ಮಂಗಳೂರು: ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿಯಾಗಿ (Car Accident) ಮೂವರು ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ (Sullia) ತಾಲೂಕಿನ ಅಡ್ಕಾರು ಎಂಬಲ್ಲಿ ಗುರುವಾರ ನಡೆದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿಗಳಾದ ಕಾರ್ಮಿಕರಾದ ಚಂದ್ರಪ್ಪ, ರೇಗಪ್ಪ, ಮಾಂತೇಶ್ ಮೃತ ಕಾರ್ಮಿಕರಾಗಿದ್ದಾರೆ. ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಡಿಕ್ಕಿಯಾಗಿದೆ. ಗಂಬೀರ ಗಾಯಗೊಂಡಿದ್ದ ಮೂವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.
ಕಾರ್ಮಿಕರಿಗೆ ಡಿಕ್ಕಿ ಹೊಡೆದ ಕಾರು ಪಕ್ಕದಲ್ಲಿ ನಿಂತಿದ್ದ ಲಾರಿಗೂ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆ ಸಂಬಂದ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಬಳಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿದಂತೆ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿಯಿಂದ ಸವಣಾಲು ಕಡೆಗೆ ಪ್ರಯಾಣಿಸುತ್ತಿದ್ದ ರಾಕೇಶ್ (24), ಸವಣಾಲು ಕಡೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ಥಾಮಸ್ ಕಾರ್ಲೋ (62) ಮತ್ತು ಬೆನೆಡಿಕ್ಟ್ ಫೆರ್ನಾಂಡಿಸ್ (54) ಗಾಯಗೊಂಡವರು. ಮೂವರ ತಲೆಗೆ ಗಂಭೀರ ಗಾಯಗಳಾಗಿವೆ.
ಇದನ್ನೂ ಓದಿ: ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು
ಮೂರು ವರ್ಷದ ಜೀತ್ ಮೆಲ್ರನ್ ಪಿಂಟೋ ಕೂಡ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 5:03 pm, Thu, 31 August 23