AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ 49 ಲಕ್ಷ ಹಣ ಕಳೆದುಕೊಂಡ ಪುರೋಹಿತ, ವಂಚಕ ದಂಪತಿಯ ಬಂಧಿಸಿದ ಸಿಸಿಬಿ ಪೊಲೀಸರು

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿದ್ದಾರೆ.

ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ 49 ಲಕ್ಷ ಹಣ ಕಳೆದುಕೊಂಡ ಪುರೋಹಿತ, ವಂಚಕ ದಂಪತಿಯ ಬಂಧಿಸಿದ ಸಿಸಿಬಿ ಪೊಲೀಸರು
ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ 49 ಲಕ್ಷ ಹಣ ಕಳೆದುಕೊಂಡ ಪುರೋಹಿತ, ವಂಚಕ ದಂಪತಿಯ ಬಂಧಿಸಿದ ಸಿಸಿಬಿ ಪೊಲೀಸರು
TV9 Web
| Updated By: ಆಯೇಷಾ ಬಾನು|

Updated on: Jan 21, 2022 | 2:00 PM

Share

ಮಂಗಳೂರು: ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತರನ್ನು ಕರೆಯಿಸಿ ಹನಿಟ್ರ್ಯಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರ್ಯಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿ ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆಯನ್ನು ಮಾಡಿಕೊಡಬೇಕೆಂದು ಪುರೋಹಿತರನ್ನು ಮನೆಗೆ ಕರೆಯಿಸಿಕೊಂಡು ಈ ವೇಳೆ ಪುರೋಹಿತರ ಜೊತೆಗಿರುವ ಫೋಟೋ ಮತ್ತು ವಿಡಿಯೋವನ್ನು ತೆಗೆದು ನಂತರ ಈ ವಿಡಿಯೋ ಹಾಗೂ ಫೋಟೋವನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಹಲವು ಬಾರಿ ಪಿರ್ಯಾದಿದಾರರನ್ನು ಹೆದರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ ಹಣದ ಬೇಡಿಕೆ ಇಟ್ಟು ರೂ 15 ಲಕ್ಷ ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಂದ ಹಣ ಪಡೆದಿದ್ದರು. ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ಆಧರಿಸಿ ಪೊಲೀಸರು ತನಿಖೆ ಶುರು ಮಾಡಿದ್ದರು.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತ್ರತ್ವದ ತಂಡ ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಭವ್ಯ ಮತ್ತು ಕುಮಾರ್ ಅಲಿಯಾಸ್ ರಾಜು ದಂಪತಿಯನ್ನು ಬಂಧಿಸಿದೆ.

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ. ಆರೋಪಿಗಳಿಂದ ರೂ 37,000/- ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000/-ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರೆದಿದೆ.

ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರ, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್ ನು ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ಫಿರ್ಯಾದಿದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿದ್ದಾನೆ.

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿದ್ದಾರೆ. ಅಲ್ಲದೆ ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದಾರೆ. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ. ಆರೋಪಿಗಳ ಪೈಕಿ ಭವ್ಯಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೋಂಡಿದ್ದರು.

ಇದನ್ನೂ ಓದಿ: ಹಿಂದೂ ಮಹಾಸಾಗರದ ಮೇಲೆ ರೇಡಿಯೊ ಬ್ಲ್ಯಾಕೌಟ್​​ಗೆ ಕಾರಣವಾಗಲಿದೆ ಸೂರ್ಯನ ಸೌರ ಜ್ವಾಲೆ

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!