AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಡ್ರಗ್ ಪೆಡ್ಲರ್​ನನ್ನು ಬಂಧಿಸಿದ ಸಿಸಿಬಿ, 2.50 ಲಕ್ಷ ಮೌಲ್ಯದ ಮಾದಕವಸ್ತು ವಶಕ್ಕೆ

ಬೆಂಗಳೂರಿನಿಂದ ಮಾದಕವಸ್ತುಗಳನ್ನು ಖರೀದಿಸಿ ಮಂಗಳೂರು ಮತ್ತು ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ಎರಡೂವರೆ ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಲಾಗಿದೆ.

ಮಂಗಳೂರು: ಡ್ರಗ್ ಪೆಡ್ಲರ್​ನನ್ನು ಬಂಧಿಸಿದ ಸಿಸಿಬಿ, 2.50 ಲಕ್ಷ ಮೌಲ್ಯದ ಮಾದಕವಸ್ತು ವಶಕ್ಕೆ
ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: Rakesh Nayak Manchi

Updated on: Aug 19, 2023 | 7:05 PM

ಮಂಗಳೂರು, ಆ.19: ಬೆಂಗಳೂರಿನಿಂದ ಮಾದಕ ವಸ್ತು ಖರೀದಿಸಿ ಮಂಗಳೂರು (Mangaluru) ಮತ್ತು ಕೇರಳದಲ್ಲಿ ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್​ನನ್ನು ಸಿಸಿಬಿ (CCB) ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ವಿಟ್ಲ ನಿವಾಸಿ ಹಸನ್ ಸಾದಿಕ್ ಅಲಿಯಾಸ್ ಬ್ಲೇಡ್ ಸಾದಿಕ್ (35) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಎಸಿಪಿ ಪಿ.ಎ. ಹೆಗ್ಡೆ ನೇತೃತ್ವದ ಸಿಸಿಬಿ ಪೊಲೀಸರ ತಂಡ ಬಂಧಿಸಿದೆ.

ಬಂಧಿತ ಆರೋಪಿಯಿಂದ 2,50,000 ರೂ. ಮೌಲ್ಯದ 50 ಗ್ರಾಂ ಎಂಡಿಎಂಎ ಮಾದಕ ದ್ರವ್ಯ, ಮಾರುತಿ 800 ಕಾರು, ಮೊಬೈಲ್ ಫೋನ್ ಮತ್ತು ಒಟ್ಟು 3,65,500 ರೂ. ಮೌಲ್ಯದ ಡಿಜಿಟಲ್ ತೂಕದ ಮಾಪಕವನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಅಲ್ಲದೆ, ಆರೋಪಿ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾದಕ ದ್ರವ್ಯ ದಂಧೆಯಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನಷ್ಟು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

ಇದನ್ನೂ ಓದಿ: ಡ್ರಗ್ಸ್ ವಿರುದ್ಧ ಮುಂದುವರಿದ ಮಂಗಳೂರು ಪೊಲೀಸ್ ಕಾರ್ಯಾಚರಣೆ; 10 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ

ಸಾದಿಕ್ ವಿರುದ್ಧ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಂಟು ಹಲ್ಲೆ ಮತ್ತು ಬೆದರಿಕೆ ಮತ್ತು ನಾಲ್ಕು ಕೊಲೆ ಯತ್ನ ಪ್ರಕರಣಗಳು, ಪುತ್ತೂರಿನಲ್ಲಿ ಎರಡು ಕೊಲೆ ಯತ್ನ ಪ್ರಕರಣಗಳು, ಉಪ್ಪಿನಂಗಡಿಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲ್ಲೆ ಪ್ರಕರಣ, ಕಾವೂರಿನಲ್ಲಿ ದರೋಡೆ ಯತ್ನ. ಹೆಬ್ಬಾಳ, ಬೆಂಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ದಂಧೆ ಪ್ರಕರಣಗಳು ದಾಖಲಾಗಿವೆ.

ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಬಂಧನಕ್ಕೆ ವಾರೆಂಟ್ ಕೂಡ ಹೊರಡಿಸಲಾಗಿತ್ತು. ಸದ್ಯ, ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ, ಪೊಲೀಸ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಎಚ್.ಎಂ, ಪಿಎಸ್​ಐ ರಾಜೇಂದ್ರ ಬಿ., ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ.ವಿ ಮತ್ತು ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್