ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್

ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸದ್ಯ ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಹರಿಬಿಟ್ಟ ಯುವಕ ಅರೆಸ್ಟ್
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಆಯೇಷಾ ಬಾನು

Updated on:Jan 17, 2024 | 8:24 AM

ಮಂಗಳೂರು, ಜ.17: ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಆರೋಪಿ ಅರೆಸ್ಟ್ ಆಗಿದ್ದಾನೆ. ದೂರು ನೀಡಿದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಮೂಲದ ಅನಿಲ್ ಕುಮಾರ್ ಬಂಧಿತ ಆರೋಪಿ. ಈತ 12 ವರ್ಷದಿಂದ ಸುರತ್ಕಲ್ ನಲ್ಲಿ ವಾಸವಾಗಿದ್ದಾನೆ.

ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡಿತ್ತಿರೋ ಆರೋಪಿ ಅನಿಲ್ ಕುಮಾರ್, ಕೆಟ್ಟ ಪದಗಳಲ್ಲಿ ನಿಂದಿಸಿ ವಿಡಿಯೋ ಹರಿಬಿಟ್ಟದ್ದ. ಈ ಘಟನೆ ಸಂಬಂಧ ದಕ್ಷಿಣ ಕನ್ನಡ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ಡಿಸಿಪಿ ಸಿದ್ದಾರ್ಥ್ ಗೋಯಲ್ ಅವರು ಎನ್​ಎಸ್​ಯುಐ ದೂರು ಸ್ವೀಕರಿಸಿದ್ದರು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ CR.6/24, U/S 153A, 505(I)(C) IPC ಸಕ್ಷನ್ 504 ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

ಘಟನೆ ಹಿನ್ನೆಲೆ

ಪಡಿತರ ಚೀಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಮತ್ತು ಮಂಗಳೂರಿನಲ್ಲಿ ಸ್ಥಳೀಯವಾಗಿ ಸರ್ಕಾರದ ವಿವಿಧ ಯೋಜನೆಗಳ ಲಾಭ ಪಡೆಯಲು ಸಾಧ್ಯವಾಗದ ಹಿನ್ನೆಲೆ ಕೋಪಗೊಂಡ ಯುವಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟಿದ್ದ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ದ ಅಶ್ಲೀಲವಾಗಿ ಕನ್ನಡದಲ್ಲಿ ನಿಂದಿಸಿ ಕೊನೆಗೆ ತುಳುವಿನಲ್ಲಿ ಮಾತನಾಡಿದ್ದ. ಹೀಗಾಗಿ ಈ ಸಂಬಂಧ ಜಿಲ್ಲಾ NSUI ಘಟಕದ ಅಧ್ಯಕ್ಷ ಸುಹಾನ್ ಆಳ್ವಾ ಅವರು ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದ್ದರು. ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಹಾಸನದಲ್ಲಿ ಮತ್ತೊಂದು ಕಾಡಾನೆ ಸೆರೆ, ಮುಂದುವರೆದ ಕಾರ್ಯಾಚರಣೆ

ಇನ್ನು ಕಳೆದ ನವೆಂಬರ್​ನಲ್ಲಿ ಬೆಳ್ತಂಗಡಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿಎಂ ವಿರುದ್ಧ ಅವಹೇಳನಕಾರಿ ಆಡಿಯೋ ಹರಿಬಿಟ್ಟಿದ್ದರು. ಬಳಿಕ ಅವರ ಮೇಲೆ ಎಫ್​ಐಆರ್​ ದಾಖಲಾಗಿತ್ತು. ಇದಕ್ಕೂ ಹಿಂದೆ ಸಿಎಂ, ಡಿಸಿಎಂ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಇವರ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೆನ್ ಪೊಲೀಸ್ ಠಾಣೆಯಲ್ಲಿ ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:49 am, Wed, 17 January 24

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ