿತ ಜಾಲದಿಂದ ಭಾರೀ ಸಮಸ್ಯೆ ಎದುರಾಗಿದೆ. ಅಂತಾರಾಜ್ಯಗಳಿಂದ ವಿದೇಶಿ ಅಡಿಕೆ ರಾಜ್ಯದ ಮಾರುಕಟ್ಟೆಗಳಿಗೆ ಅಕ್ರಮವಾಗಿ ಪ್ರವೇಶ ಮಾಡುತ್ತಿದೆ. ಅಡಿಕೆ ಅಕ್ರಮದ ವಿರುದ್ದ ಕ್ಯಾಂಪ್ಕೋ (Campco) ಸಂಸ್ಥೆ ಸಿಡಿದೆದ್ದಿದ್ದು ಅಡಿಕೆ ಅಕ್ರಮ ಆಮದು ತಡೆಗೆ ಕೋರಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್​ಗೆ (Nirmala Sitharaman) ಪತ್ರ ಬರೆದಿದೆ.

ರಾಜ್ಯದಲ್ಲಿ ತಲೆ ಎತ್ತಿದ ವಿದೇಶಿ ಅಡಿಕೆ ಮಾಫಿಯಾ

ಇಂಡೋನೇಷ್ಯಾ, ಬರ್ಮಾ, ಭೂತಾನ್, ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಭಾರತಕ್ಕೆ ಸಾಗಾಟ ಮಾಡಲಾಗುತ್ತಿದೆ. ಈಶಾನ್ಯ ಪ್ರದೇಶಗಳಿಂದ ಕಳಪೆ ಗುಣಮಟ್ಟದ ವಿದೇಶಿ ಅಡಿಕೆಗಳು ಭಾರತಕ್ಕೆ ಎಂಟ್ರಿ ಕೊಡುತ್ತಿವೆ. ಮಂಗಳೂರು ಏರ್ ಪೋರ್ಟ್ ಇಂಟಿಗ್ರೇಟೆಡ್ ಕಾರ್ಗೋ ಟರ್ಮಿನಲ್ ಮೂಲಕವೂ ವಿದೇಶಿ ಅಡಿಕೆ ಬರುತ್ತಿದೆ. ವಿದೇಶಿ ಅಡಿಕೆ ಬೇರೆ ಬೇರೆ ಮಾರ್ಗಗಳಲ್ಲಿ ದೇಶಕ್ಕೆ ನುಸುಳಿ ಏರ್ಪೋರ್ಟ್ ಮೂಲಕ ಮಂಗಳೂರು ಪ್ರವೇಶ ಮಾಡುತ್ತಿದೆ. ಕಸ್ಟಮ್ಸ್ ಸುಂಕ ರಹಿತವಾಗಿ ಶ್ರೀಲಂಕಾದಿಂದ ಅಡಿಕೆ ಅಕ್ರಮವಾಗಿ ಆಮದು ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ ಆಪರೇಟಿವ್(ಕ್ಯಾಂಪ್ಕೊ) ಸಂಸ್ಥೆ ಪ್ರಧಾನಿಗೆ ಪತ್ರ ಬರೆದು ಅಕ್ರಮ ಆಮದು ತಡೆಗೆ ಮನವಿ ಮಾಡಿದೆ.

ಇದನ್ನೂ ಓದಿ: Adike Rate: ಇಂದಿನ ಮಾರುಕಟ್ಟೆ ಧಾರಣೆ | ಅಡಿಕೆ ದರ | ಕೋಕೋ ಬೆಲೆ ಹೀಗಿದೆ

ಅಗರ್ತಲಾದಿಂದ 60 ಮೂಟೆಗಳಲ್ಲಿ 1,519 ಕೆ.ಜಿ ಕೆಂ‍ಪು ತಳಿಯ ಅಡಿಕೆ ವಿಮಾನ ನಿಲ್ದಾಣಕ್ಕೆ ಬಂದಿದೆ. ಅಕ್ರಮ ಅಡಿಕೆ ಅಮದಿನಿಂದ ಕರಾವಳಿಯ ಅಡಿಕೆ ಬೆಳೆಗಾರರು ಕಂಗೆಟ್ಟಿದ್ದಾರೆ. ಅಕ್ರಮ ಅಮದಿನಿಂದ ರಾಜ್ಯದಲ್ಲಿ ಸ್ಥಳೀಯ ಅಡಿಕೆಯ ಭರ್ಜರಿ ಬೆಲೆಯ ನಾಗಲೋಟಕ್ಕೆ ಬ್ರೇಕ್ ಬಿದ್ದಿದೆ. ಅಡಿಕೆ ಬೆಳೆಯನ್ನೇ ನಂಬಿಕೊಂಡ ಕರಾವಳಿಯ ಕೃಷಿಕರಿಗೆ ಭಾರೀ ಹೊಡೆತ ಬಿದ್ದಿದೆ. ಕೆಜಿಗೆ ರೂ.500 ಗಡಿ ದಾಟಿದ್ದ ಅಡಿಕೆ ಈಗ 300ಕ್ಕೆ ಇಳಿದಿದೆ.

ಕರಾವಳಿ ಭಾಗದ ಉತ್ತಮ ಗುಣಮಟ್ಟದ ಅಡಿಕೆಗೆ ಉತ್ತರ ಭಾರತದಲ್ಲಿ ತೀವ್ರ ಬೇಡಿಕೆ ಇದೆ. ಆದರೆ ಕಡಿಮೆ ಬೆಲೆಗೆ ಬರ್ಮಾ ಹಾಗೂ ಇತರೆ ದೇಶದಿಂದ ಅಡಿಕೆ ಆಮದು ಆಗುತ್ತಿದ್ದು ಕರಾವಳಿಯ ಅಡಿಕೆಯೊಂದಿಗೆ ಅದನ್ನು ಬೆರೆಸಿ ಮಾರಾಟ ಮಾಡಲಾಗುತ್ತಿದೆ. ಇದರಿಂದ ಬೆಲೆಯೊಂದಿಗೆ ಕರಾವಳಿಯ ಅಡಿಕೆಯ ಗುಣಮಟ್ಟವೂ ಕುಸಿಯುತ್ತಿದೆ. ಗುಣಮಟ್ಟ ವೈಪರಿತ್ಯದೊಂದಿಗೆ ಬೇಡಿಕೆಯೂ ಇಳಿಮುಖವಾಗುವ ಆತಂಕ ಎದುರಾಗಿದೆ. ಕೊರೊನಾ ಸಂದರ್ಭ ಅಡಿಕೆ ಆಮದು ಸ್ಥಗಿತವಾಗಿದ್ದ ಹಿನ್ನಲೆ ಅಡಿಕೆ ಬೆಲೆ ಧಿಡೀರ್ ಏರಿಕೆಯಾಗಿತ್ತು. ಬೆಲೆ ಏರಿಕೆ ಹಿನ್ನಲೆ ಬಹುಪಾಲು ಎಲ್ಲ ಭಾಗಗಳಲ್ಲಿಯೂ ಕೃಷಿಕರು ಅಡಿಕೆ ಬೆಳೆದಿದ್ದರು. ಆದರೆ ಸದ್ಯದ ಸ್ಥಿತಿಯಲ್ಲಿ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ